Sunday, December 3, 2023
Homeಸುದ್ದಿಗಳುದೇಶChandrayaan 3 Launch: ಚಂದ್ರಯಾನ-3 ಉಡಾವಣೆ ಯಶಸ್ವಿ

Chandrayaan 3 Launch: ಚಂದ್ರಯಾನ-3 ಉಡಾವಣೆ ಯಶಸ್ವಿ

Chandrayaan 3 Launch: ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಮೂರನೇ ಚಂದ್ರಯಾನ -3 ಉಡ್ಡಯನ ಯಶಸ್ವಿಯಾಗಿದೆ.

ಇದನ್ನೂ ಓದಿ; ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಕನ್ನಡದ ನ್ಯೂಸ್ ಚಾನೆಲ್ ನಲ್ಲಿ ಕಾಣಿಸಿಕೊಂಡ ai ಆ್ಯಂಕರ್

ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಐತಿಹಾಸಿಕ ಚಂದ್ರಯಾನ-3 ಇಂದು (ಶುಕ್ರವಾರ) ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ.

ಇದನ್ನೂ ಓದಿ; ಚಿಕ್ಕಮಗಳೂರಿನಲ್ಲಿ ಹ್ಯುಂಡೈ ಎಕ್ಸ್ಟರ್ ಕಾರು ಲಾಂಚ್

ಇದನ್ನೂ ಓದಿ; ಮಳೆಗಾಲದಲ್ಲಿ ಗೆಳೆಯರ ಜೊತೆ ಟ್ರೆಕ್ಕಿಂಗ್ ಮಾಡಲು ಚಿಕ್ಕಮಗಳೂರಿನ ಬೆಸ್ಟ್ ಜಾಗ ಇಲ್ಲಿದೆ ನೋಡಿ

ಈ ಯೋಜನೆ ಯಶಸ್ವಿ ಭಾರತದ ಇತಿಹಾಸದಲ್ಲೆ ಮಹತ್ವದ ಮೈಲಿಗಲ್ಲಾಗಲಿದೆ. ಈವರೆಗೆ ಅಮೆರಿಕ, ಚೀನಾ ಮತ್ತು ರಷ್ಯಾ ಚಂದ್ರನ ಮೇಲೆ ಯಶಸ್ವಿಯಾಗಿ ಉಪಗ್ರಹವನ್ನು ಲ್ಯಾಂಡ್ ಮಾಡಿವೆ. ಇಂತಹ ಸಾಧನೆ ಮಾಡಿದ ಕೆಲವೇ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಿದೆ.

ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಜಿಎಸ್‌ಎಲ್‌ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಲ್ಲಿ ಚಂದ್ರನ ಲ್ಯಾಂಡರ್ ವಿಕ್ರಮ್ ಅನ್ನು ಕೂರಿಸಲಾಗಿದೆ. ಇದನ್ನು ಲಾಂಚ್ ವೆಹಿಕಲ್ ಮಾರ್ಕ್ 3 (LM-3) ಎಂದು ಮರುನಾಮಕರಣ ಮಾಡಲಾಗಿದ್ದು, ಈ GSLV 43.5 ಮೀಟರ್ ಎತ್ತರವಿದೆ. ಈ ಪ್ರಯಾಣವು 40 ದಿನಗಳದ್ದಾಗಿದ್ದು, ಆಗಸ್ಟ್ 23 ರಂದು ಬಾಹ್ಯಾಕಾಶ ನೌಕೆಯು ಚಂದ್ರನ ಮೇಲೆ ಸ್ಪರ್ಶಿಸುವ ನಿರೀಕ್ಷೆಯಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು 

ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯ ಸಾಫ್ಟ್ ಲ್ಯಾಂಡಿಂಗ್ ಆಗಸ್ಟ್ ಅಂತ್ಯದಲ್ಲಿ ನಡೆಯಲಿದೆ. ಇದು ಯಶಸ್ವಿಯಾದರೆ ಭವಿಷ್ಯದ ಅಂತರಗ್ರಹ ಕಾರ್ಯಾಚರಣೆಗಳಿಗೆ ಮುನ್ನುಡಿ ಬರೆಯಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಸುಲಭವಾಗಿ ಇಳಿಸುವ 6 ವಾರಗಳ ಮಿಷನ್ ಗೆ ಅಧಿಕೃತ ಚಾಲನೆ ಸಿಕ್ಕಿದೆ. ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ. ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.

ಇದನ್ನೂ ಓದಿ; ರಘು ಸಕಲೇಶಪುರ ಸೇರಿದಂತೆ ಮೂರು ಜನರಿಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

ಚಂದ್ರಯಾನ-2 ಏನಾಗಿತ್ತು?:
2019 ರಲ್ಲಿ ಚಂದ್ರಯಾನ-2 ಯೋಜನೆ ಕೈಗೊಳ್ಳಲಾಗಿತ್ತು. ಎಲ್ಲ ಪ್ರಕ್ರಿಯೆಗಳೂ ಸರಿಯಾಗಿಯೆ ನಡೆದಿದ್ದವು. ಆದರೆ ಚಂದ್ರನ ಮೇಲೆ ರೋವರ್ ಇಳಿಯುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ನಿಯಂತ್ರಣ ಕೇಂದ್ರದ ಜೊತೆ ಸಂಪರ್ಕ ಕಡಿದುಕೊಂಡು ಸಾಫ್ಟ್ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ.

Most Popular

Recent Comments