(Om Prakash:) ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ಕೊ*ಲೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಪತ್ನಿ ಪಲ್ಲವಿ ಅವರೇ ಹ*ತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ
68 ವರ್ಷದ ಓಂ ಪ್ರಕಾಶ್ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಮನೆಯಲ್ಲಿ (Om Prakash:) ವಾಸವಾಗಿದ್ದರು. ಪತ್ನಿಯ ಜೊತೆ ಮನಸ್ಥಾಪವಿತ್ತು. ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಪತ್ನಿ ಭಾನುವಾರ ಸಂಜೆ ಓಂ ಪ್ರಕಾಶ್ ಅವರನ್ನು ಕೊ*ಲೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯ ಕುರಿತು ಎಚ್ಎಸ್ಆರ್ ಲೇಔಟ್ನಲ್ಲಿ ಪ್ರಕರಣ ದಾಖಲಾಗಿದೆ.
ಕೊ*ಲೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಓಂ ಪ್ರಕಾಶ್ ಹಾಗೂ ಅವರ ಪತ್ನಿ ಜಗಳ ನೆರೆ ಹೊರೆ, ಸಂಬಂಧಿಕರು ಹಾಗೂ ಹಲವು ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ತಿಳಿದಿತ್ತು. ಕೆಲ ದಿನಗಳಿಂದ ಜಗಳ ತಾರಕಕ್ಕೇರಿ ಪತ್ನಿ ಮನೆಯಲ್ಲಿ ದೊಡ್ಡ ರಾದ್ಧಾಂತವನ್ನೇ ಮಾಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
(Om Prakash:) ಪತ್ನಿ ಹಾಗೂ ಪುತ್ರಿ ವಶಕ್ಕೆ
ಈ ವೇಳೆ ಮನೆಯಲ್ಲಿದ್ದ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿಯನ್ನು ವಶಕ್ಕೆ ಪಡೆದಿದ್ದಾರೆ.
ಓಂ ಪ್ರಕಾಶ್ ಬಿಹಾರದ ಚಂಪಾರಣ್ ಮೂಲದವರು ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಹರಪನಹಳ್ಳಿಯಲ್ಲಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ತಮ್ಮ ಪೊಲೀಸ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ಬಳಿಕ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ಆಗಿಯೂ ಸೇವೆ ಸಲ್ಲಿಸಿದ್ದರು. ಓಂ ಪ್ರಕಾಶ್ 1981 ರ ಬ್ಯಾಚ್ ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿದ್ದರು.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ
ರಾಜ್ಯದ ಶಿವಮೊಗ್ಗ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಆಗಿಯೂ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಲೋಕಾಯುಕ್ತ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಅಪರಾಧ ತನಿಖಾ ಇಲಾಖೆ (ಸಿಐಡಿ) ಯಲ್ಲಿಯೂ ಓಂ ಪ್ರಕಾಶ್ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಮಾರ್ಚ್ 1, 2015 ರಂದು ಓಂ ಪ್ರಕಾಶ್ ಅವರು ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕವಾದರು.(Om Prakash:)
ಪುತ್ರ ಕಾರ್ತಿಕೇಶ್ ಕೊಟ್ಟ ದೂರಲ್ಲೇನಿದೆ?
ಮಗ ಕಾರ್ತಿಕೇಶ್ ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಂಶವೇನೆಂದರೆ, ನನ್ನ ತಾಯಿಯಾದ ಶ್ರೀಮತಿ ಪಲ್ಲವಿ ರವರು ನಮ್ಮ ತಂದೆ ನಿವೃತ್ತ ಡಿ.ಜಿ, ಮತ್ತು ಐ.ಜಿ.ಪಿ ಯಾದ ಶ್ರೀ ಓಂ ಪ್ರಕಾಶ್ ರವರಿಗೆ ಕಳೆದ ಒಂದು ವಾರದಿಂದ ಕೊಲೆ ಬೆದರಿಕೆ ಹಾಕುತ್ತಿದ್ದರಿಂದ ತಂದೆಯವರು ಅವರ ಸಹೋದರಿಯಾದ ಸರೀತಾ ಕುಮಾರಿಯವರ ಮನೆಯಲ್ಲಿ ಹೋಗಿ ವಾಸವಿದ್ದರು. ನಂತರ ನನ್ನ ತಂಗಿಯಾದ ಕೃತಿಯವರು ಈಗ 02 ದಿನಗಳ ಹಿಂದೆ ಸರೀತಾ ಕುಮಾರಿಯವರ ಮನೆಗೆ ಹೋಗಿ ನಮ್ಮ ತಂದೆ ಶ್ರೀ. ಓಂ ಪ್ರಕಾಶ್ ರವರನ್ನು ಮರಳಿ ಮನೆಗೆ ಬರುವಂತೆ ಪೀಡಿಸಿ ಕರೆದುಕೊಂಡು ಬಂದಿದ್ದಳು.
ದಿನಾಂಕ 20/04/2025 ರಂದು ಸಂಜೆ ಸುಮಾರು 17-00 ಗಂಟೆಗೆ ನಾನು ದೊಮ್ಮಲೂರಿನಲ್ಲಿರುವ ಕರ್ನಾಟಕ ಗಾಟ್ಸ್ ಆಸೋಸಿಯಷನ್ ನಲ್ಲಿ ಇರಬೇಕಾದರೆ, ನಮ್ಮ ಪಕ್ಕದ ಮನೆಯವರಾದ ಜಯಶ್ರೀ ಶ್ರೀಧರನ್ ರವರು ಕರೆಮಾಡಿ ನಿಮ್ಮ ತಂದೆ ಓಂ ಪ್ರಕಾಶ್ ರವರ ದೇಹ ಕೆಳಗೆ ಬಿದ್ದಿರುತ್ತದೆಂದು ತಿಳಿಸಿದರು. ತಕ್ಷಣ ನಾನು ಸುಮಾರು 17-45 ಗಂಟೆಗೆ ಮನೆಗೆ ಬಂದು ನೋಡಲಾಗಿ ಮನೆಯಲ್ಲಿ ಪೊಲೀಸ್ ನವರು ಮತ್ತು ಸಾರ್ವಜನಿಕರು ಇದ್ದು, ನಮ್ಮ ತಂದೆಯವರ ತಲೆಗೆ ಮತ್ತು ಮೈತುಂಬ ರಕ್ತವಾಗಿತ್ತು. ದೇಹದ ಪಕ್ಕದಲ್ಲಿ ಹೊಡೆದಿರುವ ಬಾಟಲ್ ಮತ್ತು ಚಾಕು ಇದ್ದವು. ನಂತರ ನಮ್ಮ ತಂದೆಯವರ ದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು. ನಮ್ಮ ತಾಯಿ ಶ್ರೀಮತಿ ಪಲ್ಲವಿ, ತಂಗಿ ಕೃತಿ ರವರು ಖಿನ್ನತೆಯಿಂದ ಬಳಲುತ್ತಿದ್ದು, ಪ್ರತಿನಿತ್ಯ ನಮ್ಮ ತಂದೆಯೊಂದಿಗೆ ಜಗಳ ಮಾಡುತ್ತಿದ್ದರು. ನಮ್ಮ ತಾಯಿ ಪಲ್ಲವಿ ಮತ್ತು ತಂಗಿ ಕೃತಿ ರವರು ನಮ್ಮ ತಂದೆಯನ್ನು ಕೊಲೆ ಮಾಡಿರುವ ಬಗ್ಗೆ, ಶಂಕೆಯಿದ್ದು, ಈ ಬಗ್ಗೆ ಕಾನೂನು ಕ್ರಮ ಜರುಗಿಸಬೇಕೆಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Om Prakash:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





