ಬೆಂಗಳೂರು : ರಾಜ್ಯಸರ್ಕಾರವು ಮುಸ್ಲಿಂ ಮಹಿಳೆಯರಿಗೆ ಸಿಹಿಸುದ್ದಿಯನ್ನು ನೀಡಿದೆ.
ಮುಸ್ಲಿಂ ಮಹಿಳೆಯರಿಗೆ ಹೃದಯ ಹಾಗೂ ಕ್ಯಾನ್ಸರ್ ರೋಗದ ಚಿಕಿತ್ಸೆ ಗೆ 1ಲಕ್ಷ ರೂ ಸಹಾಯಧನ ನೀಡಲಾಗುವುದು ಎಂದು ಮುಜರಾಯಿ. ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ಯವರು ತಿಳಿಸಿದ್ದಾರೆ.
ವಕ್ಫ್ ಕಮಿಟಿಯಲ್ಲಿ 105 ಕೋಟಿ ರೂ ಅನುದಾನಯಿದೆ ಬಡ ಮುಸ್ಲಿಂ ಸಮುದಾಯದವರಿಗೆ ಶೇ 5% ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುತ್ತದೆ. ಹಾಗೆಯೇ ಮುಸ್ಲಿಂ ಮಹಿಳೆಯರಿಗೆ ಹೃದಯ ಹಾಗೂ ಕ್ಯಾನ್ಸರ್ ರೋಗದ ಚಿಕಿತ್ಸೆಗೆ 1 ಲಕ್ಷ ರೂ ಸಹಾಯಧನವನ್ನು ನೀಡಲಾಗುತ್ತದೆ. ವಕ್ಫ್ ಮಂಡಳಿಗೆ 1.74 ಕೋಟಿ ರೂ ಅನುದಾನವನ್ನು ನೀಡಲಾಗುತ್ತದೆ ಎಂದು ಪತ್ರಿಕಾಗೋಷ್ಟಿ ಯಲ್ಲಿ ಮಾಹಿತಿಯನ್ನು ನೀಡಿದ್ದಾರೆ.