ಬೆಂಗಳೂರು: ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರದ ಪ್ರಕರಣಕ್ಕೆ ಸಂಬoಧಿಸಿದoತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದು, ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 7ಕ್ಕೆ ಏರಿಕೆ ಆಗಿದೆ.
ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದoತಹ 7ನೇ ಆರೋಪಿಯನ್ನು ಮೈಸೂರು ಪೊಲೀಸರು ತಮಿಳುನಾಡು ಪೊಲೀಸರ ಸಹಾಯವನ್ನು ಪಡೆದುಕೊಂಡು ಅವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ಇಂದು ಕರೆತರಲಾಗುವುದು ಎಂದು ಪೊಲೀಸ್ ಮೂಲಗಳು ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿವೆ.
ಘಟನೆ ನಡೆದ 4 ದಿನಗಳ ನಂತರ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದರು. ವಿಚಾರಣೆ ವೇಳೆ 7 ಜನ ಸೇರಿ ಈ ಕೃತ್ಯ ಎಸಗಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು. ಬಳಿಕ ಕಾರ್ಯಾಚರಣೆಯನ್ನು ನಡೆಸಿ 6ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. 7ನೇ ಆರೋಪಿಯು ಬಹುದಿನಗಳಿಂದ ಪೊಲೀಸರ ಕೈಗೆ ಸಿಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ. ಇದೀಗ ಪೊಲೀಸರು ತೀವ್ರ ಕಾರ್ಯಾಚರಣೆಯನ್ನು ನಡೆಸಿ, ಅತ್ಯಚಾರ ಪ್ರಕರಣದ 7 ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲಿದ್ದಂತಹ ಆರೋಪಿಗಳನ್ನು ಮಂಗಳವಾರ ಮೈಸೂರಿನ ಮೂರನೇ ಜೆಎಂಎಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಬಾಲಪರಾಧಿಯಾಗಿರುವುದರಿಂದ ಆತನನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ ಎಂದು ಮಾಧ್ಯಮ ವರ್ಗದವರಿಗೆ ತಿಳಿಸಿದ್ದಾರೆ