NHAI Recruitment: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು, ಹಾಗೂ ಕೊನೆ ದಿನಾಂಕ ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ರ್ಜಿ ಆಹ್ವಾನಿಸಿದೆ. ಭಾರತ ಸರ್ಕಾರದ ಅಡಿಯಲ್ಲಿ ಬರುವಂತ ಉದ್ಯೋಗದ ಹುಡುಕಾಟದಲ್ಲಿ ಸುಮಾರು ಯುವಕರು ತೊಡಕೊಂಡರುತ್ತಿರುವಿರಿ. ಅಂತಹವರಿಗೆ ಸರ್ಕಾರ ಸುವರ್ಣಾವಕಾಶ ಒದಗಿಸಿದೆ. ಆಸಕ್ತ ಮತ್ತು ಅರ್ಹ ಆಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ಅರ್ಹತೆ ಮತ್ತು ವಯೋಮಿತಿ:
* ಅರ್ಜಿ ಪ್ರಕ್ರಿಯೆ ಆನ್‌ಲೈನ್ ಮೂಲಕ ಸಲ್ಲಿಸುವುದಾಗಿರುತ್ತದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ.
* ಅಭ್ಯರ್ಥಿಯ ಗರಿಷ್ಠ ವಯೋಮಿತಿ 30 ವರ್ಷಗಳಾಗಿರಬೇಕು. ಒಬಿಸಿ ಅಭ್ಯರ್ಥಿಗಳು 3 ವರ್ಷ, ಎಸ್‌ಸಿ/ಎಸ್‌ಟಿ ಅವರಿಗೆ 5 ವರ್ಷ, ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ, ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷ ಸಡಿಲಿಕೆ ಇರುತ್ತದೆ.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಸರ್ಕಾರದಡಿ ಉದ್ಯೋಗಕ್ಕೆ ತಯಾರಿ ನಡೆಸುವತ್ತಿರುವರಿಗೆ ಇದೊಂದು ಉನ್ನತ ಅವಕಾಶ ದೊರಕಿದಂತಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 9ರೊಳಗೆ ನಿಗದಿತ ಸಮಯಕ್ಕೆ ಅರ್ಜಿ ಸಲ್ಲಿಸಬೇಕು. ಹೀಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆಗಾಗ ನೇಮಕಾತಿ ಬಗ್ಗೆ ಅಪ್ಡೇಟ್ ಮಾಹಿತಿ ಒದಗಿಸುತ್ತಿರುತ್ತದೆ. ಇದೀಗ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಭಾರತ ಸರ್ಕಾರದ ಅಡಿಯಲ್ಲಿ ಉದ್ಯೋಗ ಮಾಡಬಯಸುವವರಿಗೆ ಇದೊಂದು ಉತ್ತಮ ಅವಕಾಶ ಅಂತಲೇ ಹೇಳಬಹುದು.






