(New-Year:) ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ ಶುರುವಾಗಿದೆ. ಆದರೆ, ಆಚರಣೆಯ ಸಮಯದಲ್ಲಿ ಸಂಚಾರ ನಿಯಮ ಪಾಲನೆ ಹಾಗೂ ಕೆಲವು ಪ್ರವಾಸಿ ತಾಣಗಳಿಗೆ ನಿಷೇಧಿಸಲಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ
ಈ ಸಂಚಾರ ನಿಯಮ ಪಾಲನೆ ಕಡ್ಡಾಯ:
1. ನಿಗದಿತ ಮಿತಿಗಿಂತ ವೇಗವಾಗಿ ವಾಹನ ಚಲಾಯಿಸಬೇಡಿ. ಅತಿ ವೇಗದ ಚಾಲನೆ ಅಪಘಾತದ ಅಪಾಯವನ್ನು ಸೃಷ್ಟಿಸುತ್ತದೆ. ಮಿತಿಮೀರಿದ ವೇಗಕ್ಕಾಗಿ ಸಂಚಾರ ಪೊಲೀಸರು 2000 ರೂಪಾಯಿಗಳವರೆಗೆ ದಂಡವನ್ನು ವಿಧಿಸಬಹುದು.
2. ಕಾರಿನಲ್ಲಿ ಪಾರ್ಟಿಗೆ ಹೋಗುತ್ತಿದ್ದರೆ ಅಥವಾ ಪಾರ್ಟಿಯಿಂದ ಹಿಂತಿರುಗುತ್ತಿದ್ದರೆ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಈ ಯೋಜನೆ ಜಾರಿ
3. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದರೆ ಹೆಲ್ಮೆಟ್ ಧರಿಸಲು ಮರೆಯದಿರಿ.
4. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ. ಡ್ರಿಂಕ್ ಆ್ಯಂಡ್ ಡ್ರೈವಿಂಗ್ ಗೆ ಸಂಬಂಧಿಸಿದಂತೆ ಸಂಚಾರ ನಿಯಮಗಳು ಕಠಿಣವಾಗಿದ್ದು, 15,000 ದಂಡ ಹಾಗೂ 2 ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ.
5. ಇನ್ನು ವಾಹನ ಚಾಲನೆ ವೇಳೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ಉದಾಹರಣೆಗೆ ವಿಂಗ್ ಲೈಸೆನ್ಸ್, ಕಾರು ವಿಮೆ ಹಾಗೂ ಇತ್ಯಾದಿ ದಾಖಲೆ ಹೊಂದಿರಬೇಕು.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಯಾವೆಲ್ಲಾ ಪ್ರವಾಸಿ ತಾಣಗಳಿಗೆ ನಿಷೇಧ:
1. ಹೊಸ ವರ್ಷದ ಹಿನ್ನೆಲೆ ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್, ಮಾಣಿಕ್ಯಧಾರ ಫಾಲ್ಸ್ ಗೆ ನಿಷೇಧಿಸಲಾಗಿದೆ. ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆ ತನಕ ಬಂದ್ ಆಗಲಿವೆ. ಹಾಗೆಯೇ ಹೋಮ್ ಸ್ಟೇ, ರೆಸಾರ್ಟ್ಗಳಲ್ಲಿ ಇಂದು ರಾತ್ರಿ 10 ಗಂಟೆಗೆ ಡಿಜೆ, ಸ್ಪೀಕರ್ ಬಂದ್ ಮಾಡಬೇಕು. ಅನುಮತಿ ಪಡೆಯದೇ ಪಾರ್ಟಿ ಮಾಡುವಂತಿಲ್ಲ ಎಂದು ಎಸ್ಪಿ ಆದೇಶಿಸಿದ್ದಾರೆ.
2. ಪ್ರವಾಸಿಗರ ಹಾಟ್ ಸ್ಪಾಟ್ ಚಿಕ್ಕಳ್ಳಾಪುರದ ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
3. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಂಜೆ 7ಗಂಟೆ ನಂತರ ಪ್ರವಾಸಿಗರಿಗೆ ನಿರ್ಬಂಧ ಇರಲಿದ್ದು, ಜನವರಿ 1ರಂದು ಎಂದಿನಂತೆ ತೆರಳಬಹುದು.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
4. ಇನ್ನು ಕೆಆರ್ಎಸ್ ಹಿನ್ನೀರು, ಬಲಮುರಿ, ಎಡಮುರಿ, ಕಾವೇರಿ ನದಿ ತೀರ ಪ್ರವೇಶಕ್ಕೆ ಜನವರಿ 1ರ ರಾತ್ರಿವರೆಗೂ ನಿರ್ಬಂಧ ಹೇರಲಾಗಿದೆ. ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ತೀರದಲ್ಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
(New-Year:) ಯಾವೆಲ್ಲಾ ಪ್ರವಾಸಿ ತಾಣ ಓಪನ್:
1. ಕಾರವಾರದ ಮುರುಡೇಶ್ವರ ಕಡಲ ತೀರ 20 ದಿನದಿಂದ ಬಂದ್ ಆಗಿತ್ತು. ಇದೀಗ ಪ್ರವಾಸಿಗರಿಗೆ ತೆರೆಯಲಾಗುತ್ತಿದೆ.
ಇದನ್ನೂ ಓದಿ: 80,000 ವರೆಗೆ ಸಾಲ ಸೌಲಭ್ಯ; ಈ ಸಾಲಕ್ಕೆ ಅರ್ಜಿ ಸಲ್ಲಿಸೋದು ಹೇಗೆ?, ಇಲ್ಲಿದೆ ನೋಡಿ ಡಿಟೈಲ್ಸ್
2. ಜೋಗ ಜಲಪಾತ ವೀಕ್ಷಣೆಗೂ, ಜನವರಿ 1ರಿಂದ ಮಾರ್ಚ್ 15ರ ತನಕ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಆದರೆ ಈಗ ಜಲಪಾತ ವೀಕ್ಷಣೆಗಿದ್ದ ನಿರ್ಬಂಧ ತೆರವು ಮಾಡಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





