PM Kisan Samman Nidhi: ಈ ದಿನ ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಜಮಾ!

(PM Kisan Samman Nidhi:) ನವದೆಹಲಿ: ದೇಶದ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) ವಿಶ್ವದ ಅತಿದೊಡ್ಡ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (DBT) ಯೋಜನೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಯೋಜನೆ ಆರಂಭವಾಗಿ ಆರು ವರ್ಷಗಳಿಗಿಂತ ಹೆಚ್ಚು ಅವಧಿ ಕಳೆದಿದ್ದು, ಇದುವರೆಗೆ 11 ಕೋಟಿಗೂ ಅಧಿಕ ರೈತರು ಇದರ ಪ್ರಯೋಜನ ಪಡೆದಿದ್ದಾರೆ. ಸದ್ಯ ದೇಶಾದ್ಯಂತ ಸುಮಾರು 9.46 ಕೋಟಿ ರೈತರು ಯೋಜನೆಯ ಸಕ್ರಿಯ ಫಲಾನುಭವಿಗಳಾಗಿದ್ದಾರೆ.

ಯೋಜನೆಯಡಿ ಕೇಂದ್ರ ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ರೂಪಾಯಿಯನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತದೆ. ಈವರೆಗೆ ಒಟ್ಟು 22 ಕಂತುಗಳನ್ನು ಬಿಡುಗಡೆ ಮಾಡಲಾಗಿದ್ದು, ಕೊನೆಯ ಕಂತು 2026ರ ಮಾರ್ಚ್ 13ರಂದು ಬಿಡುಗಡೆಯಾಗಿದೆ. ಇದೀಗ 23ನೇ ಕಂತು 2026ರ ಜೂನ್ ಅಥವಾ ಜುಲೈ ತಿಂಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ದೇಶದ ವಿವಿಧ ರಾಜ್ಯಗಳಲ್ಲಿ ಲಕ್ಷಾಂತರ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದು, ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಫಲಾನುಭವಿಗಳಿದ್ದಾರೆ. ಅಲ್ಲಿ 2.18 ಕೋಟಿ ರೈತರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ 90 ಲಕ್ಷ, ಮಧ್ಯಪ್ರದೇಶದಲ್ಲಿ 82 ಲಕ್ಷ, ಬಿಹಾರದಲ್ಲಿ 73 ಲಕ್ಷ ಹಾಗೂ ರಾಜಸ್ಥಾನದಲ್ಲಿ 66 ಲಕ್ಷ ರೈತರು ಫಲಾನುಭವಿಗಳಾಗಿದ್ದಾರೆ. ಕರ್ನಾಟಕದಲ್ಲೂ ಸುಮಾರು 42ರಿಂದ 45 ಲಕ್ಷ ರೈತರು ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ರಾಜ್ಯವು ಅಗ್ರ ಫಲಾನುಭವಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಪಿಎಂ ಕಿಸಾನ್ ಯೋಜನೆಗೆ ಸ್ವಂತ ಕೃಷಿ ಜಮೀನು ಹೊಂದಿರುವ ಯಾವುದೇ ಭಾರತೀಯ ರೈತರು ಅರ್ಹರಾಗಿರುತ್ತಾರೆ. ಆದರೆ, ಒಂದೇ ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಯೋಜನೆಯ ಲಾಭ ಸಿಗುತ್ತದೆ. ಕುಟುಂಬದ ಇಬ್ಬರ ಹೆಸರಲ್ಲಿ ಜಮೀನು ಇದ್ದರೂ ಒಬ್ಬರಿಗೆ ಮಾತ್ರ ನೆರವು ದೊರೆಯುತ್ತದೆ. ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, ಪಿಂಚಣಿದಾರರು, ವೃತ್ತಿಪರರು, ಶಾಸಕರು ಹಾಗೂ ಸಂಸದರು ಈ ಯೋಜನೆಗೆ ಅರ್ಹರಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

PM Kisan Samman Nidhi: ಈ ದಿನ ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಜಮಾ!
PM Kisan Samman Nidhi: ಈ ದಿನ ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಜಮಾ!

ಇತ್ತೀಚಿನ ಜನಪ್ರಿಯ ಸುದ್ದಿಗಳು (PM Kisan Samman Nidhi:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?