(outsourced Recruitment) ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸೋ ಸಂಬಂಧ ಅಧಿಕೃತವಾಗಿ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ ಅವರು ಗೆಜೆಟ್ ಅಧಿಸೂಚನೆಯಲ್ಲಿ ಸುತ್ತೋಲೆ ಹೊರಡಿಸಿದ್ದು, ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ. ಹಾಗಾದರೆ ಏನೆಲ್ಲಾ ಸೂಚನೆಗಳು ಇದೆ ಇಲ್ಲಿದೆ ನೋಡಿ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
ಸೂಚನೆಯಲ್ಲಿ ಏನಿದೆ?;
- ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
- ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸಬೇಕು.
- ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಬೇಕು.
- ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸಬೇಕು, ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸಬೇಕು.
ಇದನ್ನೂ ಓದಿ: ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ/ ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ನಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳಬೆಕು.
- ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸಬೇಕು.
- ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷ ಇರಬೇಕು.
- ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.
ಇದನ್ನೂ ಓದಿ: ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
ಈ ಮೇಲಿನ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಬರದಿಂದ ಕಂಗೆಟ್ಟಿರುವ ರೈತರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್






