Sunday, June 4, 2023
Homeಇತರೆದೇಶದಲ್ಲಿ ಪ್ರಥಮ ಬಾರಿಗೆ ಕರ್ನಾಟಕದಲ್ಲಿ "ಉದ್ಯೋಗ ನೀತಿ" ಜಾರಿ : ಸಿ ಎಂ ಬೊಮ್ಮಾಯಿ ...

ದೇಶದಲ್ಲಿ ಪ್ರಥಮ ಬಾರಿಗೆ ಕರ್ನಾಟಕದಲ್ಲಿ “ಉದ್ಯೋಗ ನೀತಿ” ಜಾರಿ : ಸಿ ಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಉದ್ಯೋಗ ನೀತಿಯನ್ನು ಕರ್ನಾಟಕದಲ್ಲಿ ರೂಪಿಸುವುದಾಗಿ ಸಿ. ಎಂ ಬಸವರಾಜ ಬೊಮ್ಮಾಯಿ ಘೋಷಣೆಯನ್ನು ಹೊರಡಿಸಿದ್ದಾರೆ.

ಬೆಂಗಳೂರು ಅರಮನೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಿರುವ ‘ ಉದ್ಯಮಿಯಾಗು – ಉದ್ಯೋಗ ನೀಡು’ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಬೊಮ್ಮಾಯಿ ಉದ್ಯೋಗ ನೀತಿಯ ರಚನೆಯ ಕುರಿತು ಚಿಂತನೆಯನ್ನು ನಡೆಸಲಾಗುತ್ತಿದೆಸದ್ಯದಲ್ಲಿಯೇ ಈ ವಿಷಯದ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಸದ್ಯದಲ್ಲಿಯೇ ಈ ವಿಷಯದ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಗರಿಷ್ಠ ಉದ್ಯೋಗವನ್ನು ನೀಡುವ ಕೈಗಾರಿಕೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪ್ರೋತ್ಸಾಹಕಗಳನ್ನು ರಾಜ್ಯದಲ್ಲಿ ನೀಡಲಾಗುತ್ತದೆ ಎಂದರು.

ಕರ್ನಾಟಕ ಉದ್ಯಮಸ್ನೇಹಿ ರಾಜ್ಯ ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ನಮ್ಮ ರಾಜ್ಯದಲ್ಲಿ ಸಾಧ್ಯವಾಗಿಸಿದೆ. ಉದ್ಯಮಗಳು ಸ್ಥಾಪನೆಯಾಗಲು ಸೂಕ್ತ ವಾತಾವರಣ ನಿರ್ಮಾಣ ಮಾಡಿ, ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು.

ವಲಯವಾರು ತರಬೇತಿಯನ್ನು ನೀಡುವ ತೀರ್ಮಾನವನ್ನು ಕೈಗಾರಿಕಾ ಇಲಾಖೆಯು ಈಗಾಗಲೇ ಕೈಗೊಂಡಿದೆ. ಯುವಕರಲ್ಲಿ ಹೊಸ ಉತ್ಸಾಹ, ಚೈತನ್ಯ ಹಾಗೂ ವೃತ್ತಿ ಮಾರ್ಗದರ್ಶನವನ್ನು ನೀಡುವ ಕೆಲಸವನ್ನು ಸಹ ಮಾಡುತ್ತಿದ್ದು, ಯುವಜನರಲ್ಲಿ ಸಮಯ ಪ್ರಜ್ಞೆ, ಶ್ರಮ,ದುಡಿಮೆ ಇದ್ದರೆ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ ಇಂದಿನ ಪೀಳಿಗೆಯ ಯುವಕರು ಉದ್ಯಮವನ್ನು ಸ್ಥಾಪಿಸುವ ಸಂಕಲ್ಪವನ್ನು ಮಾಡಬೇಕು ಎಂದು ಯುವಜನತೆಗೆ ಕರೆಯನ್ನು ನೀಡಿದರು. ಇಂದು ಹಿಂದೆ ಕುಳಿತಿರುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ವೇದಿಕೆಯ ಮುಂಭಾಗದಲ್ಲಿ ಕುಳಿತುಕೊಳ್ಳುವಂತಾಗಬೇಕು ಎಂದರು.

ಮುರುಗೇಶ್ ನಿರಾಣಿ, ಎಂಟಿಬಿ ಅವರು ಉದ್ಯಮಿಯಾಗಿ ಉದ್ಯೋಗ ಕಲ್ಪಿಸಿ, ತಂತ್ರಜ್ಞಾನ ಬಳಸಿ, ರೈತರಿಗೆ ಅನುಕೂಲ ಕಲ್ಪಿಸಿ ಉತ್ತಮ ಸಾಧನೆ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

ಈ ಉದ್ಘಾಟನಾ ಸಮಾರಂಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಎಂ.ಟಿ.ಬಿ.ನಾಗರಾಜ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Most Popular

Recent Comments