Sunday, October 1, 2023
Homeರಾಜಕೀಯ‘ಕುಮಾರಸ್ವಾಮಿ ಯಾರ್ರೀ?’ ಮೂಡಿಗೆರೆಯಲ್ಲಿ ಸಾಮೂಹಿಕ ರಾಜೀನಾಮೆಗೆ ಮುಂದಾದ ಜೆಡಿಎಸ್ ಕಾರ್ಯಕರ್ತರು

‘ಕುಮಾರಸ್ವಾಮಿ ಯಾರ್ರೀ?’ ಮೂಡಿಗೆರೆಯಲ್ಲಿ ಸಾಮೂಹಿಕ ರಾಜೀನಾಮೆಗೆ ಮುಂದಾದ ಜೆಡಿಎಸ್ ಕಾರ್ಯಕರ್ತರು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಇತ್ತೀಚಿಗಷ್ಟೇ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಮೂಡಿಗೆರೆ ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ ವಿರುದ್ಧ ಮೂಲ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ಘೋಷಿಸಿದ ಎರಡನೇ ಪಟ್ಟಿಯಲ್ಲಿ ಮೂಡಿಗೆರೆ ಬಿಜೆಪಿ ಹಾಲಿ ಶಾಸಕರಾಗಿದ್ದ ಎಂ ಪಿ ಕುಮಾರಸ್ವಾಮಿ ಅವರಿಗೆ ಕೈ ತಪ್ಪಿತ್ತು. ಕುಮಾರಸ್ವಾಮಿ ಬದಲಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ಘೋಷಿಸಿತ್ತು. ಇದಾದ ಬಳಿಕ ಎಂ ಪಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಬಿಜೆಪಿ ಟಿಕೆಟ್ ತಪ್ಪಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದರು. ಆದರೆ ಈಗ ಕ್ಷೇತ್ರದಲ್ಲಿ ಎಂ ಪಿ ಕುಮಾರಸ್ವಾಮಿ ವಿರುದ್ಧ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಜೆಡಿಎಸ್ ಈ ಹಿಂದೆ ಮಾಜಿ ಸಚಿವ ಬಿಬಿ ನಿಂಗಯ್ಯ ಅವರ ಹೆಸರು ಘೋಷಣೆ ಮಾಡಿತ್ತು, ಅದರೆ ಎಂ ಪಿ ಕುಮಾರಸ್ವಾಮಿ ಸೇರ್ಪಡೆ ಬಳಿಕ ಅವರಿಗೆ ಟಿಕೆಟ್ ಘೋಷಣೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಮೂಲ ಜೆಡಿಎಸ್ ಕಾರ್ಯಕರ್ತರು ಎಂ ಪಿ ಕುಮಾರಸ್ವಾಮಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ‘ಯಾರ್ರೀ ಕುಮಾರಸ್ವಾಮಿ.. ಎಲ್ಲಿದ್ರು ಇಷ್ಟು ದಿನ. ಅವರಿಗೆ ಟಿಕೆಟ್ ನೀಡಿದಲ್ಲಿ ನಾವು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; 5 ನಿಮಿಷದಲ್ಲಿ ಕೈ ಸೇರುತ್ತೆ ಡಿಜಿಟಲ್ ವೋಟರ್ ಐಡಿ

ಇತ್ತೀಚಿಗೆ ಕಡೂರಿನಲ್ಲಿ ಕೂಡ ಜೆಡಿಎಸ್ ಇದೇ ದ್ವಂದ್ವ ನಿಲುವು ತೋರಿತ್ತು. ಮೊದಲ ಪಟ್ಟಿಯಲ್ಲಿ ಕಡೂರಿನ ಅಭ್ಯರ್ಥಿಯಾಗಿ ಸಿ ಎಂ ಧನಂಜಯ ಅವರ ಹೆಸರು ಘೋಷಣೆಯಾಗಿತ್ತು. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ ವಿ ದತ್ತಾ ಕೈ ಟಿಕೆಟ್ ಸಿಗದ ಪರಿಣಾಮ ಮರಳಿ ಜೆಡಿಎಸ್ ಸೇರ್ಪಡೆಯಾಗಿದ್ದರು. ದತ್ತಾ ಪಕ್ಷಕ್ಕೆ ವಾಪಾಸ್ ಮರಳುತ್ತಿದ್ದಂತೆ ಸಿಎಂ ಧನಂಜಯ್ ಗೆ ಟಿಕೆಟ್ ಕ್ಯಾನ್ಸಲ್ ಮಾಡಿ ದತ್ತಾ ಅವರ ಹೆಸರು ಘೋಷಿಸಿತ್ತು. ಇಲ್ಲೂ ಕೂಡ ಸಿಎಂ ಧನಂಜಯ್ ಬೆಂಬಲಿಗರು ಆಕ್ರೋಶ ಹೊರಹಾಕಿದ್ದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಇದನ್ನೂ ಓದಿ; ಹೊಳೆಯಲ್ಲಿ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತ್ಯು

ತರೀಕೆರೆ: ಕೈ ಟಿಕೆಟ್ ತಪ್ಪಿದ್ದಕ್ಕೆ ಗಳಗಳನೆ ಅತ್ತ ಗೋಪಿಕೃಷ್ಣ; ಕಾರ್ಯಕರ್ತರಿಂದ ಭುಗಿಲೆದ್ದ ಆಕ್ರೋಶ

ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಕಡೆಯ ಪಟ್ಟಿಯಲ್ಲಿ 43 ಜನರ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು ತರೀಕೆರೆಯಲ್ಲಿ ಶ್ರೀನಿವಾಸ್ ಗೆ ಟಿಕೆಟ್ ಘೋಷಿಸಿದೆ. ಕೈ ಟಿಕೆಟ್ ತಪ್ಪಿದ ಬೆನ್ನಲ್ಲೇ ಪ್ರಭಲ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣ ಕಣ್ಣೀರಿಟ್ಟಿದ್ದಾರೆ.

ತರೀಕೆರೆಯಲ್ಲಿ ಕೈ ಟಿಕೆಟ್ ಗಾಗಿ ಶ್ರೀನಿವಾಸ್ ಹಾಗೂ ಗೋಪಿಕೃಷ್ಣ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಲ್ಲದೇ ಅತೀ ಹೆಚ್ಚು ಲಿಂಗಾಯಿತ ಮತ ಹೊಂದಿರುವ ತರೀಕೆರೆಯ ಟಿಕೆಟ್ ಅನ್ನು ಲಿಂಗಾಯಿತ ನಾಯಕ ದೋರನಾಳು ಪರಮೇಶ್ ಗೆ ನೀವುವಂತೆ ಪರಮೇಶ್ ಬೆಂಬಲಿಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಸುಟ್ಟು ದೋರನಾಳು ಪರಮೇಶ್ ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಕಾಂಗ್ರೆಸ್ ತನ್ನ ಅಂತಿಮ‌ ಪಟ್ಟಿಯಲ್ಲಿ ಶ್ರೀನಿವಾಸ್ ಹೆಸರು ಘೋಷಣೆ ಮಾಡಿದೆ.

ಶ್ರೀನಿವಾಸ್ ಹೆಸರು ಘೋಷಣೆಯಾಗುತ್ತಿದ್ದಂತೆ ಕೆರಳಿದ ಗೋಪಿಕೃಷ್ಣ ಬೆಂಬಲಿಗರು ತಮ್ಮ ಜೊತೆ ಸೋತಾಗಲೂ ಇದ್ದಿದ್ದು ಗೋಪಿಕೃಷ್ಣ.. ಕೋವಿಡ್ ಸಮಯದಲ್ಲಿ ಜನರ ಜೊತೆ ಗೋಪಿಕೃಷ್ಣ ಇದ್ದರು. ಕಾಂಗ್ರೆಸ್ ನ ಈ ನಡೆ ಸರಿಯಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ವೇಳೆ ಗೋಪಿಕೃಷ್ಣ ಕಣ್ಣೀರು ಹಾಕಿದರು.

Most Popular

Recent Comments