ಬೆಂಗಳೂರು: ಜನರ ಕಷ್ಟಗಳನ್ನು ತಿಳಿಯದ ಹೆಬ್ಬೆಟ್ ಗಿರಾಕಿ ಮೋದಿಯಿಂದ ದೇಶ ನಲುಗುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಕಿಡಿಕಾರಿದೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿರುವ ಜನರಿಗೆ ತೊಂದರೆಯಾಗುತ್ತಿದೆ.
ಬಿಜೆಪಿ ಸರ್ಕಾರ ಜನರನ್ನು ದೋಚಿ ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆಯನ್ನು ಹಮ್ಮಿಕೊಂಡಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ ಇಂದು ಪೆಟ್ರೋಲ್ ₹66, ಡೀಸೆಲ್ ₹55 ಕ್ಕೆ ದೊರಕುತ್ತಿತ್ತು. ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಕೇಂದ್ರ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಕಾಂಗ್ರೆಸ್, ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ. ವಸ್ತು, ತೈಲದ ಬೆಲೆ ಏರಿಕೆಯ ಬಗ್ಗೆ -ಮೌನ, ಕಾಶ್ಮೀರದ ದಳ್ಳುರಿಗೆ -ಮೌನ, ಚೀನಾ ಅತಿಕ್ರಮಣಕ್ಕೆ -ಮೌನ, ರೈತರ ಹತ್ಯೆಗೆ -ಮೌನ, ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ, ನಿರುದ್ಯೋಗದ ಬಗ್ಗೆ -ಮೌನ, ಪತ್ರಿಕಾಗೋಷ್ಠಿಗೆ -ಮೌನ ಈ ಹೆಬ್ಬೆಟ್ ಗಿರಾಕಿ ಮೋದಿ ಎಂಬುದಾಗಿ ಹೇಳಿದೆ.
ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ನರೇಂದ್ರ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಅವರು ಓದಲಿಲ್ಲ, ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದಂತಹ ಮೋದಿ ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ. ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.