(Pariksha Pe Charcha:) ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಬಗೆಗಿನ ಒತ್ತಡ, ಆತಂಕವನ್ನು ನಿವಾರಿಸುವ ದೃಷ್ಟಿಯಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2018ರಿಂದ ಪ್ರತಿ ವರ್ಷವೂ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಇದೀಗ 2026ರ ಪರೀಕ್ಷಾ ಪೇ ಚರ್ಚಾಗಾಗಿ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ನೋಂದಣಿ ಹೇಗೆ, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ನಿವೃತ್ತಿ ಹೊಂದುವ ನೌಕರರಿಗೆ ಪಿಂಚಣಿ ಸೌಲಭ್ಯ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ನೋಂದಣಿ ಹೃಗೆ?;
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ innovateindia1.mygov.in ಗೆ ಭೇಟಿ ನೀಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಕೊನೆಯ ದಿನಾಂಕ ಯಾವಾಗ?;
ಜನವರಿ 11 ರವರೆಗೆ ಅರ್ಜಿ ಸಲ್ಲಿಸಬಹುದು. ಪರೀಕ್ಷಾ ಪೇ ಚರ್ಚಾದ 9 ನೇ ಆವೃತ್ತಿಯು ಫೆಬ್ರವರಿಯಲ್ಲಿ ನಡೆಯಲಿದೆ.
ಇದನ್ನೂ ಓದಿ: 10 HP ವರೆಗಿನ ಕೃಷಿ ಪಂಪ್ ಸೆಟ್ ಗಳಿಗೆ ಸಿಗಲಿದೆ ಸಬ್ಸಿಡಿ
ಯಾರು ಅರ್ಜಿ ಸಲ್ಲಿಸಬಹುದು?
* 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಪರೀಕ್ಷಾ ಪೇ ಚರ್ಚಾಗೆ ಅರ್ಜಿ ಸಲ್ಲಿಸಬಹುದು.
* ನೋಂದಾಯಿಸುವ ವಿದ್ಯಾರ್ಥಿಗಳನ್ನು MyGov ವೇದಿಕೆಯಲ್ಲಿ ಆಯೋಜಿಸಲಾದ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
* ಯಶಸ್ವಿ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡುವ ಅವಕಾಶ ಸಿಗುತ್ತದೆ.
ಪರೀಕ್ಷಾ ಪೇ ಚರ್ಚಾ ನೋಂದಾಯಿಸುವುದು ಹೇಗೆ?
* innovateindia1.mygov.in/ppc-2026 ನಲ್ಲಿ MyGov ಇನ್ನೋವೇಟ್ ಪ್ಲಾಟ್‌ಫಾರ್ಮ್‌ಗೆ ಭೇಟಿ ನೀಡಿ.
* ಪರಿಕ್ಷಾ ಪೇ ಚರ್ಚಾ 2026 ನೋಂದಣಿ ಲಿಂಕ್ ಅನ್ನು ಇಲ್ಲಿ ಕ್ಲಿಕ್ ಮಾಡಿ.
* ನಿಮ್ಮ ವರ್ಗವನ್ನು ಆಯ್ಕೆಮಾಡಿ: ವಿದ್ಯಾರ್ಥಿ, ಶಿಕ್ಷಕ ಅಥವಾ ಪೋಷಕರು.
* ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಐಡಿ ಬಳಸಿ MyGov ಪೋರ್ಟಲ್‌ಗೆ ಲಾಗಿನ್ ಮಾಡಿ.
* ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ವಿವರಗಳನ್ನು ನಮೂದಿಸಿ.
* ವಿದ್ಯಾರ್ಥಿಗಳು ಬಯಸಿದರೆ, ಪ್ರಧಾನ ಮಂತ್ರಿಗಳಿಗೆ ಒಂದು ಪ್ರಶ್ನೆಯನ್ನು ಸಹ ಸಲ್ಲಿಸಬಹುದು.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ: ನಿಮ್ಮ ಬಾಕಿ ದಂಡವನ್ನು ಶೇ.50 ರ ರಿಯಾಯಿತಿಯೊಂದಿಗೆ ಪಾವತಿಸಲು ಡಿ.12 ಕೊನೆಯ ದಿನ
Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Pariksha Pe Charcha:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





