ನವದೆಹಲಿ: ನಕಲಿ ಗುರುತಿನ ಚೀಟಿಯನ್ನು ಇಟ್ಟುಕೊಂಡು ಭಾರತೀಯ ಪ್ರಜೆ ಎಂದು ಹೇಳಿಕೊಂಡು ತಿರುಗುತ್ತಿದ್ದ ಪಾಕಿಸ್ತಾನದ ಶಂಕಿತ ಉಗ್ರನನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.
ದೆಹಲಿಯಲ್ಲಿ ಭಾರತೀಯ ಪ್ರಜೆಯೆಂದು ನಕಲಿ ಗುರುತಿನ ಚೀಟಿಯನ್ನು ತೋರಿಸಿ ಸ್ವಚ್ಛಂದವಾಗಿ ಓಡಾಡಿಕೊಂಡು ಇದ್ದ ಪಾಕಿಸ್ತಾನದ ನರೋವಾಲ್ ಮೂಲದ ಮೊಹಮ್ಮದ್ ಅಶ್ರಫ್ ನನ್ನು ಬಂಧಿಸಲಾಗಿದೆ.
ಈತ ಉಗ್ರ ಎಂದು ತಿಳಿದುಬಂದ ನಂತರ ತನಿಖೆಯನ್ನು ಚುರುಕುಗೊಳಿಸಿದ ದೆಹಲಿ ವಿಶೇಷ ತನಿಖಾ ತಂಡವು ಬಂಧಿತ ಉಗ್ರನ್ನು ತನಿಖೆಗೆ ಒಳಪಡಿಸಿದ್ದಾರೆ.ನಂತರ ಆ ಉಗ್ರನ ಬಳಿ ಇದ್ದಂತಹ AK-47 &ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.