Outsource: ಸರ್ಕಾರದಿಂದ ನೇರವಾಗಿ / ಪರೋಕ್ಷವಾಗಿ ನೇಮಕಗೊಂಡಿರುವ ಅಧಿಕಾರಿಗಳು/ ನೌಕರರಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರುವ ಅಥವಾ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಅದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
ಸರ್ಕಾರಿ ಇಲಾಖೆಗಳು, ಸರ್ಕಾರಿ ಸಂಸ್ಥೆಗಳು, ಮಂಡಳಿಗಳು, ನಿಗಮಗಳು ಇತ್ಯಾದಿಗಳಲ್ಲಿ ಇರುವ ಒಟ್ಟು ಉದ್ಯೋಗಿಗಳ ಸಂಖ್ಯೆ 11 ಲಕ್ಷಕ್ಕೂ ಹೆಚ್ಚು ಇದ್ದು ಕರ್ನಾಟಕ ಸರ್ಕಾರವು ಮಾದರಿ ಉದ್ಯೋಗದಾತರಾಗಿ, ಸರ್ಕಾರಿ ಮತ್ತು ಇತರ ಸರ್ಕಾರಿ ಅಂಗ (ಸ್ನಾಯತ್ರ) ಸಂಸ್ಥೆಗಳ ವಿವಿಧ ಉದ್ಯೋಗಿಗಳಿಗೆ (ಖಾಯಂ/ ಗುತ್ತಿಗೆ/ಹೊರಗುತ್ತಿಗೆ ಇತ್ಯಾದಿ) (Outsource) ವಿವಿಧ ಕಲ್ಯಾಣ ಕ್ರಮಗಳನ್ನು (ಪಿಎಫ್, ಕೆಜಿಐಡಿ, ಇಎಸ್‌ಐ, ವೈದ್ಯಕೀಯ ಮರುಪಾವತಿ ಇತ್ಯಾದಿ) ಪರಿಚಯಿಸುವಲ್ಲಿ ನಿರಂತರವಾಗಿ ಪ್ರಮುಖ ಪಾತ್ರವಹಿಸುತ್ತಾ ಬಂದಿರುತ್ತದೆ. ಅಧಿಕಾರಿ/ನೌಕರರ ಸಾಮಾಜಿಕ ಭದ್ರತೆಯು ಸರ್ಕಾರದ ಪ್ರಮುಖ ವಿಷಯವಾಗಿರುವುದರಿಂದ ಸಾಮಾಜಿಕ ಭದ್ರತೆ ಇದ್ದಲ್ಲಿ, ನೌಕರರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಾರ್ಯನಿರ್ವಹಿಸುತ್ತಾರೆ.
ಇದನ್ನೂ ಓದಿ: ಈ ಯೋಜನೆಯಲ್ಲಿ 20 ರೂ ಪಾವತಿ ಮಾಡಿ 2 ಲಕ್ಷ ಪಡೆಯಿರಿ ಯಾವ ಯೋಜನೆ?
ಇತ್ತೀಚೆಗೆ, ಅನೇಕ ಬ್ಯಾಂಕುಗಳು ಸರ್ಕಾರಿ ಅಧಿಕಾರಿಗಳು/ನೌಕರರು ತಮ್ಮ ಉಳಿತಾಯ ಬ್ಯಾಂಕ್ ಖಾತೆಗಳನ್ನು ತೆರೆಯಲು ಆಕರ್ಷಕ “ಸಂಬಳ ಪ್ಯಾಕೇಜ್‌ಗಳನ್ನು ನೀಡುತ್ತಿವೆ, ಇದರಲ್ಲಿ ಅಧಿಕಾರಿಗಳು/ನೌಕರರಿಗೆ ವಿವಿಧ ರಿಯಾಯಿತಿಗಳು ಮತ್ತು ಅಧಿಕಾರಿ/ನೌಕರರ ಕುಟುಂಬಗಳಿಗೆ ಹೆಚ್ಚುವರಿ ಪ್ರಯೋಜನಗಳು ಸೇರಿವೆ.

ಈ ಸಂಬಳ ಪ್ಯಾಕೇಜ್‌ಗಳಲ್ಲಿ ಬ್ಯಾಂಕುಗಳ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಅಗತ್ಯವನ್ನು ಕಡ್ಡಾಯಗೊಳಿಸದೇ ಇರುವುದು, 2 ಅಥವಾ 3 ತಿಂಗಳ ನಿವ್ವಳ ವೇತನವನ್ನು ಓವರ್‌ಡ್ರಾಫ್ಟ್ (ಮುಂಗಡ) ಆಗಿ ನೀಡುವುದು. ವಸತಿ ಸಾಲಗಳ ಮೇಲೆ ಕಡಿಮೆ ಬಡ್ಡಿದರವನ್ನು ವಿಸ್ತರಿಸುವುದು, ಉಚಿತ NEFT/RTGS ವರ್ಗಾವಣೆಗಳು, ಉಚಿತ ಡಿಮ್ಯಾಂಡ್ ಡ್ರಾಫ್ಟ್‌ಗಳು, ಉಚಿತ ರುಪೇ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ವಿಮೆ, ಬ್ಯಾಗೇಜ್ ವಿಮೆಗಳನ್ನು ನೀಡುವುದು, ಮತ್ತು ಲಾಕರ್ ಬಾಡಿಗೆಯಲ್ಲಿ ರಿಯಾಯಿತಿ ಇತ್ಯಾದಿಗಳನ್ನು ನೀಡುವುದು, ಈ ಕೊಡುಗೆಗಳು ಬ್ಯಾಂಕಿನಿಂದ ಬ್ಯಾಂಕಿಗೆ ಭಿನ್ನವಾಗಿರುತ್ತವೆ.
ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಲಭ್ಯ ಎಷ್ಟು ಸ್ಕಾಲರ್ಶಿಪ್? ಅರ್ಜಿ ಸಲ್ಲಿಕೆ ಹೇಗೆ?
ಮೇಲಿನ ಸೌಲಭ್ಯಗಳ ಜೊತೆಗೆ, ಅಧಿಕಾರಿ/ನೌಕರರ ನಿನ್ನಳ ಸಂಬಳವನ್ನು ಅವಲಂಬಿಸಿ ವಿವಿಧ ಯೋಜನೆಗಳ ಅಡಿಯಲ್ಲಿ ವೈಯಕ್ತಿಕ ಅಪಘಾತ ವಿಮೆ (PAI) ವ್ಯಾಪ್ತಿಯನ್ನು ಯಾವುದೇ ಹೆಚ್ಚುವರಿ ಪ್ರೀಮಿಯಂ ಅನ್ನು ವಿಧಿಸದೆ ನೀಡುತ್ತವೆ.
ಮೇಲೆ ತಿಳಿಸಿದ ಅನೇಕ ಪ್ರಯೋಜನಗಳ ಹೊರತಾಗಿಯೂ, ಬ್ಯಾಂಕ್ ನೀಡುವ ಸಂಬಳ ಪ್ಯಾಕೇಜ್’ ಸೌಲಭ್ಯಗಳನ್ನು ಈ ಕೆಳಗಿನ ಕಾರಣಗಳಿಂದಾಗಿ ಅಧಿಕಾರಿ/ನೌಕರರು ಪಡೆಯುತ್ತಿಲ್ಲ ಎಂಬುದನ್ನು ಗಮನಿಸಲಾಗಿದೆ.
ಇದನ್ನೂ ಓದಿ: ಬಿಎಸ್ಎನ್ಎಲ್ ನಲ್ಲಿ ಉದ್ಯೋಗವಕಾಶ ಸಂಬಳ ಎಷ್ಟು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಬ್ಯಾಂಕ್ ನೀಡುವ ಸಂಬಳ ಪ್ಯಾಕೇಜ್’ ಸೌಲಭ್ಯಗಳು;
* ಬ್ಯಾಂಕ್ ಸಂಬಳ ಪ್ಯಾಕೇಜ್‌ಗಳನ್ನು ನೀಡುತ್ತಿದ್ದರೂ ಸಹ, ಸಂಬಳ ಪ್ಯಾಕೇಜ್‌ಗಳ ಪ್ರಯೋಜನಗಳನ್ನು ಪಡೆಯಲು, ಅಧಿಕಾರಿ/ನೌಕರರು ಬ್ಯಾಂಕಿಗೆ ನಿರ್ದಿಷ್ಟ ಮನವಿಯನ್ನು ಸಲ್ಲಿಸಬೇಕಾಗಿರುತ್ತದೆ.
* ಕೆಲವು ಅಧಿಕಾರಿ/ನೌಕರರು (Outsource)ಬ್ಯಾಂಕಿನಲ್ಲಿ ನೀಡಲಾಗುವ ಪ್ರಯೋಜನಗಳ ಬಗ್ಗೆ, ಅರಿವಿಲ್ಲದ ಹಾಗೂ ನಿರ್ಲಕ್ಷದ ಕಾರಣದಿಂದ ಬ್ಯಾಂಕಿನಲ್ಲಿ ನೀಡುತ್ತಿರುವ ಸಂಬಳ ಪ್ಯಾಕೇಜ್‌ಗಳನ್ನು ಪಡೆಯುತ್ತಿಲ್ಲ.
ಇದನ್ನೂ ಓದಿ: ನಿಮಗೂ ತಲೆಹೊಟ್ಟಿನ ಸಮಸ್ಯೆ ಕಾಡುತ್ತಿದೆಯಾ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಸರ್ಕಾರದ ಆದೇಶ ಪತ್ರದ ವಿವರಗಳು;
* ವಿವಿಧ ಬ್ಯಾಂಕುಗಳು ಒದಗಿಸುವ ‘ಸಂಬಳ ಪ್ಯಾಕೇಜ್‌ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ/ನೌಕರರಿಗೆ (ಸರ್ಕಾರಿ / ಸರ್ಕಾರಿ ಸಂಸ್ಥೆಗಳು, ಇತ್ಯಾದಿ) ಕಡ್ಡಾಯಗೊಳಿಸಿದೆ.
* ಬ್ಯಾಂಕ್‌ಗಳು/ಅಂಚೆ ಕಚೇರಿಗಳು ನೀಡುವ PMJJBY ಮತ್ತು PMSBY ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿ/ನೌಕರರನ್ನು ಸಂಬಂಧಪಟ್ಟ ಇಲಾಖೆ ಪ್ರೋತ್ಸಾಹಿಸುವುದು.
ಇದನ್ನೂ ಓದಿ: ಸರ್ಕಾರದಿಂದ ಸರ್ಕಾರಿ ನೌಕರಿಗೆ ಖಡಕ್ ಆದೇಶ! ಏನದು ಆದೇಶ?
* ಬ್ಯಾಂಕ್‌ಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿ/ನೌಕರರನ್ನು ಸಂಬಂಧಪಟ್ಟ ಇಲಾಖೆ ಪ್ರೋತ್ಸಾಹಿಸುವುದು.
ವಿವಿಧ ಹಂತಗಳಲ್ಲಿರುವ ವೇತನ ಸೆಳೆಯುವ ಅಧಿಕಾರಿ/ಹಣ ಸೆಳೆಯುವ ಮತ್ತು ಬಟವಾಡ ಮಾಡುವ (ಡಿಡಿಒ) ಗಳು ಈ ಆದೇಶವನ್ನು ಜಾರಿಗೊಳಿಸುವಲ್ಲಿ ಕಚೇರಿ ಮಟ್ಟದಲ್ಲಿ ಜವಾಬ್ದಾರರಾಗಿರುತ್ತಾರೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ ತಮ್ಮ ಇಲಾಖೆಗಳಲ್ಲಿ ಹಾಗೂ ತಮ್ಮ ಅಧೀನದಲ್ಲಿ ಬರುವ ಕ್ಷೇತ್ರ ಇಲಾಖೆ/ಅಂಗ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ನೌಕರರು ಸಚಿವ ಸಂಪುಟದ ಆದೇಶದಲ್ಲಿ ಮೇಲೆ ವಿವರಿಸಿದಂತೆ ನೋಂದಾಯಿಸಿಕೊಳ್ಳುವಂತೆ ಇಲಾಖಾ ಮುಖ್ಯಸ್ಥರು ಸೂಕ್ತ ಕ್ರಮವಹಿಸಬೇಕು ಎಂದು ಸರ್ಕಾರ ಸೂಚಿಸಿದೆ.
ಇದನ್ನೂ ಓದಿ: ನೀವು ಹುಟ್ಟಿದ ವಾರದಲ್ಲಿ ಅಡಗಿದೆ ನಿಮ್ಮ ನಿಗೂಢ ವ್ಯಕ್ತಿತ್ವ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





