Sunday, December 3, 2023
Homeಸುದ್ದಿಗಳುಕ್ರೀಡೆಟೋಕಿಯೋ ಪ್ಯಾರಾಲಿಂಪಿಕ್ಸ್: ಶೂಟಿಂಗ್ ನಲ್ಲಿ ಚಿನ್ನದ ಪದಕದ ನಂತರ ಕಂಚಿನ ಪದಕವನ್ನು ಗಳಿಸಿ ಇತಿಹಾಸ ಸೃಷ್ಟಿಸಿದ...

ಟೋಕಿಯೋ ಪ್ಯಾರಾಲಿಂಪಿಕ್ಸ್: ಶೂಟಿಂಗ್ ನಲ್ಲಿ ಚಿನ್ನದ ಪದಕದ ನಂತರ ಕಂಚಿನ ಪದಕವನ್ನು ಗಳಿಸಿ ಇತಿಹಾಸ ಸೃಷ್ಟಿಸಿದ ಅವನಿ ಲೇಖರಾ,

ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾರವರು ಇತಿಹಾಸವನ್ನು ನಿರ್ಮಿಸಿದ್ದು, ಈ ಹಿಂದೆ ಚಿನ್ನದ ಪದಕವನ್ನು ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆಯನ್ನು ನಿರ್ಮಿಸಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತದ ಅವನಿ ಲೇಖರಾರವರು ಕಂಚಿನ ಪದಕವನ್ನು ಜಯಿಸಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಶುಕ್ರವಾರ ನಡೆದ ಆರ್ 8 ಈವೆಂಟ್ ನ ಮಹಿಳೆಯರ 50 ಮೀ ರೈಫಲ್ 3 ಪಿ ಎಸ್‌ಎಚ್ 1  ಸ್ಪರ್ಧೆಯಲ್ಲಿ 3ನೇ ಸ್ಥಾನವನ್ನು ಪಡೆದ ಅವನಿ ಲೇಖರಾ ಕಂಚಿನ ಪದಕವನ್ನು ಗೆದ್ದಿದ್ದಾರೆ.

ಈ ಫೈನಲ್ ಪಂದ್ಯದಲ್ಲಿ ಭಾರತದ ಅವನಿ ಲೇಖರಾ ಒಟ್ಟು 445.9 ಅಂಕಗಳೊoದಿಗೆ ಮೂರನೇ ಸ್ಥಾನಕ್ಕೇರಿ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ. ಅಂತಿಮ ಸುತ್ತು ಆರಂಭಕ್ಕೂ ಮುನ್ನ ಅವನಿ ಕೇವಲ 149.5 ಅಂಕಗಳೊoದಿಗೆ ನಾಲ್ಕನೇ ಸ್ಥಾನದಲ್ಲಿದ್ದರು. ಆದರೆ ಅಂತಿಮ ಸುತ್ತಿನಲ್ಲಿ ಭರ್ಜರಿ ಪ್ರದರ್ಶನವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದರು.

ಕಂಚಿನ ಪದಕಕ್ಕೂ ಮೊದಲು ಅವನಿ ಲೇಖರಾರವರು ಚಿನ್ನದ ಪದಕವನ್ನು ಗೆದ್ದಿದ್ದರು. 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತದ ಅವನಿ ಲೇಖಾ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಈ ರೀತಿಯ ಸಾಧನೆ ಮಾಡಿದ ಮೊದಲ ಭಾರತೀಯ ಪ್ಯಾರಾಒಲಿಂಪಿಕ್ಸ್ ಮಹಿಳಾ ಕ್ರೀಡಾಪಟು ಎಂಬ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದ್ದಾರೆ.

ಒಂದೇ ಕ್ರೀಡಾಕೂಟದಲ್ಲಿ 2 ಪದಕವನ್ನು ಗೆದ್ದ ಭಾರತದ ಮೊದಲ ಮಹಿಳೆ ಎಂಬ ಕೀರ್ತಿಗೆ ಅವನಿ ಲೇಖರಾ ಪಾತ್ರರಾಗಿದ್ದಾರೆ. ಅವನಿ ಅವರ ಈ ಕಂಚಿನ ಪದಕ ಗಳಿಕೆಯ ಬಳಿಕ ಹಾಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 12 ಕ್ಕೇರಿಕೆಯಾಗಿದೆ. ಈ ಪೈಕಿ 2 ಚಿನ್ನ, 6 ಬೆಳ್ಳಿ ಮತ್ತು4 ಕಂಚಿನ ಪದಕಗಳಿವೆ.

Most Popular

Recent Comments