mudigere: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ

mudigere: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ವರದಿಯಾಗಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ದಿಢೀರನೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ!

ಈ ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದಾರೆ. ಮೂಡಿಗೆರೆ ಪ್ರಜ್ವಲ್ ಎಂಬಾತ ಸಿದ್ದರಾಮಯ್ಯ ಅವರ ಹೆಸರು ಹಾಕಿ ತಿಥಿ ಕಾರ್ಡ್ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ಗಳನ್ನು ತನ್ನ ಫೇಸ್‌ಬುಕ್ ಖಾತೆ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದನು. ಅಲ್ಲದೇ ಈ ಅವಹೇಳನಕಾರಿ ಪೋಸ್ಟ್ ಗಳನ್ನು ಹಿಂದೂ ಸಾಮ್ರಾಜ್ಯ ಮೂಡಿಗೆರೆ ಎಂಬ ಫೇಸ್‌ಬುಕ್ ಖಾತೆಯಲ್ಲೂ ಹಂಚಿಕೊಂಡಿದ್ದ.


ಇತ್ತೀಚಿನ ಜನಪ್ರಿಯ ಸುದ್ದಿಗಳು   


mudigere: ಈ ಪೋಸ್ಟ್ ಗಳನ್ನು ಗಮನಿಸಿದ ಕಾಂಗ್ರೆಸ್ ಮುಖಂಡರು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಈತನ ವಿರುದ್ಧ ಚಿಕ್ಕಮಗಳೂರು ನಗರದ ಸೆನ್ ಪೊಲೀಸ್ ಠಾಣೆಗೂ ದೂರು ನೀಡಿರುವ ಕಾಂಗ್ರೆಸ್ ಮುಖಂಡರು, ಸಿಎಂ ಸಿದ್ದರಾಮಯ್ಯ ಅವರ ತಿಥಿ ಕಾರ್ಡ್ಗಳನ್ನು ಸೃಷ್ಟಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅವಹೇಳನ ಮಾಡಲಾಗಿದೆ. ಈ ಮೂಲಕ ಸಮಾಜ ಸ್ವಾಸ್ಥ್ಯ ಹಾಳು ಮಾಡಲು ಪ್ರಯತ್ನಿಸಲಾಗಿದೆ. ಆದ್ದರಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿರುವ ಪ್ರಜ್ವಲ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಮುಖಂಡರು ದೂರಿನಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ; 4.43 ಕೋಟಿ ಮೌಲ್ಯದ 50 ಮೆಟ್ರಿಕ್ ಟನ್ ಅಡಿಕೆ ವಶ

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಬೆಕ್ಕು ತಾನೆ? ಕಚ್ಚಿದರೆ ಏನಾಗುವುದಿಲ್ಲ ಎಂಬ ನಿರ್ಲಕ್ಷ್ಯ ಬೇಡ
  2. ಚಿಕ್ಕಮಗಳೂರು: ದಿಢೀರನೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ!
  3. ಚಿಕ್ಕಮಗಳೂರು: ಕಾಲೇಜಿಗೆ ಹಿಜಾಬ್ ಧರಿಸಿ ಬಂದ ಪ್ರಕರಣ; ಐಡಿಎಸ್’ಜಿ ಕಾಲೇಜು ಆಡಳಿತ ಮಂಡಳಿಯಿಂದ ಖಡಕ್ ಆದೇಶ.. ಏನಿದೆ ಆದೇಶದಲ್ಲಿ?
  4. ವಾಹನ ಮಾಲೀಕರೇ, ಚಾಲಕರೇ ಎಚ್ಚರ;  ನಗರದಲ್ಲಿ ಹೆಚ್ಚಾಯಿತು ನಕಲಿ ಇನ್ಸೂರೆನ್ಸ್ ಜಾಲ
  5. 4.43 ಕೋಟಿ ಮೌಲ್ಯದ 50 ಮೆಟ್ರಿಕ್ ಟನ್ ಅಡಿಕೆ ವಶ
  6. ಶೃಂಗೇರಿ: ರಾತ್ರೋರಾತ್ರಿ ರಸ್ತೆಯ ಪಕ್ಕದಲ್ಲಿದ್ದ ಮರ ಕಡಿದು ಹೊತ್ತೊಯ್ದ ಕಳ್ಳರು;  ಆಗುಂಬೆ: ಎರಡು ಕಾರುಗಳ ನಡುವೆ ಅಪಘಾತ
  7. ಪ್ರತಿದಿನ ನಿಂಬೆ ರಸ ಕುಡಿತೀರಾ?; ಹಾಗಾದ್ರೆ ಹುಷಾರ್! ಯಾಕೆ ಅಂತೀರಾ?;  ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಡೇಂಜರ್!
  8. ಗೂಗಲ್ ಮ್ಯಾಪ್ ಬಳಸಲು ಇಂಟರ್ನೆಟ್ ಬೇಡ; ಇದು ಹೇಗೆ ಸಾಧ್ಯ ಅಂತೀರಾ?, ಈ ಸ್ಟೋರಿ ಓದಿ
  9. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-11.08.2023
  10. ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?;  ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇