(Panchayat staff:) ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ವೇತನ ಪಾವತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್ ಆಫರ್;10th, 12th ವಿದ್ಯಾರ್ಹತೆ
ಹೌದು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಪ್ರತಿ ಮಾಹೆ ನಿಯಮಿತವಾಗಿ ವೇತನ ಪಾವತಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನವನ್ನು ನಿಯಮಿತವಾಗಿ ಪಾವತಿಸುವುದು ಆದ್ಯತೆಯ ವಿಷಯವಾಗಿರುತ್ತದೆ. ಪ್ರಸ್ತುತ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸರ್ಕಾರದ ನಿಧಿಯಿಂದಲೇ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದ್ದು, ಅಗತ್ಯವಿರುವ ಅನುದಾನವನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಇ.ಎಫ್.ಎಂ.ಎಸ್ ಖಾತೆಗಳಿಗೆ ಸರ್ಕಾರದಿಂದಲೇ ಬಿಡುಗಡೆಗೊಳಿಸಲಾಗುತ್ತಿದೆ.
ಇದನ್ನೂ ಓದಿ: ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ; ಸರ್ಕಾರದಿಂದ ನಿಯಮ ಪ್ರಕಟ
(Panchayat staff:) ಗ್ರಾಮ ಪಂಚಾಯಿತಿಗಳಲ್ಲಿ ಅನುದಾನ ಲಭ್ಯವಿದ್ದರೂ ಸಹ ನಿಯಮಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ಸಿಬ್ಬಂದಿಗಳ ವೇತನ ಪಾವತಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಈ ವಿಷಯವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಪ್ರಸ್ತುತ ಅವಧಿಯವರೆಗೆ ವೇತನ ಪಾವತಿಗೆ ಬಾಕಿಯಿರುವ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನವನ್ನು ಈ ಪತ್ರ ತಲುಪಿದ 02 ದಿನಗಳ ಒಳಗಾಗಿ ಪಾವತಿಸಿ, ವೇತನ ಪಾವತಿಗೆ ಯಾವುದೇ ಬಾಕಿ ಇಲ್ಲದಿರುವ ಕುರಿತು ಆಯುಕ್ತಾಲಯಕ್ಕೆ ವರದಿಯನ್ನು ಸಲ್ಲಿಸಲು ತಿಳಿಸಿದೆ.
ನಿಯಮಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ವೇತನ ಪಾವತಿಸದೇ ನಿರ್ಲಕ್ಷ್ಯತೆ ವಹಿಸಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದು. ತಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ವೇತನವು ನಿಯಮಿತವಾಗಿ ಪಾವತಿಯಾಗುತ್ತಿರುವ ಕುರಿತು ಪ್ರತಿ ತಿಂಗಳು ಮೇಲ್ವಿಚಾರಣೆ ನಡೆಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು (Panchayat staff:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





