PDO ಗಳಿಗೆ ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ

(PDO) ರಾಜ್ಯ ಸರ್ಕಾರ PDO ಗಳಿಗೆ ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ ಹೊರಡಿಸಿದೆ.


ನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ


ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 15 ವರ್ಷಗಳ ಸ್ವಯಂಚಾಲಿತ ವಿಶೇಷ ಮುಂಬಡ್ತಿ ಮಂಜೂರು ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಈ ಆದೇಶದಲ್ಲಿ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರ, ಲಘು ಮತ್ತು ಕಠಿಣ ದಂಡನೆಗಳನ್ನು ವಿಧಿಸಲು, ಕಾಲಬದ್ದ ವೇತನ ಬಡ್ತಿ ಮಂಜೂರಾತಿ, ಪರೀಕ್ಷಾರ್ಥ ಅವಧಿ ಘೋಷಣೆ ಹಾಗೂ ಸೇವಾ ವಿಷಯ ನಿರ್ವಹಣೆ ಮಾಡಲು ಪ್ರಾಧಿಕಾರವನ್ನು ನಿರ್ದಿಷ್ಟಪಡಿಸಿ ಸರ್ಕಾರವು ಆದೇಶಿಸಿದೆ.

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ 10 ವರ್ಷಗಳ ಕಾಲಮಿತಿ ವೇತನ ಬಡ್ತಿ, 15 ವರ್ಷಗಳ ಸ್ವಯಂಚಾಲಿತ ವಿಶೇಷ ಮುಂಬಡ್ತಿ, 20, 25 ಮತ್ತು 30 ವರ್ಷಗಳ ಹೆಚ್ಚುವರಿ ವೇತನ ಬಡ್ತಿಗಳ ಮಂಜೂರಾತಿಗಾಗಿ ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ, ಇವರನ್ನು ಪ್ರಾಧಿಕಾರವನ್ನಾಗಿ ನಿರ್ದಿಷ್ಟಪಡಿಸಲಾಗಿದೆ.


ನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ


10 ವರ್ಷಗಳ ಕಾಲಮಿತಿ ವೇತನ ಬಡ್ತಿ ಮಂಜೂರು ಮಾಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಸಲುವಾಗಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕಾಲಮಿತಿ ವೇತನ ಬಡ್ತಿ ಮಂಜೂರು ಮಾಡಲು ಅಧಿಕಾರವನ್ನು ಆಯಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದೆ.

ಪ್ರಸ್ತುತ 15 ವರ್ಷ ಪೂರ್ಣಗೊಳಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಂಖ್ಯೆ ಹೆಚ್ಚಿಗೆ ಇರುವುದರಿಂದ ಮತ್ತು 15 ವರ್ಷಗಳ ಸ್ವಯಂಚಾಲಿತ ವಿಶೇಷ ಮುಂಬಡ್ತಿಯನ್ನು ನಿಗಧಿತ ಅವಧಿಯೊಳಗೆ ಮಂಜೂರು ಮಾಡಲು ಅನುವಾಗುವಂತೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಸಲುವಾಗಿ, ಮುಂದಿನ ಆದೇಶದವರೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 15 ವರ್ಷಗಳ ಸ್ವಯಂಚಾಲಿತ ವಿಶೇಷ ಮುಂಬಡ್ತಿ ಮಂಜೂರು ಮಾಡುವ ಅಧಿಕಾರವನ್ನು ಆಯಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದೆ ಎಂದು ತಿಳಿಸಿದೆ.

PDO ಗಳಿಗೆ ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ
PDO ಗಳಿಗೆ ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ

ನ್ನೂ ಓದಿ: ITI ಪಾಸ್‌ ಆದವರಿಗೆ ಭರ್ಜರಿ ಜಾಬ್‌ ಆಫರ್; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು (PDO) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ