Sunday, June 4, 2023
Homeಕರಾವಳಿಜನಜಾಗೃತಿ ಸಭೆಯಲ್ಲಿ ಅಶ್ಲೀಲ ಪದ ಬಳಸಿ ಪ್ರಚೋದನಕಾರಿ ಭಾಷಣ: ಚೈತ್ರ ಕುಂದಾಪುರ ವಿರುದ್ಧ ದೂರು ದಾಖಲು.

ಜನಜಾಗೃತಿ ಸಭೆಯಲ್ಲಿ ಅಶ್ಲೀಲ ಪದ ಬಳಸಿ ಪ್ರಚೋದನಕಾರಿ ಭಾಷಣ: ಚೈತ್ರ ಕುಂದಾಪುರ ವಿರುದ್ಧ ದೂರು ದಾಖಲು.

ಮಂಗಳೂರು: ಜನಜಾಗೃತಿ ಸಭೆಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಭಾಷಣ ಮಾಡಿದ ಚೈತ್ರ ಕುಂದಾಪುರ ರವರ ವಿರುದ್ಧ ದೂರು ದಾಖಲಾಗಿದೆ.

ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಸಭೆಯಲ್ಲಿ ಚೈತ್ರರವರು ಅಶ್ಲೀಲ, ಕಾನೂನುಬಾಹಿರ ಪದಗಳನ್ನು ಬಳಸಿ ಪ್ರಚೋದನಕಾರಿ ಭಾಷಣ ಮಾಡಿದ್ದು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಇವರ ವಿರುದ್ಧ ಬಂಟ್ವಳ ತಾಲ್ಲೂಕಿನ ಶಂಭೂರಿನ ಬೊಂಡಾಲ ಚಿತ್ತರಂಜನ್ ಶೆಟ್ಟಿ ಕಾನೂನು ಕ್ರಮಕ್ಕೆ ಅಗ್ರಹಿಸಿ ಸುರತ್ಕಲ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.

ಬಜರಂಗದಳ ದುರ್ಗಾವಾಹಿನಿ ಸುರತ್ಕಲ್ ಪ್ರಖಂಡದಿಂದ ‘ಲವ್ ಜಿಹಾದ್ ಮತ್ತು ಮತಾಂತರ’ ವಿರುದ್ಧ ಹಿಂದೂ ಸಮಾಜವನ್ನು ಜಾಗೃತಗೊಳಿಸುವ ಹೆಸರಿನಲ್ಲಿ ಸುರತ್ಕಲ್‌ನಲ್ಲಿ ಅ.4ರಂದು ನಡೆದ ಜನಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಪ್ರಚೋದನಕಾರಿ ಭಾಷಣ ಮಾಡಿದ್ದು ಸಾಮಾಜಿಕ ತಾಣದಲ್ಲಿ, ಮಾಧ್ಯಮದಲ್ಲಿ ಭಾರಿ ಸುದ್ದಿಯಾಗಿತ್ತು, ಇವರು ಮಾಡಿದ ಭಾಷಣ ಸಮಾಜದ ಸ್ವಾಸ್ಥವನ್ನು ಕದಡುವ ಮತೀಯ ಘರ್ಷಣೆಗೆ ಕಾರಣವಾಗುವ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಯಿದ್ದಿದ್ದರಿಂದ ಚೈತ್ರ ಕುಂದಾಪುರ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ಚೈತ್ರಾ ಕುಂದಾಪುರ ಭಾಷಣದಲ್ಲಿ ಒಂದು ಕೋಮಿನ ಜನರನ್ನು ಕಾನೂನುಬಾಹಿರ ಪದಗಳನ್ನು ಬಳಸಿ ಅವಮಾನಿಸಿದ್ದಾರೆ. ಅಲ್ಲದೆ, ಆ ಕೋಮಿನ ವಿರುದ್ಧ ಜನತೆಯನ್ನು ಎತ್ತಿಕಟ್ಟುವ, ದ್ವೇಷ ಹುಟ್ಟಿಸುವ ರೀತಿಯಲ್ಲಿ ಉದ್ರೇಕಕಾರಿ ಪದಗಳನ್ನು ಬಳಸಿದ್ದಾರೆ. ಈಕೆಯ ಭಾಷಣದಿಂದ ಪ್ರಚೋದನೆಗೆ ಒಳಗಾಗಿ ಕ್ರಿಯೆ ಪ್ರಕ್ರಿಯೆಗಳು ಉಂಟಾಗುವ, ಕೋಮು ಘರ್ಷಣೆಯ ಭೀತಿ ಎದುರಾಗಿದೆ ಎಂದು ಉಲ್ಲೇಖಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ವಾಗ್ವಾದಗಳು ನಡೆಯುತ್ತಿವೆ ಹಾಗೆಯೇ ಈಕೆಯ ಭಾಷಣದಲ್ಲಿ ತುಳುನಾಡಿನ ಕಾರಣಿಕ ಪುರಷರು, ಆರಾಧ್ಯ ದೈವಗಳಾದ ಕೋಟಿ ಚೆನ್ನಯರನ್ನು ದುರುಪಯೋಗ ಪಡಿಸಿ, ತುಳುವರ ಧಾರ್ಮಿಕ ನಂಬಿಕೆಗೆ ಘಾಸಿಯುಂಟು ಮಾಡಿದ್ದಾಳೆ. ಕೋಟಿ ಚೆನ್ನಯರು ಹಿಡಿಯುವ ಸುರಿಯ ಎಂಬ ಪವಿತ್ರ ಆಯುಧವನ್ನು ರೌಡಿಗಳು, ಕೋಮು ಘರ್ಷಣೆಯಲ್ಲಿ ಪುಂಡರು ಬಳಸುವ ತಲವಾರಿಗೆ ಹೋಲಿಸಿರುವುದು ಈಕೆಯ ಭಾಷಣದಲ್ಲಿ ದಾಖಲಾಗಿದೆ. ಇದು ಅತ್ಯಂತ ಆಘಾತಕಾರಿ, ಧಾರ್ಮಿಕ ನಂಬಿಕೆಗೆ ಘಾಸಿ ಉಂಟು ಮಾಡುವಂತಹ ಪ್ರಯತ್ನವನ್ನು ಇವರು ಮಾಡಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Most Popular

Recent Comments