Tuesday, April 23, 2024
Homeಸುದ್ದಿಗಳುದೇಶದೆಹಲಿಯಲ್ಲಿ ಮೋದಿಯವರನ್ನು ಬೇಟಿ ಮಾಡಿದ ಸಿಎಂ : ಏಮ್ಸ್ ಮಂಜೂರು ಮಾಡಲು ಮನವಿ

ದೆಹಲಿಯಲ್ಲಿ ಮೋದಿಯವರನ್ನು ಬೇಟಿ ಮಾಡಿದ ಸಿಎಂ : ಏಮ್ಸ್ ಮಂಜೂರು ಮಾಡಲು ಮನವಿ

ನವದೆಹಲಿ: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವAತಹ ಬಸವರಾಜ ಬೊಮ್ಮಾಯಿಯವರು ಜು.30 ರಂದು ನವದೆಹಲಿಗೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸಿಎಂ ಆದ ನಂತರ ಬೊಮ್ಮಾಯಿಯವರು ಇದೇ ಮೊದಲ ಬಾರಿಗೆ ದೆಹಲಿಗೆ ಬೇಟಿ ನೀಡಿದ್ದಾರೆ.

ಬಿಜೆಪಿ ವರಿಷ್ಠರ ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನೂ ಭೇಟಿ ಮಾಡಿದ್ದು ರಾಜ್ಯದ ಸಂಸದರಿಗೆ ಔತಣ ಕೂಟವನ್ನು ಏರ್ಪಡಿಸಿದ್ದರು.

ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಯವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿವಿಧ ವಿಷಯಗಳನ್ನು ಕುರಿತು ಚರ್ಚಿಸಿದರು.

ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮೋದಿಯ ಬಳಿ ಮನವಿಯನ್ನು ಮಾಡಿದರು.

ಹಾಗೂ ಕಲಬುರಗಿಯ ಇಎಸ್‌ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಮನವಿಯನ್ನು ಸಲ್ಲಿಸಿದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಶುಭಕೋರಿದಂತಹ ಪ್ರಧಾನಿ ಮೋದಿಯವರು ಕರ್ನಾಟಕದ ಅಭಿವೃದ್ಧಿಗೆ ಎಲ್ಲ ರೀತಿಯ ಅಗತ್ಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು.

Most Popular

Recent Comments