(Naxals:) ರಾಜ್ಯದ ಮೊದಲು ನಕ್ಸಲ್ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಈ ಬಾರಿ ಮತ್ತೆ ನಕ್ಸಲರು ಕಾಣಿಸುವ ಮೂಲಕ ಸುದ್ದಿಯಾಗಿದ್ದಾರೆ. ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ ನಕ್ಸಲರು ಮತ್ತೆ ಕಾಣಿಸಿಕೊಂಡಿದ್ದಾರೆ ಎಂದು ಕಳೆದ ಮೂರು ದಿನಗಳಿಂದ ಸುದ್ದಿ ಹರಿದಾಡುತ್ತಿದೆ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
ನಾಲ್ವರು ಶಸ್ತ್ರಸಜ್ಜಿತ ಯುವಕರ ತಂಡವು ಕಾರ್ಕಳ ತಾಲೂಕಿನ ಈದು ಗ್ರಾಮದ ಮುಸ್ಲಿಂ ಕಾಲೋನಿಯ ಬಳಿಯಿರುವ ಬಂಡೆಕಲ್ಲು ಸಮೀಪ ಸೋಮವಾರ ಹಾಡುಹಗಲೇ ಕಾಣಿಸಿಕೊಂಡಿದ್ದು, ಕಾಡುತ್ಪತ್ತಿ ಸಂಗ್ರಹಿಸಲು ತೆರಳಿದ ಸ್ಥಳೀಯರು ಭಯಬೀತರಾಗಿದ್ದಾರೆ. ಸುಮಾರು 30ರಿಂದ 40 ವರ್ಷ ವಯಸ್ಸಿನ ಯುವಕರು ತಂಡದಲ್ಲಿದ್ದು, ರಾಜ್ಯದ ಮೊದಲ ನಕ್ಸಲ್ ಎನ್‌ಕೌಂಟರ್ ನಡೆದ ಸ್ಥಳ ಈದು ಬೊಲ್ಲೊಟ್ಟುನಿಂದ ಸುಮಾರು 1 ಕಿ.ಮೀ.ದೂರದಲ್ಲಿಯೇ ಈ ಬಾರಿ ನಕ್ಸಲರು ಕಾಣಿಸುವ ಮೂಲಕ ಪಶ್ಚಿಮಘಟ್ಟದ ತಪ್ಪಲಿನಲ್ಲಿ ಮತ್ತೆ ಸುದ್ದಿಯಾಗಿದ್ದಾರೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಕೇರಳದಲ್ಲಿ ನಕ್ಸಲ್ ಎನ್‌ಕೌಂಟರ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ನಕ್ಸಲ್ ವಲಸೆ ಆರಂಭಗೊಂಡಿದೆ ಎನ್ನುವ ಸಂದೇಹಗಳು ವ್ಯಕ್ತವಾಗಿದೆ.
ನಕ್ಸಲರ ಚಟುವಟಿಕೆಗಳು ಕಡಿಮೆಗೊಂಡಿದೆ ಎನ್ನುವ ಕಾರಣಕ್ಕೆ ನಕ್ಸಲ್ ನಿಗ್ರಹ ದಳ ಕೂಬಿಂಗ್ ಕಾರ್ಯಾಚರಣೆಯಲ್ಲೂ ಸಡಿಲಿಕೆ ಮಾಡಿದೆ. ಕಾರ್ಕಳದ ಪೇಟೆಯಲ್ಲಿ ಪ್ರತ್ಯೇಕವಾದ ಎಎನ್‌ಎಫ್ ಕೇಂದ್ರ ಹಾಗೂ ಪಶ್ಚಿಮಘಟ್ಟದಲ್ಲಿ ಪ್ರತ್ಯೇಕ ತಂಡಗಳಲ್ಲಿ ಕಾರ್ಯಾಚರಣೆ ನಡೆಸುತ್ತಿತ್ತು. ಇದೀಗ ಹೆಚ್ಚಿನ ಅನುಭವಿ ಎಎನ್‌ಎಫ್ ಸಿಬ್ಬಂದಿಗಳನ್ನು ಮಾತೃ ಇಲಾಖೆಗೆ ವರ್ಗಾವಣೆಗೊಳಿಸಲಾಗಿದ್ದು, ಹೊಸ ಸಿಬ್ಬಂದಿಗಳು ಎಎನ್‌ಎಫ್‌ಗೆ ನೇಮಕಗೊಂಡಿದೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
ನಕ್ಸಲರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ನಡೆಯುತ್ತಿತ್ತು. ನಕ್ಸಲರ ಮಾಹಿತಿಯುಳ್ಳ ಬಿತ್ತಿಪತ್ರ ಹಾಗೂ ಜಾಗೃತಿ ಪತ್ರಗಳು ಕೂಡಾ ನಕ್ಸಲ್‌ಪೀಡಿತ ಪ್ರದೇಶಗಳಲ್ಲಿ ಹಂಚುವ ಮೂಲಕ ಜಾಗೃತಿ ಮೂಡಿಸುತ್ತಿದ್ದರು. ಪ್ರಸ್ತುತ ಆ ಕಾರ್ಯಕ್ರಮಗಳು ಇಲಾಖೆಯಿಂದ ನಡೆಯುತ್ತಿಲ್ಲ ಎನ್ನುವ ಆರೋಪವಿದೆ.

ಇದನ್ನೂ ಓದಿ; ಅಮೇರಿಕಾ ಎಲೆಕ್ಷನ್; ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






