(NEW RATION CARD) ಹೊಸದಾಗಿ ಮದುವೆ ಆದವರು ಹಾಗೂ ಮಕ್ಕಳನ್ನು ರೇಷನ್ ಕಾರ್ಡ್ ಗೆ ಸೇರ್ಪಡೆ ಮಾಡಬೇಕೆಂದು ಅಂದುಕೊಂಡವರಿಗೆ ಈ ಸುದ್ದಿ ಬಹಳ ಉಪಯುಕ್ತವಾಗಲಿದೆ. ರೇಷನ್ ಕಾರ್ಡ್ ನಲ್ಲಿ ಹೆಸರು ಸೇರಿಸುವ ವಿಧಾನವನ್ನು ತಿಳಿಯಿರಿ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಪಡಿತರ ಚೀಟಿ ಪಡೆಯಲು ಇರಬೇಕಾದ ಅರ್ಹತೆ ಏನು?:
* ಹೊಸ ಪಡಿತರ ಚೀಟಿಗಾಗಿ (New Ration Card) ನವ ದಂಪತಿಗಳು ಅರ್ಜಿ ಸಲ್ಲಿಸಬಹುದು.
* ತಮ್ಮ ಕುಟುಂಬದಿಂದ ಹೊರಗೆ ಉಳಿದು ಪ್ರತ್ಯೇಕವಾಗಿ ವಾಸಿಸುವವರು ಅರ್ಜಿ ಸಲ್ಲಿಸಬಹುದು.(ಹಿಂದಿನ ರೇಷನ್ ಕಾರ್ಡ್ ನಲ್ಲಿ ಹೆಸರು ಇದ್ದರೆ ಅದನ್ನು ತೆಗೆಸಿ ಹಾಕಬೇಕು.)
* ಕುಟುಂಬದ ಆದಾಯದ ಆಧಾರದ ಮೇಲೆ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ (APL/BPL) ಎಂದು ನಿರ್ಧರಿಸಲಾಗುತ್ತದೆ.
ರೇಷನ್ ಕಾರ್ಡ್ ಗೆ ಆಫ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?:
* ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಹೆಸರು ನೋಂದಾಯಿಸಲು ಆಹಾರ ಇಲಾಖೆಯ ಕಚೇರಿಗೆ ತೆರಳಿ ಫಾರ್ಮ್ ಪಡೆಯಬೇಕು.
* ಈ ನಮೂನೆಯಲ್ಲಿ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಆಹಾರ ಇಲಾಖೆ ಕೇಂದ್ರಕ್ಕೆ ಸಲ್ಲಿಸಿ..
* ಆದರೆ ಈ ಫಾರ್ಮ್ ಅನ್ನು ಸಲ್ಲಿಸಿದ ನಂತರ, ರಸೀದಿಯನ್ನು ತಪ್ಪದೇ ತೆಗೆದುಕೊಳ್ಳಿ.
* ಇದಾದ ನಂತರ ದಾಖಲೆಗಳನ್ನು ಪರಿಶೀಲಿಸಿದ ನಂತರ ಹೊಸ ಪಡಿತರ ಚೀಟಿಯನ್ನು ಪಡೆಯಬಹುದು.
ಇದನ್ನೂ ಓದಿ; 25,000 ರಿಂದ 35,000 ಸಿಗುವ ಸ್ಕಾಲರ್ ಶಿಪ್; ಒಂದೇ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಿ
ರೇಷನ್ ಕಾರ್ಡ್ ಗೆ ಆನ್ಲೈನ್ ಅರ್ಜಿ ಸಲ್ಲಿಸುವುದು ಹೇಗೆ?:
* https://ahara.kar.nic.in/home ಲಾಗಿನ್ (login) ಆಗಿ
* ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು (select) ಕ್ಲಿಕ್ (click) ಮಾಡಿ
* ಹೊಸ ಪೇಜ್ ನಲ್ಲಿ ಫಾರ್ಮ್ ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ (scan) ಪ್ರತಿಯನ್ನು ಅಪ್ ಲೋಡ್ (upload) ಮಾಡಿ.
* ಅಪ್ ಲೋಡ್ ಮಾಡಿದ ನಂತರ ಫಾರ್ಮ್ (form) ಅನ್ನು ಸಬ್ ಮಿಟ್ ಮಾಡಿ
* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಹೊಸ ಪಡಿತರ ಚೀಟಿಯನ್ನೂ (New Ration Card Request) ಕಳಿಸಲಾಗುತ್ತದೆ.
ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!
ration card: ಬೇಕಾಗಿರುವ ದಾಖಲೆಗಳು:
* ಆಧಾರ್ ಕಾರ್ಡ್ (aadar card)
* ಖಾಯಂ ನಿವಾಸದ ಪುರಾವೆ (address proof)
* ಮೊಬೈಲ್ ಸಂಖ್ಯೆ (mobile no)
* ಡ್ರೈವಿಂಗ್ ಲೈಸೆನ್ಸ್ (Driving license)
* ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ (Photo)
* ಮತದಾರರ ಗುರುತಿನ ಚೀಟಿ (Voter ID Card)
* ಆದಾಯ ಪ್ರಮಾಣ ಪತ್ರ (Income certificate)
* ಮನೆಯ ಸದಸ್ಯರ ಬಗ್ಗೆ ಮಾಹಿತಿ
ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
ಗಮನಿಸಿ: ರೇಷನ್ ಕಾರ್ಡ್ ಗಾಗಿ ತಿದ್ದುಪಡಿ/ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಸರ್ಕಾರ ಪ್ರಕಟಣೆ ಹೊರಡಿಸಿದಾಗ ನೀವು ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






