(Pm -kisan:) ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತುಗಳು ಅರ್ಹ ರೈತರ ಖಾತೆಗೆ ಜಮಾ ಆಗಿದೆ. ಇದೀಗ 18 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ. ಆದರೆ 18 ನೇ ಕಂತಿನ ಹಣ ಜಮಾ ಆಗಬೇಕಿದ್ದರೆ ನೀವು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ಈ ಕೆಲಸ ಮಾಡಿಸದೇ ಇದ್ದಲ್ಲಿ ಅಂತಹ ರೈತರಿಗೆ 18 ಕಂತಿನ ಹಣ ಜಮಾ ಆಗುವುದಿಲ್ಲ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಕಂತಿನಲ್ಲಿ ತಲಾ 2000 ಹಣವನ್ನು ಅರ್ಹ ರೈತರ ಖಾತೆಗೆ ಜಮಾ ಮಾಡುತ್ತಿದೆ. ಹಾಗಾದರೆ ಈ ಯೋಜನೆಯ ಫಲಾನುಭವಿಯಾಗುವುದು ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಪಪ್ಪಾಯಿ ತಿನ್ನುವವರೇ ಹುಷಾರ್!; ಅಪ್ಪಿತಪ್ಪಿಯೂ ಈ ಪದಾರ್ಥಗಳ ಜೊತೆ ತಿನ್ನಲೇಬೇಡಿ; ಯಾಕೆ ಗೊತ್ತಾ?
ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವ ವಿಧಾನ:
ಪಿಎಂ ಕಿಸಾನ್ ಯೋಜನೆಯ ವೆಬ್ ಸೈಟ್ ಮುಖಾಂತರ ನೊಂದಾಯಿಸಬಹುದು. ಅಥವಾ ನಿಮ್ಮ ಗ್ರಾಮ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.
ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!
ಪಿಎಂ ಕಿಸಾನ್ ಯೋಜನೆಯ ವೆಬ್ ಸೈಟ್ ವಿಳಾಸ:
* ಕೇಂದ್ರ ಸರ್ಕಾರದ pmkisan.gov.in ಜಾಲತಾಣಕ್ಕೆ ಭೇಟಿ ನೀಡಿ
* ಅಲ್ಲಿ NEW FARMER REGISTRATION ಎಂಬ ಐಕಾನ್ ಕ್ಲಿಕ್ ಮಾಡಿ
* ಆಗ ತೆರೆಯಲ್ಪಡುವ NEW FARMER REGISTRATION FORM ನಲ್ಲಿ ತಮ್ಮ ವಿವರಗಳನ್ನು ದಾಖಲಿಸಿ ಹೆಸರನ್ನು ನೋಂದಾಯಿಸಬಹುದು.
ಇದನ್ನೂ ಓದಿ; UPI ಬಳಕೆದಾರರಿಗೆ ಗುಡ್ ನ್ಯೂಸ್; ಹಣ ವರ್ಗಾವಣೆ ಮಿತಿ ಹೆಚ್ಚಳ
* ಪಿಎಂ ಕಿಸಾನ್ ಅಧಿಕೃತ ಜಾಲತಾಣಕ್ಕೆ (https://pmkisan.gov.in) ಭೇಟಿ ನೀಡಿ. ಅದು ಸಾಧ್ಯವಾಗಲಿದ್ದರೆ, ಪ್ರತಿ ಜಿಲ್ಲೆಯಲ್ಲಿ ನಿಯೋಜಿಸಲಾಗಿರುವ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ (ಸಿ.ಎಸ್.ಸಿ.) ತಮ್ಮ ಹೆಸರನ್ನು ನೋಂದಾಯಿಸಬಹುದು.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ ಒಂದೇ ಬಾರಿ ಜಮಾ; ಯಾವಾಗ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು?
ರೈತರಾಗಿದ್ದರೂ ಇವರು ಈ ಯೋಜನೆಗೆ ಅರ್ಹರಲ್ಲ:
* ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇರುವವರು.
* ಸೇವೆಯಲ್ಲಿರುವ ಅಥವಾ ನಿವೃತ್ತರಾಗಿರುವ ಸರ್ಕಾರಿ ಅಧಿಕಾರಿಗಳು ಅಥವಾ ಉದ್ಯೋಗಿಗಳು
* ಕೇಂದ್ರ ಅಥವಾ ರಾಜ್ಯ ಸಚಿವಾಲಯಗಳು, ಕಚೇರಿಗಳು ಹಾಗೂ ಇಲಾಖೆಗಳಲ್ಲಿ ಹಾಗೂ ಅವುಗಳ ಅಧೀನದಲ್ಲಿರುವ ಸಂಸ್ಥೆಗಳ ಸಿಬ್ಬಂದಿ
* ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾರ್ವಜನಿಕ ಸಂಸ್ಥೆಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಕಚೇರಿ, ಸ್ವಾಯತ್ತ ಸಂಸ್ಥೆ ಅಥವಾ ಅವುಗಳ ಅಧೀನದಲ್ಲಿರುವ ಸ್ಥಳೀಯ ಸಂಸ್ಥೆಗಳಲ್ಲಿ, ಕಚೇರಿಗಳಲ್ಲಿನ ಸಿಬ್ಬಂದಿ (ಬಹು ಕಾರ್ಯೋದ್ದೇಶದ ಸಿಬ್ಬಂದಿ, 4ನೇ ದರ್ಜೆಯ ನೌಕರರು, ಗ್ರೂಪ್ ಡಿ ನೌಕರರನ್ನು ಹೊರತುಪಡಿಸಿ).
ಇದನ್ನೂ ಓದಿ; ಹೋಮ್ ಲೋನ್ ಪಡೆದವರು ಓದಲೇಬೇಕಾದ ಸುದ್ದಿ; ಈ ಕೆಲ್ಸ ಮಾಡೋದು ಮರಿಬೇಡಿ, ಇಲ್ಲದಿದ್ರೆ ಸಮಸ್ಯೆಯಾಗುತ್ತೆ!
(Pm -kisan:) ನೀವು ಫಲಾನುಭವಿಗಳೇ ಎಂಬುದನ್ನು ಪರೀಕ್ಷಿಸಲು ಹೀಗೆ ಮಾಡಿ:
* Farmers corner ಅಡಿಯಲ್ಲಿ Beneficiary List ಕ್ಲಿಕ್ ಮಾಡಿ.
* ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್, ಹಳ್ಳಿಯನ್ನು ಆಯ್ಕೆ ಮಾಡಿ.
* ಆನಂತರ, Get Report ಟ್ಯಾಬ್ ಒತ್ತಿ.
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡಬೇಕು:
* ಯೋಜನೆಗೆ ಇನ್ನೂ ನೊಂದಾವಣಿ ಆಗಿಲ್ಲದೇ ಇರಬಹುದು.
* ಇಕೆವೈಸಿ ಆಗಿಲ್ಲದೇ ಇರಬಹುದು, ಅಥವಾ ಸರಿಯಾಗಿ ಮಾಡಿಲ್ಲದೇ ಇರಬಹುದು.
* ಯೋಜನೆಯ ಅರ್ಹತಾ ಮಾನದಂಡ ಒದಗಿಸಲು ವಿಫಲವಾಗಿರಬಹುದು.
ಇದನ್ನೂ ಓದಿ; ಗ್ರಾಮೀಣ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್; 10 ಲಕ್ಷ ಫಲಾನುಭವಿಗಳ ಖಾತೆಗೆ PMAY-G ಹಣ ಜಮಾ
ನೀವು ಪಿಎಂ ಕಿಸಾನ್ ಯೋಜನೆಯೊಂದಿಗೆ ಸಂಬಂಧ ಹೊಂದಿದ್ದರೆ ಮತ್ತು ಕಂತಿನ ಲಾಭವನ್ನು ಪಡೆಯಲು ಬಯಸಿದರೆ, ನೀವು ಇ-ಕೆವೈಸಿ ಮಾಡಿಸಿಕೊಳ್ಳುವುದು ಮುಖ್ಯ. ನೀವು ಇದನ್ನು ಮಾಡದಿದ್ದರೆ, ನಿಮಗೆ ಈ ಯೋಜನೆಯ ಹಣ ಬರುವುದಿಲ್ಲ.
ಇದನ್ನೂ ಓದಿ; 3 ಲಕ್ಷ ಸಾಲ ಸೌಲಭ್ಯದ ಜೊತೆ ಶೇ.50ರಷ್ಟು ಸಬ್ಸಿಡಿ; ಇಲ್ಲಿದೆ ಡೀಟೆಲ್ಸ್
ಎಲ್ಲಿ ಇ-ಕೆವೈಸಿ ಮಾಡಿಸಬೇಕು:
ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಅಥವಾ ಯೋಜನೆಯ ಅಧಿಕೃತ ಪೋರ್ಟಲ್ pmkisan.gov.in ನಿಂದ ನೀವು ಇ-ಕೆವೈಸಿ ಮಾಡಬಹುದು. ಯೋಜನೆಗೆ ಸಂಬಂಧಿಸಿದ ರೈತರಿಗೆ ಭೂ ಪರಿಶೀಲನೆಯೂ ಕಡ್ಡಾಯವಾಗಿದೆ. ನೀವು ಈ ಕೆಲಸವನ್ನು ಮಾಡದಿದ್ದರೆ, ನೀವು ಕಂತಿನ ಪ್ರಯೋಜನದಿಂದ ವಂಚಿತರಾಗಬಹುದು.

ಇದನ್ನೂ ಓದಿ; ಮಾರುಕಟ್ಟೆಗೆ ಬಂದಿದೆ ವಿಷರೂಪದ ಬೆಳ್ಳುಳ್ಳಿ; ಯಾಮಾರಿದ್ರೆ ನಿಮ್ಮ ಜೀವಕ್ಕೆ ಕುತ್ತು ಗ್ಯಾರೆಂಟಿ..!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






