Money Guide: ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌

(Money Guide) ಭಾರತದಲ್ಲಿ ಡಿಜಿಟಲ್ ಪೇಮೆಂಟ್ ಜನಪ್ರಿಯಾಗಿದ್ದು, ಗೂಗಲ್ ಪೇ ಬಳಕೆದಾರರ ಸಂಖ್ಯೆ ಹೆಚ್ಚಿದೆ. ಈ ಕಾರಣದಿಂದ ಇದೀಗ ಗೂಗಲ್ ಭಾರತದಲ್ಲಿ ತನ್ನ ವ್ಯಾಲೆಟ್ ಸೇವೆಯನ್ನು ಪ್ರಾರಂಭಿಸಿದೆ. ಹಾಗಾದರೆ ಗೂಗಲ್ ವ್ಯಾಲೆಟ್ ಎಂದರೇನು ಇದು ಗೂಗಲ್ ಪೇಗಿಂತ ಹೇಗೆ ಭಿನ್ನ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ


ಗೂಗಲ್ ವ್ಯಾಲೆಟ್ ಹೇಗೆ ಕೆಲಸ ನಿರ್ವಹಿಸುತ್ತದೆ:
ವ್ಯಾಲೆಟ್ ನಂತೆಯೇ (ಪರ್ಸ್) ಕಾರ್ಯ ನಿರ್ವಹಿಸಲಿದೆ. ಈ ಆ್ಯಪ್ ನ ಮೂಲಕ ಹಣ ಪಾವತಿ ಮಾಡಲು ಸಾಧ್ಯವಿಲ್ಲ. ಬದಲಾಗಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಲಾಯಲ್ಟಿ ಕಾರ್ಡ್, ಗಿಫ್ಟ್ ಕಾರ್ಡ್, ಬಸ್, ಮೆಟ್ರೋ ಟಿಕೆಟ್ ಸೇರಿದಂತೆ ಇತರ ಡಿಜಿಟಲ್ ಕಾರ್ಡ್ಗಳನ್ನು ಸ್ಟೋರ್ ಮಾಡಿ ಇಟ್ಟುಕೊಳ್ಳಬಹುದಾಗಿದೆ. ಸರಳವಾಗಿ ಹೇಳುವುದಾದರೆ ಗೂಗಲ್ ವ್ಯಾಲೆಟ್ ಭಾರತದಲ್ಲಿ ಈಗಾಗಲೇ ಲಭ್ಯವಿರುವ ಡಿಜಿಲಾಕರ್‌ ನಂತೆಯೇ ಕಾರ್ಯ ನಿರ್ವಹಿಸಲಿದೆ.


ಇದನ್ನೂ ಓದಿ: ಮಳೆ ಹಾನಿ; ಗ್ರಾಹಕರ ಸಮಸ್ಯೆ ಪರಿಹಾರಕ್ಕೆ 8 ಜಿಲ್ಲೆಗೆ ವಾಟ್ಸಪ್ ಸಂಖ್ಯೆ; ಜಿಲ್ಲಾವಾರು ನಂಬರ್ ಇಲ್ಲಿದೆ


ಇದು ಅತ್ಯಂತ ಸುರಕ್ಷಿತ ಖಾಸಗಿ ಡಿಜಿಟಲ್ ವ್ಯಾಲೆಟ್ ಎಂದು ಕಂಪನಿ ಹೇಳಿದೆ. ಗೂಗಲ್ 2022 ರಲ್ಲಿ ಅಮೇರಿಕಾದಲ್ಲಿ ಈ ಡಿಜಿಟಲ್ ವ್ಯಾಲೆಟ್ ಅಪ್ಲಿಕೇಶನ್ ಅನ್ನು ಆರಂಭಿಸಿತ್ತು. ಇದಾಗಿ ಸುಮಾರು 2 ವರ್ಷಗಳ ಬಳಿಕ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದೆ. ಗೂಗಲ್ ವ್ಯಾಲೆಟ್ ಇದೀಗ ಡೌನ್ ಲೋಡ್ ಮಾಡಲು ಗೂಗಲ್ ಪ್ಲೇ ಸ್ಟೋರ್‌ ನಲ್ಲಿ ಉಚಿತವಾಗಿ ಲಭ್ಯವಿದೆ. ಸದ್ಯಕ್ಕೆ ಗೂಗಲ್ ತನ್ನ ವ್ಯಾಲೆಟ್ ಅನ್ನು ಭಾರತದಲ್ಲಿನ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಬಿಡುಗಡೆ ಮಾಡಿದೆ.


ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತರಿಗೆ ತಲಾ 3,000 ರೂ ಜಮೆ; ಯಾರಿಗೆ ಇಲ್ಲಿದೆ ನೋಡಿ ಡಿಟೈಲ್ಸ್


ಬಳಸುವುದು ಹೇಗೆ?
* ಗೂಗಲ್‌ ಪ್ಲೇ ಸ್ಟೋರ್‌ (Play Store)ಗೆ ಹೋಗಿ ಗೂಗಲ್‌ ವ್ಯಾಲೆಟ್‌ (Google Wallet) ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿ.
* ಅಪ್ಲಿಕೇಷನ್‌ ಓಪನ್‌ ಮಾಡಿ Add to Wallet ಆಯ್ಕೆನ್ನು ಸೆಲೆಕ್ಟ್‌ ಮಾಡಿ.
* ಈಗ ನೀವು ಫೋಟೊ, ಲಾಯಲ್ಟಿ, ಗಿಫ್ಟ್‌ ಕಾರ್ಡ್‌ ಮತ್ತು ಟ್ರಾನ್ಸ್‌ ಪೋರ್ಟ್‌ ಪಾಸ್‌ ಎನ್ನುವ ನಾಲ್ಕು ಆಯ್ಕೆಯನ್ನು ಪಡೆಯುತ್ತೀರಿ.
* ಬಾರ್ ಕೋಡ್ ಅಥವಾ ಕ್ಯೂಆರ್ ಕೋಡ್ ಬಳಸಿ ಪಾಸ್ ರಚಿಸಲು ಫೋಟೊ ಆಯ್ಕೆ ಮಾಡಿ.
* ವಿವಿಧ ಬ್ರ್ಯಾಂಡ್‌ ಗಳಿಂದ ನಿಮ್ಮ ಲಾಯಲ್ಟಿ ಪಾಯಿಂಟ್‌ ಗಳನ್ನು ಸೇರಿಸಲು ಲಾಯಲ್ಟಿ ಆಯ್ಕೆ ಬಳಸಿ.
* ಅದೇ ರೀತಿ ಗಿಫ್ಟ್‌ ಕಾರ್ಡ್ ಮತ್ತು ಟ್ರಾನ್ಸ್‌ ಪೋರ್ಟ್‌ ಪಾಸ್‌ ಅನ್ನು ನಿಮ್ಮ ವ್ಯಾಲೆಟ್‌ ಗೆ ಸೇರಿಸಿ.


ಇದನ್ನೂ ಓದಿ: ಕಾಫಿ ಮಂಡಳಿಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


(ಗಮನಿಸಿ ಈ ಆ್ಯಪ್‌ ನಲ್ಲಿ ಮೊದಲೇ ಹೇಳಿದಂತೆ ನಗದು ಪಾವತಿ ಸಾಧ್ಯವಿಲ್ಲ. ಅದಕ್ಕಾಗಿ ಗೂಗಲ್‌ ಪೇಯನ್ನು ಬಳಸಿ.)

Money Guide: ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌
Money Guide: ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ