Monday, December 11, 2023
Homeಮಲೆನಾಡುಚಿಕ್ಕಮಗಳೂರುಕಳಸ: ರಸ್ತೆ ಇಲ್ಲದೆ ರೋಗಿಯನ್ನ ಜೋಳಿಗೆಯಲ್ಲಿ ಹೊತ್ತು ತಂದ ಜನ

ಕಳಸ: ರಸ್ತೆ ಇಲ್ಲದೆ ರೋಗಿಯನ್ನ ಜೋಳಿಗೆಯಲ್ಲಿ ಹೊತ್ತು ತಂದ ಜನ

ಕಳಸ: (ನ್ಯೂಸ್ ಮಲ್ನಾಡ್ ವರದಿ) ಸೂಕ್ತ ರಸ್ತೆ ಇಲ್ಲದ ವಯೋವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸುವ ಪರಿಸ್ಥಿತಿ ಜಿಲ್ಲೆಯಲ್ಲಿ ಇಂದಿಗೂ ಜೀವಂತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಕೋಡು ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ;  ಶೃಂಗೇರಿ; ಕಿಗ್ಗಾ ನಾಡಕಚೇರಿಯನ್ನು ಶೃಂಗೇರಿಗೆ ವರ್ಗಾಯಿಸುವಂತೆ ಒತ್ತಾಯ

ಇದನ್ನೂ ಓದಿ; ಹೊಸ ಫೋನ್‌ ಖರೀದಿಸಿದ್ರೆ 2 kg ಟೊಮೆಟೊ ಉಚಿತ!;ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ.

70 ವರ್ಷದ ಶೇಷಮ್ಮರನ್ನು ಕುಟುಂಬಸ್ಥರು ಸುಮಾರು 1 ಕಿ.ಮೀ.ಜೋಳಿಗೆಯಲಿ, ಹೊತ್ತು ತಂದು ಆಸತ್ರೆಗೆ ದಾಖಲಿಸಿದ್ದಾರೆ. ಸೂಕ್ತ ರಸ್ತೆ ಇಲ್ಲದ ಕಾರಣ ಜೋಳಿಗೆಯಲ್ಲಿ ಹೊತ್ತು ತಂದಿದ್ದಾರೆ. ಗ್ರಾಮದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆ 30-40 ಜನಸಂಖ್ಯೆಯ ಕಾಡಂಚಿನ ಕುಗ್ರಾಮಗಳಿವೆ, ಆದರೆ ಓಡಾಡಲು ಸೂಕ್ತ ರಸ್ತೆ ಇಲ್ಲ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಕಲ್ಕೋಡು ಗ್ರಾಮದಿಂದ ಕಳಸ ತಾಲೂಕಿಗೆ ಬರಬೇಕು ಅಂದರೆ 4 ಕಿ.ಮೀ. ಆಗುತ್ತದೆ. 3-4 ಕಿ.ಮೀ. ಬಂದರೆ ಆಟೋ ಸಿಗುತ್ತೆ ಆದರೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅಧಿಕಾರಿಗಳು ರಸ್ತೆ ಬಿಡುತ್ತಿಲ್ಲ, ರಸ್ತೆಗಾಗಿ ಸಾಕಷ್ಟು ಬಾರಿ ಮನವಿ ಮಾಡಿದ್ದರು ಅಧಿಕಾರಿಗಳು, ಜನನಾಯಕರು ಈವರೆಗೂ ಯಾರೂ ಕೂಡ ಸ್ಪಂದಿಸಿಲ್ಲ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Most Popular

Recent Comments