(Pm Kisan Nidhi Yojana) ಕೇಂದ್ರ ಸರ್ಕಾರ ರೈತರಿಗಾಗಿ 2019 ರಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಹಲವಾರ ಜನರು ನೋಂದಾಯಿಸಿಕೊಂಡು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ರೀತಿ ಈ ಯೋಜನೆಯಲ್ಲಿ ಇತರರ ಭೂಮಿಯನ್ನು ಸಾಗುವಳಿ ಮಾಡುವ ರೈತರು ಈ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಾರೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆಗಳಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಈ ದಿನ ಆಧಾರ್ ಅಪ್ಡೇಟ್ ಮಾಡಲು ಕೊನೆಯ ದಿನ; ಅಪ್ಡೇಟ್ ಮಾಡುವುದು ಹೇಗೆ? ಇಲ್ಲಿದೆ ಡಿಟೈಲ್ಸ್
ಇತರರ ಜಮೀನಿನಲ್ಲಿ ಸಾಗುವಳಿ ಮಾಡುವ ರೈತರು ಈ ಯೋಜನೆಗೆ ಪ್ರಯೋಜನ ಪಡೆಯಬಹುದೇ?:
* ಒಬ್ಬ ರೈತ ವ್ಯವಸಾಯ ಮಾಡುತ್ತಿದ್ದರೆ ಮತ್ತು ಆ ಜಮೀನನ್ನು ಅವನ ಹೆತ್ತವರ ಹೆಸರಿಗೆ ನೋಂದಾಯಿಸಿದರೆ, ಅಂತಹ ಪರಿಸ್ಥಿತಿಯಲ್ಲಿ ಅವನಿಗೆ ಈ ಯೋಜನೆಯ ಪ್ರಯೋಜನ ಸಿಗುವುದಿಲ್ಲ.
* ಯಾರ ಹೆಸರಿನಲ್ಲಿ ಸಾಗುವಳಿ ಭೂಮಿ ನೋಂದಣಿಯಾಗಿದೆಯೋ ಆ ರೈತರು ಮಾತ್ರ ಈ ಯೋಜನೆಯ ಲಾಭ ಪಡೆಯಬಹುದು.
* ಪೂರ್ವಜರಿಂದ ಪಡೆದ ಭೂಮಿಯನ್ನು ನಿಮ್ಮ ಹೆಸರಿನಲ್ಲಿ ನೋಂದಾಯಿಸಿದ್ದರೆ, ಈ ಯೋಜನೆಯ ಲಾಭವನ್ನು ಪಡೆಯಬಹುದು.
ಇದನ್ನೂ ಓದಿ; ಗ್ರಾಮ ಪಂಚಾಯಿತಿಯಲ್ಲೇ ಸಿಗಲಿದೆ ಇ-ಶ್ರಮ ಕಾರ್ಡ್; ಕೆಲಸದ ಭದ್ರತೆ ಸೇರಿದಂತೆ 2 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ
* ಸ್ವಂತ ಜಮೀನು ಇಲ್ಲದೇ ಪರರ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿರುವ ರೈತರಿಗೂ ಈ ಯೋಜನೆಯ ಲಾಭ ಸಿಗುವುದಿಲ್ಲ.
* ರೈತನ ಭೂಮಿ ಅವನ ಪೂರ್ವಜರ ಹೆಸರಿನಲ್ಲಿ ಅಥವಾ ಅವನ ಹೆತ್ತವರ ಹೆಸರಿನಲ್ಲಿದ್ದರೆ ಅಂತಹ ರೈತರು ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಿಲ್ಲ.
ಇದನ್ನೂ ಓದಿ; ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಈ ಯೋಜನೆಯಲ್ಲಿ ನೋಂದಾಯಿಸಿದ ರೈತರಿಗೆ ಸಿಗಲಿದೆ ಪ್ರತಿ ವರ್ಷ 6 ಸಾವಿರ:
ಪ್ರ‍್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಯೋಜನೆಯಡಿ ರೈತರಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ಈ ಯೋಜನೆಯಡಿ ರೈತರು ಒಂದು ವರ್ಷದಲ್ಲಿ ಮೂರು ಕಂತುಗಳಲ್ಲಿ ತಲಾ 2000 ರೂಪಾಯಿ ಹಣ ಪಡೆಯುತ್ತಾರೆ. ರೈತರಿಗೆ ಮೂರು ಕಂತುಗಳಿಂದ ಒಟ್ಟು 6000 ರೂ. ಪಡೆಯುತ್ತಾರೆ. ಸಣ್ಣ ಹಿಡುವಳಿ ಭೂಮಿ ಹೊಂದಿರುವ ಯಾವುದೇ ರೈತರು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಆದರೆ, ಆದಾಯ ತೆರಿಗೆ ಪಾವತಿಸುವ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
ಇದನ್ನೂ ಓದಿ; ನಿಮ್ಮ ಖಾತೆಗೆ ಬೆಳೆ ವಿಮೆ ಹಣ ಜಮಾ ಆಗಿದ್ಯಾ?; ಈ ರೀತಿ ಚೆಕ್ ಮಾಡಿ








Leave a Reply