ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಪೊಲೀಸ್ ಕಾನ್ ಸ್ಟೆಬಲ್ ಪೂರ್ಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಪ್ರಕಾಶ ಬಂಧಿತ ಆರೋಪಿ.
ಮಾರ್ಚ್ 25 ರಂದು ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್ ಬಳಿಯಲ್ಲಿ ಪೂರ್ಣೇಶ್ ಹತ್ಯೆ ಮಾಡಲಾಗಿತ್ತು. ಪೂರ್ಣೇಶ್ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದರು. ವಿಪರೀತ ಮದ್ಯವ್ಯಸನಿಯಾಗಿದ್ದ ಪೂರ್ಣೇಶ್, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ಣೇಶ್ ಹತ್ಯೆಯ ಆರೋಪಿಯಾದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಘಟನೆಯು ನಡೆದ ದಿನ ಪ್ರಕಾಶ್ ಹಾಗೂ ಪೂರ್ಣೇಶ್ ನಡುವೆ ಕುಡಿತದ ವಿಚಾರಕ್ಕೆ ಗಲಾಟೆ ನಡೆದಿದೆ. ಇದೇ ಕಾರಣಕ್ಕಾಗಿ ಪ್ರಕಾಶ್, ಪೂರ್ಣೇಶನ ತಲೆ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಆರೋಪಿಯನ್ನು ಪೊಲೀಸರು ಇನ್ನಷ್ಟು ತನಿಖೆಗೆ ಒಳಪಡಿಸಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.