Sunday, October 1, 2023
Homeಸುದ್ದಿಗಳುಕ್ರೀಡೆಟೋಕಿಯೋ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಬೆಳ್ಳಿ ಪದಕ ತಂದು ಕೊಟ್ಟ ಪ್ರವೀಣ್ ಕುಮಾರ್,

ಟೋಕಿಯೋ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಬೆಳ್ಳಿ ಪದಕ ತಂದು ಕೊಟ್ಟ ಪ್ರವೀಣ್ ಕುಮಾರ್,

ಟೋಕಿಯೋ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಬೆಳ್ಳಿ ಪದಕವು ಲಭಿಸಿದೆ.

ಹೈ ಜಂಪ್ ನಲ್ಲಿ ಭಾರತದ ಪ್ರವೀಣ್ ಕುಮಾರ್ ರವರು ಬೆಳ್ಳಿ ಪದಕವನ್ನು ಗಳಿಸಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ  T64 ಈವೆಂಟ್ ನಲ್ಲಿ ಭಾರತದ ಪ್ರವೀಣ್ ಕುಮಾರ್ 2.07 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ 2 ನೇ ಸ್ಥಾನಕ್ಕೇರಿದರು. ಆ ಮೂಲಕ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ.

ಇದೇ ಪಂದ್ಯದಲ್ಲಿ ಬ್ರಿಟನ್ ನ ಜೋನಾಥನ್ ಬ್ರೂಮ್ ಎಡ್ವರ್ಡ್ಸ್ ಅವರು 2.10 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ ಚಿನ್ನದ ಪದಕ ಗೆದ್ದರೆ, 2.04 ಮೀಟರ್ ಎತ್ತರಕ್ಕೆ ಜಿಗಿದ ಪೋಲೆಂಡ್ ನ ಮ್ಯಾಕೀಜ್ ಲೆಪಿಯಾಟೊ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಈ ಬೆಳ್ಳಿ ಪದಕದ ಮೂಲಕ ಹಾಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಗಳಿಕೆ 11ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2 ಚಿನ್ನ, 6 ಬೆಳ್ಳಿ ಮತ್ತು 3 ಕಂಚಿನ ಪದಕಗಳು ಲಭಿಸಿದೆ.

Most Popular

Recent Comments