ಬೆಳಗಾವಿ: ಕುಂದಾನಗರಿಯಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ನೈತಿಕ ಪೊಲೀಸ್ಗಿರಿ ನಡೆಸಿದ ಎ1 ಆರೋಪಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ದಾವತ್ ಖತೀಬ್, ಅಯುಬ್, ಯುಸೂಫ್ ಪಠಾಣ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಆಟೋ ಚಾಲಕನಾಗಿರುವ ದಾವತ್ ಖತೀಬ್ ಪ್ರಕರಣದ ಎ1 ಆರೋಪಿ ಅಕ್ಟೋಬರ್ 13ರಂದು ರಾಯಬಾಗ ಮೂಲದ ಹಿಂದೂ ಯುವಕ ಹಾಗೂ ಹುಕ್ಕೇರಿ ಮೂಲದ ಮುಸ್ಲಿಂ ಯುವತಿ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಇಳಿದು ಆಟೋ ಹತ್ತಿದ್ದರು. ಈ ಸಮಯದಲ್ಲಿ ಯಾವುದಾದರೂ ಉದ್ಯಾನವನಕ್ಕೆ ಕರೆದುಕೊಂಡು ಹೋಗುವಂತೆ ಚಾಲಕನಿಗೆ ಸೂಚಿಸಿದ್ದರು. ಹಿಂದೂ ಯುವಕ ಹಾಗೂ ಮುಸ್ಲಿಂ ಮಹಿಳೆ ಎಂಬ ಕಾರಣಕ್ಕೆ, ಆಟೋ ಚಾಲಕ ದಾವತ್ ಆಟೋವನ್ನು ಉದ್ಯಾನವನದ ಬದಲಾಗಿ ನಿರ್ಜನ ಪ್ರದೇಶಕ್ಕೆ ತಿರುಗಿಸಿದ್ದಾನೆ.
ಬಳಿಕ ಅಮನ ನಗರದ ನಿರ್ಜನ ಹೊಲಕ್ಕೆ ಆ ಯುವಕ, ಯುವತಿಯರನ್ನು ಕರೆದುಕೊಂಡು ಹೋಗಿದ್ದಾರೆ. ನಂತರ 20 ಮಂದಿ ಆರೋಪಿಗಳಿಗೆ ಕರೆಮಾಡಿ ತಿಳಿಸಿದ್ದಾನೆ ನಂತರ ಆ ಆರೋಪಿಗಳು ಸ್ಥಳಕ್ಕೆ ಬಂದು ಆ ಇಬ್ಬರ ಮೇಲೆ ರಾಡ್ ಹಾಗೂ ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆಯನ್ನು ನಡೆಸಿದ್ದಾರೆ. ಜೊತೆಗೆ ಅವರಿಬ್ಬರ ಬಳಿಯಿದ್ದ 20 ಸಾವಿರ ಮೌಲ್ಯದ ಮೊಬೈಲ್, 50 ಸಾವಿರ ನಗದು, ಆಧಾರ್ ಕಾರ್ಡ್, ಎಟಿಎಂ ಕಾರ್ಡ್ ನನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದ ಯುವತಿ ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಪಿ ವಿಕ್ರಂ ಆಮ್ಟೆ, ಎ1 ಆರೋಪಿ ಸೇರಿ ಮೂವರನ್ನು ಬಂಧಿಸಿದ್ದಾರೆ. ಇನ್ನುಳಿದ 17 ಜನರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಈ ಪ್ರಕರಣದ ಕೀಡಿಗೇಡಿಗಳ ವಿರುದ್ಧ ಐಪಿಸಿ 1860 ಅಡಿ 143, 147, 148, 323, 324, 307, 354, 395, 504, 506, 149 ಅಡಿ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ದಾಖಲಿಸಲಾಗಿದೆ