Pauti Account: ವಾರಸುದಾರರ ಹೆಸರಿಗೆ ಪಹಣಿ ನೋಂದಣಿ, ಮನೆ ಬಾಗಿಲಿಗೆ ಪೌತಿ ಖಾತೆ

(Pauti Account:) ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ.


ಇದನ್ನೂ ಓದಿ: 1ಲಕ್ಷ ಹೂಡಿಕೆ ಮಾಡಿದ್ರೆ ಸಿಗುತ್ತೆ 2ಲಕ್ಷ…!; ಅಂಚೆ ಅಚೇರಿಯಲ್ಲಿದೆ ಭರ್ಜರಿ ಸ್ಕೀಮ್


(Pauti Account:) ಇ-ಪೌತಿ ಆಂದೋಲನ ಆರಂಭ:
ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ.

ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್‌ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.


ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಾಬ್; ವಿದ್ಯಾರ್ಹತೆ ಡಿಟೈಲ್ಸ್‌ ಇಲ್ಲಿದೆ ನೋಡಿ


ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ ಪ್ರಮಾಣ, ರೈತರ ಭೂ ಹಿಡುವಳಿ, ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರ ಸಂಖ್ಯೆಯ ಬಗ್ಗೆ ನಿಖರ ಅಂಕಿ-ಅಂಶಗಳು ಲಭ್ಯವಾಗಲಿವೆ. ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಆಸ್ತಿಯನ್ನು ತಮ್ಮ ಕಾನೂನು ಬದ್ದ ವಾರಸುದಾರರ ಹೆಸರಿಗೆ ಜಮೀನಿನ ಖಾತೆಯನ್ನು ವರ್ಗಾವಣೆ ಮಾಡುವುದನ್ನು ಪೌತಿ ಖಾತೆ ಎನ್ನಲಾಗುವುದು.

Pauti Account: ವಾರಸುದಾರರ ಹೆಸರಿಗೆ ಪಹಣಿ ನೋಂದಣಿ, ಮನೆ ಬಾಗಿಲಿಗೆ ಪೌತಿ ಖಾತೆ
Pauti Account: ವಾರಸುದಾರರ ಹೆಸರಿಗೆ ಪಹಣಿ ನೋಂದಣಿ, ಮನೆ ಬಾಗಿಲಿಗೆ ಪೌತಿ ಖಾತೆ

ಇದನ್ನೂ ಓದಿ: 40% & 60% ಅಂಕ ಪಡೆದ ವಿದ್ಯಾರ್ಥಿಗಳ ಗಮನಕ್ಕೆ; ಸಿಗಲಿದೆ 50,000 ಸ್ಕಾಲರ್‌ ಶಿಪ್


ಇತ್ತೀಚಿನ ಜನಪ್ರಿಯ ಸುದ್ದಿಗಳು (Pauti Account:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ