online applications: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(online applications:) ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಸುವಿಧಾ ಯೋಜನೆಯಡಿ ವಿವಿಧ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್; ಏನದು…?


ಯಾವುದೆಲ್ಲಾ ಯೋಜನೆಗೆ:
ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿಕ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಯೋಜನೆಗಳನ್ನು ಡಿ.ಬಿ.ಟಿ ತಂತ್ರಾಂಶದ ಮೂಲಕ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.


ಇದನ್ನೂ ಓದಿ: ಭಾಗ್ಯಲಕ್ಷ್ಮೀ ಫಲಾನುಭವಿಗಳ ಗಮನಕ್ಕೆ; ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನ


ಅರ್ಜಿ ಸಲ್ಲಿಕೆ ಎಲ್ಲಿ?:
ಆಸಕ್ತ ಅರ್ಹ ವಿಕಲಚೇತನರು ಆನ್‌ಲೈನ್ ಮೂಲಕ ಗ್ರಾಮಾ ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟಲ್‌ನಲ್ಲಿ ಅ.15ರೊಳಗಾಗಿ ಅರ್ಜಿ ಸಲ್ಲಿಸಬೇಕು.

online applications: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
online applications: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (online applications:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ