ಹಾಸನ: (ನ್ಯೂಸ್ ಮಲ್ನಾಡ್ ವರದಿ) ನಾಡ ಹಬ್ಬ ದಸರಾ ಸಂದರ್ಭದಲ್ಲಿ ಸತತ ಎಂಟು ಬಾರಿ ಅಂಬಾರಿಯನ್ನು ಹೊತ್ತ ಅರ್ಜುನ ಅನೆ ಮೃತಪಟ್ಟಿದೆ.
ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಸಾಕಾನೆಗಳೊಂದಿಗೆ ಸೋಮವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದೆ.
ಒಂಟಿಸಲಗ ದಾಳಿ ಮಾಡುತ್ತಿದ್ದಂತೆಯೇ ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಈ ವೇಳೆ ಅರ್ಜುನ ಮಾತ್ರ ಒಂಟಿಸಲಗದ ಜತೆ ಕಾದಾಟ ನಡೆಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಸಾಕಾನೆ ಅರ್ಜುನ ಹಾಗೂ ಕಾಡಾನೆ ನಡುವೆ ಭೀಕರ ಕಾಳಗ
ಎರಡು ಆನೆಗಳು ಕಾದಾಟ ಆರಂಭಿಸುತ್ತಿದ್ದಂತೆಯೇ ಅರ್ಜುನನ ಮಾವುತರು ಮೇಲಿನಿಂದ ಇಳಿದು ಓಡಿದ್ದಾರೆ. ಇದಾದ ಬಳಿಕ ನಡೆದ ಭೀಕರ ಕಾಳಗದಲ್ಲಿ ಅರ್ಜುನ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆಯ ಬೇಜವಾಬ್ದಾರಿ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಹಾಸನ ಜಿಲ್ಲೆಯ ಮಲೆನಾಡು ಭಾಗದ ಜನರ ನಿದ್ದಗೆಡಿಸಿರುವ ಕಾಡಾನೆ ಹಾವಳಿ ತಡೆಗೆ ಅರಣ್ಯ ಇಲಾಖೆ ಇತ್ತೀಚೆಗೆ ಹಲವು ಕ್ರಮಗಳನ್ನು ಕೈಗೊಂಡಿದೆ. ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅವುಗಳ ಚಲನ ವಲನಗಳ ಮೇಲೆ ಗಮನ ಇಡುವ ಕೆಲಸವನ್ನೂ ಮಾಡುತ್ತಿದೆ. ಕಳೆದ ಒಂದು ದಿನದ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಅರಣ್ಯ ಇಲಾಖೆಯ ಅವೈಜ್ಞಾನಿಕ ನಡೆಗೆ ಆನೆಯೊಂದು ಸಾವನ್ನಪ್ಪಿತ್ತು.






Leave a Reply