PM Kisan Registration: ಕಿಸಾನ್ ಯೋಜನೆಗೆ ನೋಂದಣಿ ಹೇಗೆ?

(PM Kisan Registration) ಕೇಂದ್ರ ಸರ್ಕಾರದ ಹಲವು ಯೋಜನೆಯಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಕಂತಿನಲ್ಲಿ ತಲಾ 2000 ಹಣವನ್ನು ಅರ್ಹ ರೈತರ ಖಾತೆಗೆ ಜಮಾ ಮಾಡುತ್ತಿದೆ.


ಇದನ್ನೂ ಓದಿ: ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್


ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಪಿಎಂ ಕಿಸಾನ್ ಯೋಜನೆಗೆ ಅನುದಾನ ಹೆಚ್ಚಿಸುವ ಸಾಧ್ಯತೆ ಇದ್ದು, 6000 ಬದಲು 8000 ಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಾದರೆ ಈ ಯೋಜನೆಯ ಫಲಾನುಭವಿಯಾಗುವುದು ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವ ವಿಧಾನ:
ಪಿಎಂ ಕಿಸಾನ್ ಯೋಜನೆಯ ವೆಬ್ ಸೈಟ್ ಮುಖಾಂತರ ನೊಂದಾಯಿಸಬಹುದು. ಅಥವಾ ನಿಮ್ಮ ಗ್ರಾಮ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಪಿಎಂ ಕಿಸಾನ್ ಯೋಜನೆಯ ವೆಬ್ ಸೈಟ್ ವಿಳಾಸ:
* ಕೇಂದ್ರ ಸರ್ಕಾರದ pmkisan.gov.in ಜಾಲತಾಣಕ್ಕೆ ಭೇಟಿ ನೀಡಿ
* ಅಲ್ಲಿ NEW FARMER REGISTRATION ಎಂಬ ಐಕಾನ್ ಕ್ಲಿಕ್ ಮಾಡಿ,
* ಆಗ ತೆರೆಯಲ್ಪಡುವ NEW FARMER REGISTRATION FORM ನಲ್ಲಿ ತಮ್ಮ ವಿವರಗಳನ್ನು ದಾಖಲಿಸಿ ಹೆಸರನ್ನು ನೋಂದಾಯಿಸಬಹುದು.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ


ಅದು ಸಾಧ್ಯವಾಗಲಿದ್ದರೆ, ಪ್ರತಿ ಜಿಲ್ಲೆಯಲ್ಲಿ ನಿಯೋಜಿಸಲಾಗಿರುವ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ (ಸಿ.ಎಸ್.ಸಿ.) ತಮ್ಮ ಹೆಸರನ್ನು ನೋಂದಾಯಿಸಬಹುದು.

ರೈತರಾಗಿದ್ದರೂ ಇವರು ಈ ಯೋಜನೆಗೆ ಅರ್ಹರಲ್ಲ:
* ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇರುವವರು.
* ಸೇವೆಯಲ್ಲಿರುವ ಅಥವಾ ನಿವೃತ್ತರಾಗಿರುವ ಸರ್ಕಾರಿ ಅಧಿಕಾರಿಗಳು ಅಥವಾ ಉದ್ಯೋಗಿಗಳು
* ಕೇಂದ್ರ ಅಥವಾ ರಾಜ್ಯ ಸಚಿವಾಲಯಗಳು, ಕಚೇರಿಗಳು ಹಾಗೂ ಇಲಾಖೆಗಳಲ್ಲಿ ಹಾಗೂ ಅವುಗಳ ಅಧೀನದಲ್ಲಿರುವ ಸಂಸ್ಥೆಗಳ ಸಿಬ್ಬಂದಿ
* ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾರ್ವಜನಿಕ ಸಂಸ್ಥೆಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಕಚೇರಿ, ಸ್ವಾಯತ್ತ ಸಂಸ್ಥೆ ಅಥವಾ ಅವುಗಳ ಅಧೀನದಲ್ಲಿರುವ ಸ್ಥಳೀಯ ಸಂಸ್ಥೆಗಳಲ್ಲಿ, ಕಚೇರಿಗಳಲ್ಲಿನ ಸಿಬ್ಬಂದಿ (ಬಹು ಕಾರ್ಯೋದ್ದೇಶದ ಸಿಬ್ಬಂದಿ, 4ನೇ ದರ್ಜೆಯ ನೌಕರರು, ಗ್ರೂಪ್ ಡಿ ನೌಕರರನ್ನು ಹೊರತುಪಡಿಸಿ).


ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಸಿಹಿಸುದ್ದಿ; ಮತ್ತೆ ಆಧಾರ್ ಸಂಖ್ಯೆ ಜೋಡಣೆಗೆ ದಿನಾಂಕ ವಿಸ್ತರಣೆ


ನೀವು ಫಲಾನುಭವಿಗಳೇ ಎಂಬುದನ್ನು ಪರೀಕ್ಷಿಸಲು ಹೀಗೆ ಮಾಡಿ:
* ಪಿಎಂ ಕಿಸಾನ್ ಅಧಿಕೃತ ಜಾಲತಾಣಕ್ಕೆ (https://pmkisan.gov.in) ಭೇಟಿ ನೀಡಿ.
* Farmers corner ಅಡಿಯಲ್ಲಿ Beneficiary List ಕ್ಲಿಕ್ ಮಾಡಿ.
* ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್, ಹಳ್ಳಿಯನ್ನು ಆಯ್ಕೆ ಮಾಡಿ.
* ಆನಂತರ, Get Report ಟ್ಯಾಬ್ ಒತ್ತಿ.

PM Kisan Registration: ಕಿಸಾನ್ ಯೋಜನೆಗೆ ನೋಂದಣಿ ಹೇಗೆ?
PM Kisan Registration: ಕಿಸಾನ್ ಯೋಜನೆಗೆ ನೋಂದಣಿ ಹೇಗೆ?

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ