NCERT: 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ

NCERT: ಭಾರತೀಯ ನ್ಯಾಯಾಂಗ ವ್ಯವಸ್ಥೆಯು ಕೆಲವು ಸವಾಲುಗಳನ್ನು ಎದುರಿಸುತ್ತಿದ್ದು, ಇದರ ಬಗ್ಗೆ ವಿದ್ಯಾರ್ಥಿಗಳಿಗೆ ನೈಜ ಮಾಹಿತಿ ನೀಡುವ ಮೂಲ ಉದ್ದೇಶದಿಂದ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಹೊಸ ಪಠ್ಯದಲ್ಲಿ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ಮತ್ತು ‘ಪ್ರಕರಣಗಳ ಭಾರಿ ಬಾಕಿ’ಯನ್ನು ದೇಶದ ನ್ಯಾಯಾಂಗ ವ್ಯವಸ್ಥೆಯ ಮುಂದಿರುವ ಪ್ರಮುಖ ಸವಾಲುಗಳೆಂದು ಉಲ್ಲೇಖಿಸಲಾಗಿದೆ.

ಪಠ್ಯಪುಸ್ತಕಗಳಲ್ಲಿ ಮೊದಲು ಕೇವಲ ನ್ಯಾಯಾಂಗದ ರಚನೆ ಮತ್ತು ಕಾರ್ಯವೈಖರಿಗೆ ಬಗ್ಗೆ ಮಾತ್ರ ಉಲ್ಲೇಖವಾಗಿತ್ತು. 2026 ಪಟ್ಟಿಯಲ್ಲಿ ಪರಿಷ್ಕೃತ ಪಠ್ಯದಲ್ಲಿ ‘ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂಬ ಅಧ್ಯಾಯದಲ್ಲಿ ವ್ಯವಸ್ಥೆಯಲ್ಲಿ ಇರುವಂತಹ ಸಂಪೂರ್ಣ ದೋಷಗಳನ್ನು ತಿಳಿಸಲಾಗಿದೆ. ಅನೇಕ ಹಂತಗಳಲ್ಲಿ ಜನರು ಭ್ರಷ್ಟಾಚಾರವನ್ನು ಎದುರಿಸುತ್ತಿದ್ದಾರೆ. ಅದರ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪಠ್ಯದಲ್ಲಿ ತಿಳಿಸಲಾಗಿದೆ.


ನ್ನೂ ಓದಿ: 6 ತಿಂಗಳು ಇಂತಹವರ ರೇಷನ್‌ ಕಾರ್ಡ್‌ ಕ್ಯಾನ್ಸಲ್‌; ಕಾರಣವೇನು ಗೊತ್ತಾ…?


ನ್ಯಾಯಾಂಗದ ಚೌಕಟ್ಟಿನಲ್ಲಿ ಕೆಲವರಿಗೆ ನ್ಯಾಯ ಸಿಗುತ್ತೆ ಇನ್ನೂ ಕೆಲವರಿಗೆ ಮುಖ್ಯವಾಗಿ ಬಡವರು ಮತ್ತು ಹಿಂದುಳಿದ ವರ್ಗದವರಿಗೆ ಮಾಡುವಂತಹ ಅನ್ಯಾಯ ಕುರಿತು ಎಚ್ಚರಿಸಲಾಗಿದೆ. ಕೋಟ್ಯಂತರ ಬಾಕಿ ಇರುವಂತಹ ಪ್ರಕರಣಗಳನ್ನು ಅಂಕಿ-ಅಂಶಗಳ ಸಮೇತ ಪಠ್ಯಕ್ರಮದಲ್ಲಿ ಅಳವಡಿಸಲಾಗಿದಿ.

* ಸುಪ್ರೀಂ ಕೋರ್ಟ್: ಸುಮಾರು 81,000 ಪ್ರಕರಣಗಳು.
* ಹೈಕೋರ್ಟ್‌ಗಳು: ಸುಮಾರು 62.40 ಲಕ್ಷ ಪ್ರಕರಣಗಳು.
* ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳು: ಸುಮಾರು 4.70 ಕೋಟಿ ಪ್ರಕರಣಗಳು.


ನ್ನೂ ಓದಿ: 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 12,000 ದಿಂದ ಸಂಬಳ


ಈ ಸವಾಲುಗಳಿಗೆ ಮುಖ್ಯ ಕಾರಣ ಹೇಳುವುದಾದರೆ ನ್ಯಾಯಾಧೀಶರ ಕೊರತೆ, ಸಂಕೀರ್ಣ ಕಾನೂನು ಪ್ರಕ್ರಿಯೆಗಳು ಮತ್ತು ಮೂಲಸೌಕರ್ಯಗಳ ಕೊರತೆಯೇ ಈ ವಿಳಂಬಕ್ಕೆ ಕಾರಣಗಳಾಗಿವೆ. ಭ್ರಷ್ಟಾಚಾರ ಜವಾಬ್ದಾರಿ ಮತ್ತು ಪಾರದರ್ಶಕತೆ: ಭ್ರಷ್ಟಾಚಾರ ತಡೆಗಟ್ಟಲು ನ್ಯಾಯಾಧೀಶರಿಗೆ ಇರುವ ನಡವಳಿಕೆ ನಿಯಮಗಳು ಮತ್ತು ದೂರು ದಾಖಲಿಸಲು ಇರುವ ‘ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣೆ ಮತ್ತು ಮೇಲ್ವಿಚಾರಣೆ ವ್ಯವಸ್ಥೆ ಬಗ್ಗೆಯೂ ಮಾಹಿತಿ ನೀಡಲಾಗಿದೆ.

NCERT: 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
NCERT: 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (NCERT:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ