Monday, December 11, 2023
Homeಸುದ್ದಿಗಳುಕ್ರೀಡೆಟೋಕಿಯೋ ಪ್ಯಾರಾಲಿಂಪಿಕ್ಸ್ : ಚಿನ್ನ, ಬೆಳ್ಳಿ ಪದಕವನ್ನು ಪಡೆದು ಭಾರತದಲ್ಲಿ ಇತಿಹಾಸವನ್ನು ನಿರ್ಮಿಸಿದ ಭಾರತದ ಶೂಟರ್...

ಟೋಕಿಯೋ ಪ್ಯಾರಾಲಿಂಪಿಕ್ಸ್ : ಚಿನ್ನ, ಬೆಳ್ಳಿ ಪದಕವನ್ನು ಪಡೆದು ಭಾರತದಲ್ಲಿ ಇತಿಹಾಸವನ್ನು ನಿರ್ಮಿಸಿದ ಭಾರತದ ಶೂಟರ್ ಗಳು,

ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವಂತಹ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಐತಿಹಾಸಿಕ ಸಾಧನೆಯನ್ನು ಮಾಡಿದ್ದು, ಶೂಟಿಂಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಪಡೆದುಕೊಂಡು ಬಂದಿದೆ.

ಶೂಟಿoಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಭಾರತದ ಮನೀಶ್ ನರ್ವಾಲ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ ಹಾಗೂ ಸಿಂಗರಾಜ್ ರವರು 2 ನೇ ಸ್ಥಾನವನ್ನು ಪಡೆದು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಭಾರತದ ಮನೀಶ್ ನರ್ವಾಲ್ ರವರು 218.2 ಅಂಕಗಳನ್ನು ಗಳಿಸಿ ಮೊದಲ ಸ್ಥಾನವನ್ನು ಪಡೆದಿದ್ದು, ಇದು ಭಾರತದ ಪರ ಗರಿಷ್ಠ ದಾಖಲೆಯನ್ನು ನಿರ್ಮಿಸಿದೆ. ಅದೇ ಪಂದ್ಯದಲ್ಲಿ ಭಾರತದ ಮತ್ತೋರ್ವ ಶೂಟರ್ ಅಧನ ಸಿಂಗರಾಜ್ ಅವರು 216.7 ಅಂಕಗಳೊoದಿಗೆ 2ನೇ ಸ್ಥಾನಕ್ಕೇರಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಆ ಮೂಲಕ ಒಂದೇ ಪೈನಲ್ ಪಂದ್ಯದಲ್ಲಿ ಉಭಯ ಆಟಗಾರರು ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದು ಸಾಧನೆಯನ್ನು ಮಾಡಿದ್ದಾರೆ.

ಈ ಪದಕಗಳ ಮೂಲಕ ಹಾಲಿ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಚಿನ್ನ 3, ಬೆಳ್ಳಿ 7 ಮತ್ತು 5 ಕಂಚಿನ ಪದಕಗಳು ಲಭಿಸಿವೆ.

Most Popular

Recent Comments