(Narendra Modi:) ಪ್ರಧಾನಿ ನರೇಂದ್ರ ಮೋದಿ ಅವರು ಸಕ್ಕರೆ ಸೇವನೆ ಕಡಿಮೆ ಮಾಡುವ ಕುರಿತು ನೀಡಿದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜನರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ
ಜನಪ್ರಿಯ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಯುವರಾಜ್ ದುವಾ ಅವರ ಮನವಿಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅವರ ಇನ್‌ಸ್ಟಾಗ್ರಾಮ್ ರೀಲ್ ಅನ್ನು ತಮ್ಮ ಸ್ಟೋರಿನಲ್ಲಿ ಹಂಚಿಕೊಂಡಿದ್ದಾರೆ. ದುವಾ ಅವರು ತಮ್ಮ ತಂದೆ ಹೆಚ್ಚು ಸಿಹಿ ತಿನ್ನುವುದನ್ನು ಕಡಿಮೆ ಮಾಡಲು ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಹಾಸ್ಯಭರಿತವಾಗಿ ಮನವಿ ಮಾಡಿದ್ದರು.
ರೀಲಿನಲ್ಲಿ ದುವಾ ಅವರು, “ಮೋದಿ ಸಾರ್, ನಿಮ್ಮ ಮಾತುಗಳು ನನ್ನ ತಂದೆಗೆ ಆದೇಶಗಳಂತೆ. ಮುಂದಿನ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಸಕ್ಕರೆ ಕಡಿಮೆ ಸೇವಿಸುವ ಬಗ್ಗೆ ನೀವು ಹೇಳಿದರೆ ಅವರು ಖಂಡಿತವಾಗಿ ಕೇಳುತ್ತಾರೆ. ನಾವು ಹೇಳಿದರೂ ಜಿಲೇಬಿ ತಿನ್ನೋದು ಕಡಿಮೆಯಾಗುವುದಿಲ್ಲ,” ಎಂದು ವಿನೋದವಾಗಿ ಹೇಳಿದ್ದಾರೆ.
ಇದನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್ !
ಈ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿ, “ದುವಾ ಅವರ ತಂದೆಯಷ್ಟೇ ಅಲ್ಲದೆ ಎಲ್ಲರೂ ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿ ಆರೋಗ್ಯವಾಗಿರಬೇಕು ಮತ್ತು ಸಂತೋಷವಾಗಿರಬೇಕು” ಎಂದು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದು ಆರೋಗ್ಯದ ಮಹತ್ವವನ್ನು ಪುನರುಚ್ಚರಿಸಿದ್ದಾರೆ.
ಆರೋಗ್ಯಕರ ಜೀವನಶೈಲಿ, ಸರಿಯಾದ ಆಹಾರ ಪದ್ಧತಿ ಮತ್ತು ಸಕ್ಕರೆ ಸೇವನೆ ನಿಯಂತ್ರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರಧಾನಿ ಈ ಸಂದೇಶ ಹಂಚಿಕೊಂಡಿದ್ದಾರೆ. ಯುವರಾಜ್ ದುವಾ ಅವರು ಯುವಜನರ ದೈನಂದಿನ ಅನುಭವಗಳು ಹಾಗೂ ದೆಹಲಿ ಶೈಲಿಯ ಹಾಸ್ಯವನ್ನು ಒಳಗೊಂಡ ವಿಡಿಯೋಗಳ ಮೂಲಕ ಜನಪ್ರಿಯರಾಗಿದ್ದು, ಅವರ ರೀಲಿಗೆ ಪ್ರಧಾನಿಯ ಪ್ರತಿಕ್ರಿಯೆ ಲಭ್ಯವಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Narendra Modi:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ






Leave a Reply