Pension For Farmers: ರೈತರಿಗೆಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೆ ತಂದಿದೆ. ಅವುಗಳಲ್ಲಿ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯೂ ಕೂಡ ಒಂದು. ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಪಿಎಂ ಕಿಸಾನ್ ಮಾನ್ ಧನ್ ಯೋಜನೆ ಎರಡೂ ಕೂಡ ಭಿನ್ನವಾಗಿದ್ದರೂ 2019 ರಲ್ಲೇ ಎರಡೂ ಆರಂಭವಾಗಿರುವುದು. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರಿಗೆ ವ್ಯವಸಾಯಕ್ಕೆಂದು ಸರ್ಕಾರ ವರ್ಷಕ್ಕೆ 6,000 ರೂ ಧನಸಹಾಯ ನೀಡುತ್ತದೆ. ಆದರೆ, ಪಿಎಂ ಕಿಸಾನ್ ಮಾನ್ ಧನ್ ಯೋಜನೆಯಲ್ಲಿ ಸಣ್ಣ ರೈತರಿಗೆ ಮಾಸಿಕ 3,000 ರೂ ಪಿಂಚಣಿ ಕಲ್ಪಿಸಲಾಗುತ್ತದೆ.
ಇದನ್ನೂ ಓದಿ; ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ; ಡಿಗ್ರಿ, ಡಿಪ್ಲೊಮ, ಐಟಿಐ ಪಾಸಾದವರಿಂದ ಅರ್ಜಿ ಆಹ್ವಾನ
ಹಾಗಾದರೆ ಏನಿದು ಪಿಎಂ ಕಿಸಾನ್ ಮಾನ್ ಧನ್ ಯೋಜನೆ?:
ಈ ಯೋಜನೆಯಡಿಯಲ್ಲಿ ಎರಡು ಹೆಕ್ಟೇರ್ ಅಥವಾ ಐದು ಎಕರೆವರೆಗೆ ಜಮೀನು ಹೊಂದಿರುವ ಹಾಗೂ 18 ರಿಂದ 40 ವರ್ಷ ವಯೋಮಾನದೊಳಗಿನ ರೈತರು ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯಲ್ಲಿ ನೊಂದಣಿ ಮಾಡಲು ಅರ್ಹರಿರುತ್ತಾರೆ.
ಇದನ್ನೂ ಓದಿ; ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್ ಗೆಲ್ಲುವ ಅವಕಾಶ
ಇದರಿಂದ ಏನು ಲಾಭ:
ಅರ್ಹ ರೈತರು ತಿಂಗಳಿಗೆ 55 ರೂನಿಂದ 200 ರೂವರೆಗೆ ಹಣವನ್ನು ಪಿಂಚಣಿ ನಿಧಿಗೆ (Pension For Farmers: ) ತುಂಬಿಸುತ್ತಾ ಹೋಗಬೇಕು. ಕೇಂದ್ರ ಸರ್ಕಾರ ಕೂಡ ಇಷ್ಟೇ ಹಣವನ್ನು ನಿಧಿಗೆ ಹಾಕುತ್ತದೆ. ಒಂದು ವೇಳೆ 18 ವರ್ಷ ವಯಸ್ಸಿನಲ್ಲಿ ಈ ಯೋಜನೆ ಆರಂಭಿಸಿದರೆ ತಿಂಗಳಿಗೆ ಕನಿಷ್ಠ 55 ರೂನಂತೆ ಕಟ್ಟಿಕೊಂಡು ಹೋಗಬೇಕು. ಒಂದು ವೇಳೆ 40 ನೇ ವಯಸ್ಸಿನಲ್ಲಿ ಯೋಜನೆ ಪಡೆದರೆ ತಿಂಗಳಿಗೆ ಕಟ್ಟಬೇಕಾಗಿರುವ ಕನಿಷ್ಠ ಮೊತ್ತ 200 ರೂ ಕಟ್ಟಬೇಕು. 60 ವರ್ಷದವರೆಗೆ ಪ್ರತೀ ತಿಂಗಳು ಪಿಂಚಣಿ ನಿಧಿಗೆ ಕಟ್ಟಬೇಕು. ಅದಾದ ಬಳಿಕ ತಿಂಗಳಿಗೆ 3,000 ರೂ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ಪಿಂಚಣಿಯನ್ನು ರೈತರು ಪಡೆಯಬಹುದು. ಸದ್ಯ 19,47,588 ರೈತರು ಈ ಯೋಜನೆಗೆ ನೊಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ; ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನಿಯುಕ್ತಿ
ಹಾಗಾದರೆ ಈ ಯೋಜನೆಗೆ (ಪಿಎಂ ಕಿಸಾನ್ ಮಾನಧನ್) ನೊಂದಾಯಿಸುವುದು ಹೇಗೆ?:
* ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಬೇಕು.
* ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ವಿವರ ನೀಡಿ ನೊಂದಾಯಿಸಬೇಕು.
* ರೈತರ ವಯಸ್ಸಿಗೆ ಅನುಗುಣವಾಗಿ ಅವರು ಕನಿಷ್ಠ ಎಷ್ಟು ಹಣ ಕಟ್ಟಬೇಕು ಎಂಬುದನ್ನು ನಿರ್ದಿಷ್ಟಪಡಿಸಲಾಗುತ್ತದೆ.
* ಗ್ರಾಮ ಮಟ್ಟದ ಉದ್ದಿಮೆದಾರ ಈ ನೊಂದಾವಣಿಯಲ್ಲಿ ಸಹಾಯ ಮಾಡುತ್ತಾರೆ.
* ಅರ್ಹ ರೈತರು ಮೊದಲ ಕಂತನ್ನು ನಗದು ರೂಪದಲ್ಲಿ ಆ ಉದ್ದಿಮೆದಾರನಿಗೆ ನೀಡಬೇಕು.
* ಬಳಿಕ ಆಟೊ ಡೆಬಿಟ್ ಅರ್ಜಿ ತುಂಬಿಸಿ ಸಲ್ಲಿಸಬೇಕು.
* ಆ ಬಳಿಕ ಪ್ರತೀ ತಿಂಗಳು ಕೂಡ ಎಸ್ ಬಿ ಖಾತೆಯಿಂದ ನಿರ್ದಿಷ್ಟ ಮೊತ್ತದ ಹಣವು ಪಿಂಚಣಿ ನಿಧಿಗೆ ಹೋಗುತ್ತಿರುತ್ತದೆ.
ಇದನ್ನೂ ಓದಿ; ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
ಯೋಜನೆಯಲ್ಲಿ ನೊಂದಣಿ ಮಾಡಿಕೊಂಡ ಬಳಿಕ ರೈತರಿಗೆ ವಿಶೇಷ ಕಿಸಾನ್ ಪೆನ್ಷನ್ ಅಕೌಂಟ್ (Pension For Farmers: ) ನಂಬರ್ (ಕೆಪಿಎಎನ್) ಸೃಷ್ಟಿಯಾಗುತ್ತದೆ. ಬಳಿಕ ಕಿಸಾನ್ ಕಾರ್ಡ್ ಅನ್ನು ನೀಡಲಾಗುತ್ತದೆ.
ಪ್ರಮುಖ ಸುದ್ದಿಗಳನ್ನು ಓದಿ
- 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
- rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ
- ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
- ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply