National Scholarship Scheme: ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ಎನ್ನುವುದು ಭಾರತ ಸರ್ಕಾರದ ಒಂದು ಕೇಂದ್ರೀಕೃತ ಡಿಜಿಟಲ್ ಪ್ಲಾಟ್‌ಫಾರ್ಮ್ ಆಗಿದೆ. ಇದು ದೇಶಾದ್ಯಂತ ಇರುವ ವಿದ್ಯಾರ್ಥಿಗಳಿಗೆ ವಿವಿಧ ಕೇಂದ್ರ ಸಚಿವಾಲಯಗಳು, ರಾಜ್ಯ ಸರ್ಕಾರಗಳು ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಂತಹ ಸಂಸ್ಥೆಗಳು ನೀಡುವ 140ಕ್ಕೂ ಹೆಚ್ಚು ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುತ್ತದೆ.
ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪೂರೈಸಲು ಹಾಗೂ ತಮ್ಮ ಗುರಿಯನ್ನು ಸಾಧಿಸಲು ವಿದ್ಯಾರ್ಥಿವೇತನಗಳು ನೆರವಾಗುತ್ತವೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಜೊತೆಗೆ ಕೇಂದ್ರ ಸರ್ಕಾರವು ಕೂಡ ಹಲವಾರು ವಿದ್ಯಾರ್ಥಿವೇತನಗಳನ್ನು ಜಾರಿಗೊಳಿಸಿದೆ. ಇವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಮಾಹಿತಿಯ ಕೊರತೆಯಿಂದಾಗಿ ಅರ್ಹ ವಿದ್ಯಾರ್ಥಿಗಳು ಕೂಡ ವಿದ್ಯಾರ್ಥಿವೇತನ ಪಡೆಯುವುದರಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ಎಂಬ ಡಿಜಿಟಲ್ ವೇದಿಕೆಯು ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನಗಳನ್ನು ಪಡೆಯಲು ಒಂದೇ ಸೂರಿನಡಿ ಅವಕಾಶ ಕಲ್ಪಿಸುತ್ತದೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ವಿದ್ಯಾರ್ಥಿವೇತನದ ವಿಧಗಳು ಹಾಗೂ ಮೊತ್ತ.
* ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ 1-10ನೇ ತರಗತಿ: ಕನಿಷ್ಠ 1,000 ರೂ. ದಿಂದ ಗರಿಷ್ಠ 12,000 ರೂ. ವರೆಗೆ ಸಹಾಯಧನ ನೀಡಲಾಗುತ್ತದೆ.
* ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ 11-12 ನೇ ತರಗತಿ: ಎಸ್‌ಎಸ್‌ಎಲ್‌ಸಿ ನಂತರದ ಪಿಯುಸಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 3,000 ರೂ.ದಿಂದ 25,000 ರೂ. ವರೆಗೆ ವಿದ್ಯಾರ್ಥಿವೇತನ ಲಭ್ಯವಿದೆ.
* ಪದವಿ ಮತ್ತು ಪಾಲಿಟೆಕ್ನಿಕ್ ಶಿಕ್ಷಣ: ಸಾಮಾನ್ಯ ಪದವಿ ಬಿಎ, ಬಿಎಸ್‌ಇ, ಬಿಕಾಮ್ ಅಥವಾ ತಾಂತ್ರಿಕ ಡಿಪ್ಲೊಮಾ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವರ್ಷಕ್ಕೆ 6,000 ರೂ.ದಿಂದ 22,000 ರೂ. ವರೆಗೆ ಆರ್ಥಿಕ ನೆರವು.
* ವೃತ್ತಿಪರ ಪದವಿಗಳು ಬಿಇ, ಎಂಬಿಬಿಎಸ್ : ಇಂಜಿನಿಯರಿಂಗ್ ಅಥವಾ ವೈದ್ಯಕೀಯದಂತಹ ಉನ್ನತ ವೃತ್ತಿಪರ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 25,000 ರೂ. ದಿಂದ ಆರಂಭವಾಗಿ 50,000 ರೂ. ಕ್ಕೂ ಹೆಚ್ಚು ಹಣವನ್ನು ನೀಡಲಾಗುತ್ತದೆ.
* ಸಂಶೋಧನಾ ಹಂತದ ಶಿಕ್ಷಣ ಎಮ್.ಪಿಲ್, ಪಿ.ಎಚ್‌ಡಿ: ಉನ್ನತ ಮಟ್ಟದ ಜೀವನೋಪಾಯಕ್ಕಾಗಿ ತಿಂಗಳಿಗೆ 30,000 ರೂ. ದಿಂದ 35,000 ರೂ.ವರೆಗೆ ಹೆಚ್ಚಿನ ಮೊತ್ತದ ನೀಡಲಾಗುತ್ತದೆ.

ಅರ್ಹತೆಯಗಳು:
* ವಿದ್ಯಾರ್ಥಿವೇತನ ಪಡೆಯಲು ಕುಟುಂಬದ ಆರ್ಥಿಕ ಸ್ಥಿತಿ ಮುಖ್ಯ. ಒಟ್ಟು ವಾರ್ಷಿಕ ಆದಾಯವು 2 ಲಕ್ಷ ರೂ. ಕ್ಕಿಂತ ಕಡಿಮೆ ಇರಬೇಕು.
* ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ .ಅಂತಿಮ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
* ಅಭ್ಯರ್ಥಿಯು ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ಸಮುದಾಯಗಳು ಅಥವಾ ವಿಕಲಚೇತನ ವರ್ಗಕ್ಕೆ ಸೇರಿದವರಾಗಿರಬೇಕು.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆಯ ಪ್ರಕ್ರಿಯೆ:
* ವಿದ್ಯಾರ್ಥಿಯು ತನಗೆ ಲಭ್ಯವಾದ OTR ಐಡಿ ಮತ್ತು ಪಾಸ್‌ವರ್ಡ್ ಬಳಸಿ NSP ಅರ್ಜಿದಾರರ ಡ್ಯಾಶ್‌ಬೋರ್ಡ್‌ಗೆ ಲಾಗಿನ್ ಆಗಬೇಕು.
* ಲಾಗಿನ್ ನಂತರ ‘ಅರ್ಜಿ ನಮೂನೆ ಮೇಲೆ ಕ್ಲಿಕ್ ಮಾಡಿ, ನಿಮ್ಮ ಶೈಕ್ಷಣಿಕ ಮಾಹಿತಿ, ವಾಸಸ್ಥಳದ ವಿವರ ಮತ್ತು ಬ್ಯಾಂಕ್ ಖಾತೆಯ ಮಾಹಿತಿಯನ್ನು ಜಾಗೃತೆಯಿಂದ ಭರ್ತಿ ಮಾಡಿ.
* ನೀವು ನೀಡಿದ ವಿವರಗಳ ಆಧಾರದ ಮೇಲೆ ತಂತ್ರಾಂಶ ನಿಮಗೆ ಲಭ್ಯವಿರುವ ವಿದ್ಯಾರ್ಥಿವೇತನ ಯೋಜನೆಗಳನ್ನುಗೋಚರಿಸುತ್ತದೆ.
* ಒಂದು ವೇಳೆ ನೀವು ಅರ್ಜಿ ಸಲ್ಲಿಸುತ್ತಿರುವ ವಿದ್ಯಾರ್ಥಿವೇತನದ ಮೊತ್ತವು 50,000 ರೂ.ಕ್ಕಿಂತ ಹೆಚ್ಚಿದ್ದರೆ ಮಾತ್ರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕಾಗುತ್ತದೆ.
* ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ನಂತರ ‘ಸಲ್ಲಿಸುʼ ಬಟನ್ ಒತ್ತಬೇಕು.
ಅಗತ್ಯವಿರುವ ದಾಖಲೆಗಳು
* ಆಧಾರ್ ಕಾರ್ಡ್
* ಹಿಂದಿನ ವರ್ಷದ ಅಂಕಪಟ್ಟಿ
* ಪಾಸ್‌ಪೋರ್ಟ್ ಅಳತೆಯ ಫೋಟೋ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಬೋನಫೈಡ್ ಪ್ರಮಾಣ ಪತ್ರ (ಪ್ರಸ್ತುತ ಓದುತ್ತಿರುವ ಸಂಸ್ಥೆಯಿಂದ)
* ಆಧಾರ್ ಸೀಡಿಂಗ್ ಆಗಿರುವ ಬ್ಯಾಂಕ್ ಪಾಸ್‌ಬುಕ್
Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (National Scholarship Scheme:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





