Friday, June 9, 2023
Homeರಾಜ್ಯಸಾಮೂಹಿಕ ಅತ್ಯಾಚಾರ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಾಮುಕರು!!

ಸಾಮೂಹಿಕ ಅತ್ಯಾಚಾರ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಾಮುಕರು!!

ಮೈಸೂರು: ಅರಮನೆ ನಗರಿಯ ಚಾಮುಂಡಿಬೆಟ್ಟದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಕಾಮುಕರು ತಮ್ಮ ಕಾಮ ತೃಷೆ ತೀರಿಸಿಕೊಂಡ ಬಳಿಕ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿಯು ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯನ್ನ ರೇಪ್ ಮಾಡಿದ್ದಲ್ಲದೆ ರೇಪ್ ಮಾಡಿ ವೀಡಿಯೋ ಮಾಡಿಕೊಂಡಿದ್ದ ಕಾಮುಕರು ನಂತರ ಪೊಲೀಸರಿಗೆ ದೂರು ಕೊಡದಂತೆ ಬೆದರಿಕೆಯನ್ನು ಹಾಕಿದ್ದಾರೆ. ಒಂದು ವೇಳೆ ಪೊಲೀಸರಿಗೆ ದೂರು ಕೊಟ್ಟರೆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ನಂತರ ಯುವಕನಿಗೆ ಕಲ್ಲಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಈ ಬಗ್ಗೆ ಪೊಲೀಸರಿಗೆ ದೂರನ್ನು ನೀಡಿದ್ದಾಳೆ.

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೋರಿ ಮೇಲೆ ಕುಳಿತಿದ್ದಳು. ಈ ವೇಳೆ ಪಾನಮತ್ತ ಯುವಕರ ತಂಡವೊoದು ಅಲ್ಲಿಗೆ ಬಂದು ಯುವಕನಿಗೆ ಕಲ್ಲಿನಿಂದ ಹಲ್ಲೆಯನ್ನು ಮಾಡಿದ್ದಾರೆ. ನಂತರ ವಿದ್ಯಾರ್ಥಿನಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವನ್ನು ಎಸಗಿದ್ದಾರೆ.

ಇತ್ತ ಪೊದೆಯಲ್ಲಿ ನಿತ್ರಾಣವಾಗಿದ್ದ ಜೋಡಿಯನ್ನು ನೋಡಿದಂತಹ ಯುವಕನ ಸ್ನೇಹಿತರು ಕೂಡಲೇ ಪೊಲೀಸ್ ಠಾಣೆಗೆ ವಿಷಯವನ್ನು ಮುಟ್ಟಿಸಿದ್ದಾರೆ. ಅಲ್ಲದೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಿದ್ದಾರೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆಯನ್ನು ಬೀಸಿದ್ದಾರೆ.

Most Popular

Recent Comments