Outsourcing Recruitment: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್

(Outsourcing Recruitment) ರಾಜ್ಯ ಸರ್ಕಾರದ ಎಲ್ಲಾ ಇಲಾಖೆ, ಸ್ವಾಯತ್ತ ಸಂಸ್ಥೆಗಳು, ನಿಗಮ-ಮಂಡಳಿ, ವಿಶ್ವವಿದ್ಯಾಲಯಗಳಿಗೆ ಅನ್ವಯವಾಗುವಂತೆ ಹೊರ ಗುತ್ತಿಗೆ ಆಧಾರದ ಮೇಲೆ ಮಾಡಿಕೊಳ್ಳುವ ನೇಮಕಾತಿಯಲ್ಲೂ ಕಡ್ಡಾಯವಾಗಿ ಮೀಸಲಾತಿ ದಾಖಲಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.


ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತ ಕುಟುಂಬಕ್ಕೆ 3,000 ಹಣ ಜಮಾ


ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ರೈತರ ಗಮನಕ್ಕೆ; ಬಿತ್ತನೆ ಬೀಜ ಖರೀದಿಗೆ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಲು 2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗಾಗಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.


ಇದನ್ನೂ ಓದಿ: ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; ಈ ಬ್ಯಾಂಕ್ ನಲ್ಲಿ ಭರ್ಜರಿ ಜಾಬ್ ಆಫರ್; ಈ ರೀತಿ ಅರ್ಜಿ ಸಲ್ಲಿಸಿ


ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯವಾಗುವುದಿಲ್ಲ.

ಪ್ರತಿ ವರ್ಷವೂ ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆಟಿಪಿಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.


ಇದನ್ನೂ ಓದಿ: ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇ-ಆಫೀಸ್ ತಂತ್ರಾಂಶ ಅನುಷ್ಠಾನ; ರಾಜ್ಯ ಸರ್ಕಾರ ಆದೇಶ


ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

Outsourcing Recruitment: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್
Outsourcing Recruitment: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್

ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; hsrp ನಂಬ‌ರ್ ಪ್ಲೇಟ್ ಅಳವಡಿಕೆ; ಸಹಾಯವಾಣಿ ಬಿಡುಗಡೆ ಮಾಡಿದ ಸಾರಿಗೆ ಇಲಾಖೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್