Mudigere: (ನ್ಯೂಸ್ ಮಲ್ನಾಡ್ ವರದಿ) ವ್ಯಕ್ತಿಯೊಬ್ಬ ಚಲಾಯಿಸುತ್ತಿದ್ದ ಆಟೋ, ತನ್ನ ಮಾಲಿಕನಂತೆಯೇ ತೂರಾಡುತ್ತಾ ರಸ್ತೆಯಲ್ಲಿ ಸಂಚರಿಸಿ ಕೊನೆಗೆ ತನ್ನ ಮಾಲಿಕನನ್ನು ಹೊರಗೆಸೆದು ತಾನು ಗುಂಡಿಗೆ ಬಿದ್ದ ಘಟನೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ; ತಂತಿ ಬೇಲಿಯಲ್ಲಿ ಸಿಲುಕಿ ಚಿರತೆಯ ನರಳಾಟ;ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು
ಇದನ್ನೂ ಓದಿ; ಚಿಕ್ಕಮಗಳೂರಿಂದ ಬೆಂಗಳೂರಿಗೆ ಆಟೋದಲ್ಲೇ ತೆರಳಿ ಶಿವಣ್ಣನಿಗೆ ಮುತ್ತಿಟ್ಟ ಕಾಫಿನಾಡು ಚಂದು
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಂಡಗೋಡು ಗ್ರಾಮದಲ್ಲಿ. ಮದ್ಯ ಸೇವಿಸಿ ನಶೆಯಲ್ಲಿಯೇ ಆಟೋ ಚಾಲನೆ ಮಾಡಿದ್ದಾನೆ. ಅಷ್ಟೇ ಅಲ್ಲ ಇಡೀ ರಸ್ತೆಯೇ ತನ್ನದೆಂಬಂತೆ ಅಡ್ಡಾದಿಡ್ಡಿ ಚಾಲನೆ ಚಾಲನೆ ಮಾಡಿದ್ದಾನೆ. ಕೊನೆಗೆ ನಿಯಂತ್ರಣ ತಪ್ಪಿ ತಾನೇ ಆಟೋದಿಂದ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಆಟೋ ಹೊಂಡಕ್ಕೆ ಬಿದ್ದಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೊಪ್ಪ/ಶೃಂಗೇರಿ: ಕಿಟಕಿ ಗಾಜು ಒಡೆದು ಕಳ್ಳತನಕ್ಕೆ ಯತ್ನ: ದೂರು ದಾಖಲು
- ಇಸ್ರೋ ವಿಜ್ಞಾನಿಗಳಿಂದ ಮತ್ತೊಂದು ಐತಿಹಾಸಿಕ ಸಾಧನೆ; ಚಂದ್ರಯಾನ-3 ಉಡಾವಣೆ ಯಶಸ್ವಿ
- arecanut price: 14 ಜುಲೈ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಸದ್ಯ ಈ ಆಟೋದಲ್ಲಿ ಯಾವ ಪ್ರಯಾಣಿಕರು ಹಾಗೂ ಎದುರಿನಿಂದ ಯಾವುದೆ ವಾಹನ ಬರದೇ ಇದ್ದ ಕಾರಣ ಯಾವ ಅಪಾಯ ಸಂಭವಿಸಿಲ್ಲ. ಈ ದೃಶ್ಯವನ್ನು ಹಿಂದಿನಿಂದ ಬರುತ್ತಿದ್ದ ಕಾರು ಚಾಲಕ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಅನ್ನ ಭಾಗ್ಯ ಯೋಜನೆ: ಅಕ್ಕಿ ಜೊತೆ ನಿಮಗೂ ಹಣ ಬಂತಾ?.ಇನ್ನೂ ಬಂದಿಲ್ವಾ, ನಿಮ್ಮ ಮೊಬೈಲ್ ನಲ್ಲೆ ಚೆಕ್ ಮಾಡಿ?
anna bhagya scheme: ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾಯಿಸುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದರು. ಹಣವು ಖಾತೆಗೆ ವರ್ಗಾವಣೆಯಾಗಿದೆಯೇ ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಆಹಾರ ಇಲಾಖೆ ವೆಬ್‌ಸೈಟ್ ಲಿಂಕ್ (link) ಕೂಡ ಬಿಡುಗಡೆ ಮಾಡಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಅಂಗಡಿಯಲ್ಲಿದ್ದ 40 ಕೆ.ಜಿ. ಟೊಮೆಟೊ ಕಳ್ಳತನ
ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್‌ಸೈಟ್ ಲಿಂಕ್ (website link) ಬಿಡುಗಡೆ ಮಾಡಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-12.07.2023
ಅನ್ನಭಾಗ್ಯ ದುಡ್ಡು ಆಕೌಂಟ್ ಸೇರಿದ್ಯಾ ಚೆಕ್ ಮಾಡೋದು ಹೇಗೆ?:
* ಆಹಾರ ಇಲಾಖೆಯ ವೆಬ್ ಸೈಟ್ ಗೆ ಲಾಗಿನ್ (login)ಆಗಿ (ahara.kar.nic.in/home/eservice)
* ಇ- ಸರ್ವಿಸ್ ಪೋರ್ಟಲ್‌ನಲ್ಲಿ( e-service portal) ಡಿಬಿಟಿ ಅನ್ನುವ ಲಿಂಕ್ ಕಾಣಿಸಲಿದೆ ಇದರ ಮೇಲೆ ಕ್ಲಿಕ್ ಮಾಡಿ.
* ಇದರಲ್ಲಿ ಸ್ಟೇಟಸ್ ಆಫ್ ಡಿಬಿಟಿ(dbt) ಅನ್ನುವ ಆಯ್ಕೆ ಗೋಚರಿಸುತ್ತದೆ, ಅದನ್ನು ಆಯ್ಕೆ ಮಾಡಿ.
* ಮುಂದಿನ ಪುಟದಲ್ಲಿ ನಿಗದಿತ ಕಾಲಂನಲ್ಲಿ ರೇಷನ್ ಕಾರ್ಡ್ ನ ನಂಬರ್ ಅಂದ್ರೆ ಆರ್ ಸಿ ನಂಬರ್‌ನ್ನು ಭರ್ತಿಮಾಡಬೇಕು.
* ನಿಮ್ಮ ರೇಷನ್ ಕಾರ್ಡ್ನ(ration card) ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ (rc number) ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಆರಿಸಿ.
* ಮುಂದಿನ ಪುಟದಲ್ಲಿ ನಿಮ್ಮ ಅಕೌಂಟ್‌ಗೆ ದುಡ್ಡು ಜಮೆ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಕ್ರೆಡಿಟ್(credit) ಆಗದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ಲಭ್ಯವಾಗಲಿದೆ.

ಅನ್ನಭಾಗ್ಯ ಹಣ ವರ್ಗಾವಣೆ ಕುರಿತು ಏನೆಲ್ಲಾ ಮಾಹಿತಿ ಲಭ್ಯವಾಗುತ್ತದೆ?:
ಅನ್ನಭಾಗ್ಯ ಹಣ ವರ್ಗಾವಣೆ ಖಚಿತ ಪಡೆಸಿಕೊಳ್ಳಲು ವೆಬ್‌ಸೈಟ್ ಪರಿಶೀಲಿಸಿದಾಗ ಅದರಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಕುಟುಂಬ ಸದಸ್ಯರು, ಪಡಿತರ ಚೀಟಿ ವಿಧಾನ, ಅಕ್ಕಿ ಅರ್ಹತೆ ಪ್ರಮಾಣ (ಇಂತಿಷ್ಟು ಕೆ.ಜಿ) ಹಾಗೂ ಹಣ ವರ್ಗಾವಣೆ ಬಗ್ಗೆ ಮಾಹಿತಿ ಲಭ್ಯವಾಗಲಿದೆ.
ಇದನ್ನೂ ಓದಿ; ಕೊಪ್ಪ: ಆನೆ ಸಂಚಾರ; ಆತಂಕದಲ್ಲಿ ಗ್ರಾಮಸ್ಥರು
ಮೊಬೈಲ್ ಸಂದೇಶ ಕೂಡ ಬರಲಿದೆ:
ಅನ್ನಭಾಗ್ಯ ಯೋಜನೆಯ ಹಣವು ಕುಟುಂಬ ಮುಖ್ಯಸ್ಥರ ಖಾತೆಗೆ ಬರಲಿದೆ. ಒಂದು ಕೆಜಿ ಅಕ್ಕಿಗೆ 36 ರೂಪಾಯಿ ಅಂತೆ ತಲಾ ಐದು ಕೆಜಿ ಅಂತೆ ಕುಟುಂಬ ಸದಸ್ಯರ ಒಟ್ಟಾರೆ ಹಣವು ಖಾತೆಗೆ ಜಮೆಯಾಗಲಿದೆ. ಇನ್ನು ಹಣ ಜಮೆಯಾದ ಕೂಡಲೇ ಬ್ಯಾಂಕ್‌ನಿಂದ ಸಂದೇಶ ಬರಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,