(pm Kisan Maandhan) ರೈತರಿಗಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ರೀತಿ ರೈತರಿಗಾಗಿ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ ಈ ಪಿಂಚಣಿ ಯೋಜನೆಯಲ್ಲಿ ಪ್ರತಿ ತಿಂಗಳು 3000 ಸಾವಿರವನ್ನು ಪಡೆಯಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಹೊಸದಾಗಿ ಹಲವು ನಿಬಂಧನೆಗಳನ್ನು ಹೇರಿದ ಸರ್ಕಾರ
ಪ್ರಧಾನ ಮಂತ್ರಿ ಕಿಸಾನ್ ಮಾಂದನ್ ಯೋಜನೆಯಡಿ ರೈತರು ಕೇವಲ 55 ರೂಪಾಯಿ ಠೇವಣಿ ಇಟ್ಟರೆ 60 ವರ್ಷ ದಾಟಿದ ನಂತರ ಅವರಿಗೆ ಪ್ರತಿ ತಿಂಗಳು ಪಿಂಚಣಿಯಾಗಿ 3000 ರೂಪಾಯಿ ಸಿಗಲಿದೆ. 60 ವರ್ಷ ವಯಸ್ಸಿನ ನಂತರ ರೈತರು ಕೃಷಿ ಮಾಡಲು ದೈಹಿಕವಾಗಿ ಸಾಮರ್ಥ್ಯ ಹೊಂದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಅವರು ಇತರರನ್ನು ಅವಲಂಬಿಸಬೇಕಾಗಿದೆ. ಆದರೆ, ಈ ಹೊಸ ಯೋಜನೆಯಡಿ ಅವರು ಯಾರನ್ನೂ ಅವಲಂಬಿಸುವ ಅಗತ್ಯವಿಲ್ಲ.
ಇದನ್ನೂ ಓದಿ: ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಉದ್ಯೋಗ; 5250 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಾಂಧನ್ ಯೋಜನೆಯನ್ನು ಪ್ರಾರಂಭಿಸಿದ್ದು, ಸಣ್ಣ ರೈತರಿಗೆ ಈ ಯೋಜನೆಯ ಮೂಲಕ ಆರ್ಥಿಕ ಪ್ರಯೋಜನಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. 18 ರಿಂದ 40 ವರ್ಷದೊಳಗಿನ ಎಲ್ಲಾ ರೈತರು ಈ ಯೋಜನೆಯ ಲಾಭ ಪಡೆಯಬಹುದು. ವಿವಿಧ ವಯಸ್ಸಿನ ಹಂತಗಳಿಗೆ ಅನುಗುಣವಾಗಿ ವಿವಿಧ ಪ್ರೀಮಿಯಂಗಳನ್ನು ಪಾವತಿಸಬೇಕಾಗುತ್ತದೆ.
ಇದು 55 ರಿಂದ 200 ರೂಪಾಯಿ ವರೆಗೆ ಇದೆ. 60 ವರ್ಷ ತುಂಬಿದ ನಂತರ ಯೋಜನೆಗೆ ಸೇರ್ಪಡೆಯಾದ ರೈತರಿಗೆ ಪ್ರತಿ ತಿಂಗಳು 3,000 ರೂಪಾಯಿ ದೊರೆಯಲಿದೆ. ಈ ಯೋಜನೆಯ ಲಾಭ ಪಡೆಯುವ ಫಲಾನುಭವಿ ರೈತರು ಯಾವುದೇ ಸಂದರ್ಭದಲ್ಲಿ ಮರಣ ಹೊಂದಿದರೆ ಅವರ ಪತ್ನಿಗೆ ಅವರ ಅರ್ಧದಷ್ಟು ಪಿಂಚಣಿ ಅಂದರೆ ಪ್ರತಿ ತಿಂಗಳು 1500 ರೂಪಾಯಿ ಸಿಗಲಿದೆ.
ಇದನ್ನೂ ಓದಿ: ರೈತರಿಗೆ ಮಹತ್ವದ ಮಾಹಿತಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಆಧಾರ್ ಸಂಖ್ಯೆ ಲಿಂಕ್ ಏಕೆ? ಪ್ರಯೋಜನ ಏನು? ಇಲ್ಲಿದೆ ಮಾಹಿತಿ
ಹಾಗಾದರೆ ಅರ್ಜಿ ಸಲ್ಲಿಸುವುದು ಹೇಗೆ?:
* ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಮೊದಲನೆಯದಾಗಿ ರೈತರು ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. (https://maandhan.in/)
* ಇದಾದ ನಂತರ ರೈತರು ಲಾಗಿನ್ ಆಗಿ ನಂತರ ಯೋಜನೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಅದರಲ್ಲಿ ನಮೂದಿಸಬೇಕಾಗುತ್ತದೆ.
* ನಂತರ Generate OTP ಮೇಲೆ ಕ್ಲಿಕ್ ಮಾಡಿ OTP ಬಂದಾಗ ಅದನ್ನು ನಮೂದಿಸಿ.
* ಈ ಸಂಪೂರ್ಣ ಪ್ರಕ್ರಿಯೆಯ ನಂತರ ನೀವು Submit ಮೇಲೆ ಕ್ಲಿಕ್ ಮಾಡಬೇಕು.
* ಆಗ ನಿಮ್ಮ ಅಪ್ಲಿಕೇಶನ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: ಮೊಬೈಲ್ ಬಳಕೆದಾರರೇ ಹುಷಾರ್!; ಈ ರೀತಿ ಮಸೇಜ್ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ






