(Paperless Registration:) ಆಸ್ತಿ ನೋಂದಣಿಗೆ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯುವ ಕಾಲಕ್ಕೆ ತೆರೆ ಬೀಳಲಿದೆ. ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ‘ಕಾವೇರಿ 2.0’ ತಂತ್ರಾಂಶವನ್ನು ಜಾರಿಗೆ ತಂದು, ಸಂಪೂರ್ಣ ಕಾಗದರಹಿತ ಹಾಗೂ ಪಾರದರ್ಶಕ ಆಸ್ತಿ ನೋಂದಣಿ ವ್ಯವಸ್ಥೆಯನ್ನು ಪರಿಚಯಿಸಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!
‘ಕಾವೇರಿ 2.0’ ಹಳೆಯ ಕಾವೇರಿ ತಂತ್ರಾಂಶದ ಸುಧಾರಿತ ಆವೃತ್ತಿಯಾಗಿದ್ದು, ಭೂಮಿ, ಇ-ಸ್ವತ್ತು, ಖಜಾನೆ-2 ಹಾಗೂ ಸಕಾಲ ಸೇವೆಗಳೊಂದಿಗೆ ಸಂಯೋಜನೆಗೊಂಡಿದೆ. ಈ ಹೊಸ ವ್ಯವಸ್ಥೆಯಿಂದ ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಕೇವಲ 10 ನಿಮಿಷಗಳಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಮಧ್ಯವರ್ತಿಗಳ ಹಾವಳಿಯನ್ನು ಕಡಿಮೆ ಮಾಡಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಇದರ ಪ್ರಮುಖ ಉದ್ದೇಶವಾಗಿದೆ.
ಈ ತಂತ್ರಾಂಶದ ಮೂಲಕ ಸಾರ್ವಜನಿಕರಿಗೆ ಹಲವು ಆನ್‌ಲೈನ್ ಸೌಲಭ್ಯಗಳನ್ನು ಒದಗಿಸಲಾಗಿದೆ. ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಲೆಕ್ಕ ಹಾಕಿ ಪಾವತಿಸಬಹುದಾಗಿದೆ. ಜೊತೆಗೆ, ಋಣಭಾರ ಪ್ರಮಾಣಪತ್ರ (EC) ಮತ್ತು ದೃಢೀಕೃತ ನಕಲು (CC)ಗಳನ್ನು ಸಹ ಆನ್‌ಲೈನ್ ಮೂಲಕವೇ ಪಡೆಯುವ ಅವಕಾಶ ಇದೆ. ಆಸ್ತಿ ಮಾರ್ಗಸೂಚಿ ದರವನ್ನು ಮನೆಯಲ್ಲಿ ಕುಳಿತಲ್ಲಿಯೇ ಪರಿಶೀಲಿಸಬಹುದಾಗಿದೆ.
ಇದಲ್ಲದೆ, ಕಚೇರಿಗೆ ಭೇಟಿ ನೀಡಲು ಮುಂಚಿತವಾಗಿ ಆನ್‌ಲೈನ್ ಅಪಾಯಿಂಟ್ಮೆಂಟ್ ಬುಕ್ ಮಾಡುವ ವ್ಯವಸ್ಥೆಯೂ ಕಲ್ಪಿಸಲಾಗಿದೆ. ಸಾರ್ವಜನಿಕರು ಪೋರ್ಟಲ್‌ನಲ್ಲಿ ಲಾಗಿನ್ ಆಗಿ ತಮ್ಮ ವಿವರಗಳನ್ನು ನಮೂದಿಸಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿದ ಬಳಿಕ ಶುಲ್ಕ ಪಾವತಿಸಿ, ತಮಗೆ ಅನುಕೂಲವಾದ ಸಮಯವನ್ನು ಆಯ್ಕೆ ಮಾಡಿಕೊಳ್ಳಬಹುದು.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
ನಿಗದಿತ ಸಮಯಕ್ಕೆ ಉಪನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿದ ಬಳಿಕ, ಕೇವಲ ಬಯೋಮೆಟ್ರಿಕ್ ಹಾಗೂ ಫೋಟೋ ನೀಡುವುದರೊಂದಿಗೆ 10 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.
ಹೊಸ ವ್ಯವಸ್ಥೆಯ ಮತ್ತೊಂದು ಪ್ರಮುಖ ಅಂಶವೆಂದರೆ, ನೋಂದಾಯಿತ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ DigiLocker ನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲಾಗುತ್ತದೆ. ಇದರಿಂದ ದಾಖಲೆಗಳು ಕಳೆದುಹೋಗುವ ಭಯವಿಲ್ಲ. ಪ್ರತಿಯೊಂದು ವ್ಯವಹಾರಕ್ಕೂ ವಿಶಿಷ್ಟ ದಾಖಲೆ ಸಂಖ್ಯೆಯನ್ನು ನೀಡಲಾಗುತ್ತಿದ್ದು, ಯಾವುದೇ ಸಮಯದಲ್ಲಿ ದಾಖಲೆಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ಹೊಸ ವ್ಯವಸ್ಥೆಯಿಂದ ಸಾರ್ವಜನಿಕರ ಸಮಯ ಉಳಿತಾಯವಾಗುವುದರ ಜೊತೆಗೆ, ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಲಿದೆ ಎಂದು ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080 68265316 ಅನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Paperless Registration:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ






Leave a Reply