(Mobile Ban) ಬೆಂಗಳೂರು : ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಶಾಲಾ ಅವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ದಿನೇ ದಿನೇ ಮೊಬೈಲ್ ಉಪಯೋಗವು ಶಾಲಾ ಕಾಲೇಜುಗಳಲ್ಲಿ ಹೆಚ್ಚಾಗುತ್ತಿದ್ದು, ಶಾಲಾ ಕಾಲೇಜುಗಳಲ್ಲಿನ ಶೈಕ್ಷಣಿಕ ವಾತಾವರಣವನ್ನು ಸಹ ಹದಗೆಡಿಸುತ್ತಿದೆ, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆ.
ವಿದ್ಯಾರ್ಥಿಗಳು ತರಗತಿಯಲ್ಲಿ ಮೊಬೈಲ್ ನಲ್ಲಿ ಹಾಡು ಕೇಳುವುದು, ಆಟವಾಡುವುದು ಹಾಗೂ ಚಾಟಿಂಗ್ ಮಾಡುತ್ತಿದ್ದು, ಇದರಿಂದಾಗಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಹಾಗೆಯೇ ಅನೇಕ ಪೋಷಕರು ಸಹ ಈ ಕುರಿತು ಆತಂಕ ವ್ಯಕ್ತಪಡಿಸಿರುತ್ತಾರೆ.
ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಈ ಎಲ್ಲಾ ಅಂಶಗಳು ಸಭೆಯಲ್ಲಿ ಚರ್ಚೆಯಾಗಿದ್ದು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮೊಬೈಲ್ ಉಪಯೋಗವನ್ನು ನಿಷೇದಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ಈ ಸಭೆಯಲ್ಲಿ ವ್ಯಕ್ತವಾಗಿರುತ್ತದೆ. ಆದ್ದರಿಂದ ಸರ್ಕಾರ ಈ ಕೆಳಕಂಡಂತೆ ಆದೇಶಿಸಿದೆ.
ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ. ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು. ಈ ನಿಷೇದವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಅಧಿಕಾರ ವ್ಯಾಪ್ತಿ ನಿಗಧಿಪಡಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






