Monday, December 11, 2023
Homeಮಲೆನಾಡುಬಾರ್ ಕ್ಯಾಶಿಯರ್ ಕೊಲೆ; ಆರೋಪಿ ಕಾಲಿಗೆ ಗುಂಡೇಟು- ಏನಿದು ಪ್ರಕರಣ?

ಬಾರ್ ಕ್ಯಾಶಿಯರ್ ಕೊಲೆ; ಆರೋಪಿ ಕಾಲಿಗೆ ಗುಂಡೇಟು- ಏನಿದು ಪ್ರಕರಣ?

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಭಾನುವಾರ ರಾತ್ರಿ ಪೊಲೀಸರ ಎದುರೇ ಬಾರ್ ಕ್ಯಾಶಿಯರ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಮೂವರು ಆರೋಪಿಗಳಲ್ಲಿ ಒಬ್ಬನ ಕಾಲಿಗೆ ಗುಂಡು ಹೊಡೆದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆಯನೂರು ಕೋಟೆ ತಾಂಡಾದ ನಿವಾಸಿ ಸತೀಶ ನಾಯ್ಕ ಗುಂಡೇಟು ತಿಂದ ಆರೋಪಿ.

ಇದನ್ನೂ ಓದಿ;  ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

ಇದನ್ನೂ ಓದಿ;  ಸಿಟ್ಟಿನಲ್ಲಿ ತಮ್ಮನ ಜೀವವನ್ನೇ ತೆಗೆದ ಅಣ್ಣ

ಬಂಧಿಸಲು ತೆರಳಿದ್ದ ಕುಂಸಿ ಠಾಣೆ ಇನ್‌ಸ್ಪೆಕ್ಟರ್ ಪ್ರವೀಣ್ ಹಾಗೂ ಕಾನ್‌ಸ್ಟೆಬಲ್ ಶಿವರಾಜ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಪಿಎಸ್‌ಐ ರಾಜುರೆಡ್ಡಿ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ತಿಳಿಸಿದ್ದಾರೆ. ಆರೋಪಿ ಹಾಗೂ ಗಾಯಾಳು ಪೊಲೀಸರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ತಾಂಡಾದ ನಿವಾಸಿಗಳಾದ ನಿರಂಜನ್ ನಾಯ್ಕ ಹಾಗೂ ಅಶೋಕ ನಾಯ್ಕ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಬಾರ್ ಕ್ಯಾಷಿಯರ್ ನ ಬರ್ಬರ ಕೊಲೆ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬಾರ್ ನ ಕ್ಯಾಷಿಯರ್ ನನ್ನು ಡ್ರ‍್ಯಾಗರ್ ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಚಿನ್ ಕುಮಾರ್ (27) ಕೊಲೆಯಾದ ವ್ಯಕ್ತಿ.

ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ

ನಿನ್ನೆ ರಾತ್ರಿ 10.00 ಗಂಟೆಗೆ ಬಾರ್ ಗೆ ಕುಡಿಯಲು ಬಂದಿದ್ದ ಮೂರು ಜನ ಆರೋಪಿಗಳು ರಾತ್ರಿ 11.30 ಆದರೂ ಮದ್ಯ ಸೇವಿಸುತ್ತಿದ್ದರು. “11.30 ಆಗಿದೆ ಬಂದ್ ಮಾಡ್ತೇವೆ ಹೊರಡಿ” ಎಂದು ಕ್ಯಾಶಿಯರ್ ಹೇಳಿದ್ದಕ್ಕೆ ಮೂವರು ಖ್ಯಾತೆ ತೆಗೆದಿದ್ದಾರೆ.

“ನಮ್ದು ಇನ್ನು ಕುಡಿದು ಮುಗಿದಿಲ್ಲ, ನಾವು ಹೋಗಲ್ಲ ಏನ್ ಮಾಡ್ತೀಯಾ” ಅಂತಾ ಆರೋಪಿಗಳು ಗಲಾಟೆ ಮಾಡಿ ಯುವಕನ ಎದೆಗೆ ಡ್ರ‍್ಯಾಗರ್ ನಿಂದ ಚುಚ್ಚಿದ್ದಾರೆ. ಇದೆ ವೇಳೆ 112 ವಾಹನ ಕೂಡ ಬಂದಿದ್ದು, ಪೊಲೀಸರ ಎದುರೆ ಜಗಳ ನಡೆದು ಕೊಲೆಯಾಗಿದೆ. ನಿರಂಜನ, ಸತೀಶ, ಅಶೋಕನಾಯ್ಕ ಕೊಲೆ ಮಾಡಿದ ಆರೋಪಿಗಳು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ; ಡ್ರೈವಿಂಗ್ ಸ್ಕೂಲ್ ಕುಮಾರಣ್ಣ ಇನ್ನಿಲ್ಲ, ಅನಾರೋಗ್ಯ ಕಾರಣದಿಂದ ನಿಧನ

ಇನ್ನು ಮೃತ ಸಚಿನ್ ಗೆ ಆಯನೂರು ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡುವ ಮೊದಲೇ ಸಚಿನ್ ಸಾವನ್ನಪ್ಪಿದ್ದಾನೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ಪೈಪ್ ಲೈನ್ ದುರಸ್ತಿ ಕಾಮಗಾರಿಯಿಂದ ತೊಂದರೆ: ಸ್ಥಳೀಯರ ಪ್ರತಿಭಟನೆ

Most Popular

Recent Comments