pm kisan: ಪಿಎಂ ಕಿಸಾನ್ ಯೋಜನೆ: ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ

0
19001

(pm kisan) ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿತಂದಿದೆ. ಈ ಯೋಜನೆಯಲ್ಲಿ ಅರ್ಹ ರೈತರ ಖಾತೆಗೆ 2000 ರೂ ಗಳನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುತ್ತದೆ. ಇದೀಗ 17 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದು, ಈ ತಿಂಗಳ ಕೊನೆ ಅಥವಾ ಮೇ ತಿಂಗಳಿನಲ್ಲಿ ಜಮಾ ಆಗಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಈ ಸರ್ಕಾರಿ ಯೋಜನೆಗೆ ಮುಗಿಬಿದ್ದ ಜನ


ಆದರೆ, ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಜಮಾ ಆಗಬೇಕಾದರೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹಾಗೆಯೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತಿನ ಹಣಕ್ಕೆ ಯಾರು ಅರ್ಹರು, ಯಾರು ಅನರ್ಹರು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಅರ್ಹ ಪಟ್ಟಿಯನ್ನು ಈ ರೀತಿ ಚೆಕ್ ಮಾಡಿ:
* ಮೊದಲಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.(https://pmkisan.gov.in/)
* ನಂತರ ಫಲಾನುಭವಿಗಳ ಆಯ್ಕೆ ಮೇಲೆ ಕ್ಲಿಕ್ ಮಾಡಿ.
* ನಂತರ ಕಾಣುವ ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ತಾಲೂಕು, ಗ್ರಾಮವನ್ನು ಆಯ್ಕೆ ಮಾಡಿ.
* ನಂತರ ಪೇಜ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ 17 ನೇ ಕಂತಿನ ಹಣ ಜಮಾ ಆಗಲಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಇನ್ನು ಅನರ್ಹರ ಪಟ್ಟಿಯನ್ನು ಹೀಗೆ ಚೆಕ್ ಮಾಡಿ:
* ಮೊದಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.(https://pmkisan.gov.in/VillageDashboard_Portal.aspx)
* ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮವನ್ನು ಆಯ್ಕೆ ಮಾಡಿ,
* ನಂತರ ಸಬ್ಮಿಟ್ ಎನ್ನವ ಆಯ್ಕೆಯನ್ನು ಕ್ಲಿಕ್ ಮಾಡಿ.
* ನಂತರ Aadhaar authentication status ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ
* ನಂತರ ಪೇಜ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅನರ್ಹರ ಪಟ್ಟಿ ಸಿಗಲಿದೆ.


ಇದನ್ನೂ ಓದಿ: ಈ ಜಿಲ್ಲೆಯ ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ


ಒಂದು ವೇಳೆ ಅನರ್ಹರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಅದು ಇ-ಕೆವೈಸಿ ಮಾಡಿಸದೇ ಇರುವ ಕಾರಣ ಅಥವಾ ನೀವು ನೀಡಿರುವ ದಾಖಲೆಗಳ ವ್ಯತ್ಯಾಸದಲ್ಲಿ ಆಗಿರಬಹುದು. ಅನರ್ಹರ ಪಟ್ಟಿಯಲ್ಲಿ ಇರುವ ಕಾರಣ ತಿಳಿದು ಸರಿಪಡಿಸಬಹುದಾಗಿದೆ.

pm kisan: ಪಿಎಂ ಕಿಸಾನ್ ಯೋಜನೆ: ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ
pm kisan: ಪಿಎಂ ಕಿಸಾನ್ ಯೋಜನೆ: ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ