Mobile Planetarium: ಗ್ರಾಮೀಣ ಶಾಲಾ ಅಂಗಳಕ್ಕೆ ಸಂಚಾರಿ ತಾರಾಲಯ | ಏನಿದು?

(Mobile Planetarium:) ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಾರಾಲಯ, ಬಾಹ್ಯಾಕಾಶ ಪ್ರಯೋಗಾಲಯಗಳಂತಹ ಸವಲತ್ತುಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ, ಸಂಚಾರಿ ತಾರಾಲಯಗಳನ್ನು ಒದಗಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ


ತಾರಾಲಯಗಳಂತಹ ಸವಲತ್ತುಗಳು ನಗರಗಳಿಗೆ ಸೀಮಿತವಾಗಿತ್ತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅದು ಸುಲಭವಾಗಿ ಲಭ್ಯವಿರಲಿಲ್ಲ. ಈ ಅಂತರವನ್ನು ಹೋಗಲಾಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಗುರಿ. ಈ ಯೋಜನೆ ಈಗಾಗಲೇ 17 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪಿದೆ ಎಂದರು.


ನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!


ಗ್ರಾಮೀಣ ಶಾಲೆ ಅಂಗಳದಲ್ಲಿ ತಾರಾಲಯ:
* ಈಗಾಗಲೇ ರಾಜ್ಯದಲ್ಲಿ 11 ಡಿಜಿಟಲ್ ಮೊಬೈಲ್ ಪ್ಲಾನೆಟೋರಿಯಂ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಹೈಸ್ಕೂಲ್ಗಳಲ್ಲಿ 46 ಸಾವಿರಕ್ಕೂ ಹೆಚ್ಚು ಪ್ರದರ್ಶನ ನೀಡಿದೆ.
* ರಾಜ್ಯದಾದ್ಯಂತ 16.75 ಲಕ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.
* ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಸಂಚಾರಿ ಡಿಜಿಟಲ್ ತಾರಾಲಯ ಸಕ್ರಿಯವಾಗಿದ್ದು, ಶಾಲಾ ಮಕ್ಕಳಲ್ಲಿ ವಿಜ್ಞಾನದ ಆಸಕ್ತಿಯನ್ನು ಬಿತ್ತುವಲ್ಲಿ ಯಶಸ್ವಿಯಾಗಿವೆ.
* ಭವಿಷ್ಯದಲ್ಲಿ ಗ್ರಾಮೀಣ – ನಗರ ಎಂಬ ಶೈಕ್ಷಣಿಕ ಅಂತರ ಕಡಿಮೆಯಾಗಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಈ ಯೋಜನೆ ನೆರವಾಗಲಿದೆ.

Mobile Planetarium: ಗ್ರಾಮೀಣ ಶಾಲಾ ಅಂಗಳಕ್ಕೆ ಸಂಚಾರಿ ತಾರಾಲಯ | ಏನಿದು?
Mobile Planetarium: ಗ್ರಾಮೀಣ ಶಾಲಾ ಅಂಗಳಕ್ಕೆ ಸಂಚಾರಿ ತಾರಾಲಯ | ಏನಿದು?

ಇತ್ತೀಚಿನ ಜನಪ್ರಿಯ ಸುದ್ದಿಗಳು (Mobile Planetarium:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ