(PM Awas Yojana 25:) ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (ಪಿಎಂ ಆವಾಸ್ ಯೋಜನೆ) ಮಂಜೂರಾದ 47,848 ಮನೆಗಳ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ
ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ.
ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ.
ಇದನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ
(PM Awas Yojana 25:)ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ. ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ ರೂ.900 ಕೋಟಿ ಅನುದಾನ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು (PM Awas Yojana 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





