Wednesday, April 24, 2024
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಒಂದೇ ಕೊಠಡಿಯಲ್ಲಿ, 5 ತರಗತಿಗೆ, ಒಬ್ಬರೇ ಮೇಷ್ಟ್ರು: ಈ ಶಾಲೆಯಲ್ಲಿ ಸಮಸ್ಯೆ ಇಲ್ಲ, ಶಾಲೆಯೇ...

ಚಿಕ್ಕಮಗಳೂರು: ಒಂದೇ ಕೊಠಡಿಯಲ್ಲಿ, 5 ತರಗತಿಗೆ, ಒಬ್ಬರೇ ಮೇಷ್ಟ್ರು: ಈ ಶಾಲೆಯಲ್ಲಿ ಸಮಸ್ಯೆ ಇಲ್ಲ, ಶಾಲೆಯೇ ಸಮಸ್ಯೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಈ ಶಾಲೆಯಲ್ಲಿ ಸಮಸ್ಯೆ ಇಲ್ಲ. ಶಾಲೆಯೇ ಸಮಸ್ಯೆಯಲ್ಲಿ ಇದೆ. ಈ ಶಾಲೆಯ ಪರಿಸ್ಥಿತಿ ಹೀಗಿರುವಾಗ ಇಲ್ಲಿನ ಶಿಕ್ಷಕರದ್ದು ಮತ್ತೊಂದು ಸಮಸ್ಯೆ. ಶಾಲೆ ಆರಂಭವಾಗಿ ವಾರವಾದರೂ ಮಕ್ಕಳು ಮನೆಯಲ್ಲಿಯೇ ಇದ್ದಾರೆ ಹೊರತು ಶಾಲೆಗೆ ಬರುತ್ತಿಲ್ಲ.

ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್

ಇದನ್ನೂ ಓದಿ; ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಚಿಕ್ಕಮಗಳೂರು ತಾಲೂಕಿನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಿಹೊಂಬಳ ಸರ್ಕಾರಿ ಶಾಲೆಯ ಶಿಕ್ಷಕರ ಕೊರತೆ ಹಾಗೂ ಇರುವ ಓರ್ವ ಶಿಕ್ಷಕನ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.

ಅವರೊಬ್ಬರೇ ಅಲ್ಲಿ ಶಿಕ್ಷಕ, ಒಂದೇ ಕೊಠಡಿ, ಐದು ತರಗತಿಗಳು. ಒಂಬತ್ತೇ ಮಕ್ಕಳು. ಎಲ್ಲರಿಗೂ ಒಬ್ಬರೇ ಪಾಠ ಮಾಡೋದಕ್ಕೆ ಕನ್ನಡ, ಹಿಂದಿ, ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಎಲ್ಲವಕ್ಕೂ ಅವರೊಬ್ಬರೇ ಮೇಷ್ಟ್ರು, ಶಾಲೆ ಆರಂಭವಾಗಿ 9 ದಿನವಾದರು ಒಂದೇ ಒಂದು ಮಗುವು ಶಾಲೆಗೆ ಬಂದಿಲ್ಲ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಪೋಷಕರು ಆ ಮೇಷ್ಟ್ರು ಹೋಗೋತನಕ ಮಕ್ಕಳನ್ನ ಶಾಲೆಗೆ ಕಳಿಸಲ್ಲ ಅಂತಿದ್ದಾರೆ. ಯಾವ ತರಗತಿಯ ಯಾವ ಪಾಠವನ್ನು ಯಾವ ಮಕ್ಕಳು ಕೇಳುತ್ತಾರೆ ಎಂದು ಪಾಠ ಮಾಡುವ ಶಿಕ್ಷಕರಿಗೂ ಗೊತ್ತಿಲ್ಲ. ಕೇಳುವ ಮಕ್ಕಳಿಗೆ ಮೊದಲೇ ಗೊತ್ತಿಲ್ಲ. ಶಾಲೆಗೆ ಸೂಕ್ತ ಕೊಠಡಿ ಹಾಗೂ ಶಿಕ್ಷಕರಿಗಾಗಿ ಸ್ಥಳೀಯರು ಮತ್ತು ಎಸ್.ಡಿ.ಎಂ.ಸಿ ಸದಸ್ಯರು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ ಆದರೆ, ಮೇಲಾಧಿಕಾರಿಗಳಿಂದ ಇಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ.

ಈ ಶಾಲೆಯ ಪರಿಸ್ಥಿತಿ ಹೀಗಿರುವಾಗ ಇಲ್ಲಿನ ಶಿಕ್ಷಕರದ್ದು ಮತ್ತೊಂದು ಸಮಸ್ಯೆ, ಶಾಲೆ ಅರಂಭವಾಗಿ ವಾರವಾದರೂ ಮಕ್ಕಳು ಮನೆಯಲ್ಲಿ ಆಟವಾಡಿಕೊಂಡು ಇದ್ದಾರೆಯೇ ವಿನಃ ಶಾಲೆಗೆ ಬರುತ್ತಿಲ್ಲ. ಕಾರಣ ಇಲ್ಲಿನ ಮೇಷ್ಟ್ರು. ಇಡೀ ಶಾಲೆಗೆ ಇರುವುದು ಒಬ್ಬರೇ ಶಿಕ್ಷಕರು. ಅವರು ಬೆಳಗ್ಗೆ 11.30ಕ್ಕೆ ಬಂದರೆ 2.38ಕ್ಕೆ ಮನೆ ಸೇರುತ್ತಾರೆ. ಸಂಜೆ ಮಕ್ಕಳೇ ಶಾಲೆಯ ಬೀಗ ಹಾಕಿಕೊಂಡು ಮನೆಗೆ ಹೋಗಬೇಕು.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಹಾಗಾಗಿ ಇಲ್ಲಿನ ಪೋಷಕರು ಶಿಕ್ಷಕ ಚಂದ್ರೇಗೌಡ ಇಲ್ಲಿಂದ ಬೇರೆಡೆಗೆ ಸ್ಥಳಾಂತರಗೊಂಡು ಬೇರೆ ಶಿಕ್ಷಕರು ಬರುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದು, ಇಲ್ಲಿನ ಶಿಕ್ಷಕರನ್ನು ಬೇರೆ ಕಡೆ ವರ್ಗಾವಣೆ ಮಾಡಿದರೆ ಶಾಲೆಗೆ ಮಕ್ಕಳ ಸಂಖ್ಯೆಯೂ ಹೆಚ್ಚುತ್ತದೆ ಶಾಲೆಯು ಉಳಿಯುತ್ತೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Most Popular

Recent Comments