PM KISAN SCHEME: ಪಿಎಂ ಕಿಸಾನ್ (PM KISAN) ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿನ ಹಣ ನಿನ್ನೆ ಅಂದರೆ ನವೆಂಬರ್ 15 ರಂದು ಬಿಡುಗಡೆ ಆಗಿದೆ. ಇದು ಕೃಷಿಕರ ಬೇಸಾಯಕ್ಕೆ ಧನಸಹಾಯವಾಗಿ ಸರ್ಕಾರ ಆರಂಭಿಸಿರುವ ಯೋಜನೆಯಾಗಿದೆ.
ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್ ನ ಖೂಂಟಿಯಲ್ಲಿ (Khunti, Jharkhand) ನಿನ್ನೆ ಹೊಸ ಕಂತಿನ ಹಣ ಬಿಡುಗಡೆಯಾಗಿರುವುದನ್ನು ಪ್ರಕಟಿಸಿದ್ದು, ಎಂಟು ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ 2,000 ರೂ ಹಣ ವರ್ಗಾವಣೆ ಆಗಿದೆ. ಬಹುತೇಕ ಮಂದಿಯ ಖಾತೆಗೆ ಹಣ ಬಂದಿದೆ. ಸರ್ಕಾರ 15ನೇ ಕಂತಿಗೆ ಒಟ್ಟು 18,000 ಕೋಟಿ ರೂ ಹಣ ವೆಚ್ಚ ಮಾಡಿದೆ. ಇಲ್ಲಿಯವರೆಗೆ ಎಲ್ಲಾ 15 ಕಂತುಗಳಿಂದ ಒಟ್ಟು ಹಣ 2.75 ಲಕ್ಷ ಕೋಟಿ ರೂ ಆಗಿದೆ. ವರ್ಷಕ್ಕೆ ತಲಾ 2,000 ರೂಗಳ 3 ಕಂತುಗಳಂತೆ 6,000 ರೂ ಹಣವನ್ನು ಅರ್ಹ ರೈತರ ಖಾತೆಗಳಿಗೆ ಸರ್ಕಾರ ನೇರವಾಗಿ ವರ್ಗಾವಣೆ ಮಾಡುತ್ತದೆ. ಈ 15ನೇ ಕಂತಿನ ಹಣ ಇನ್ನೂ ಬಂದಿಲ್ಲ ಎಂದು ಬಹಳಷ್ಟು ಮಂದಿ ಹೇಳುತ್ತಿರುವುದುಂಟು.
ಪಿಎಂ ಕಿಸಾನ್ (PM KISAN SCHEME: ) ಯೋಜನೆಯ (PM Kisan Samman Nidhi Yojana) 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಅದಕ್ಕೆ ಕಾರಣಗಳಿವು:
* ಯೋಜನೆಗೆ ಇನ್ನೂ ನೊಂದಾವಣಿ ಆಗಿಲ್ಲದೇ ಇರಬಹುದು.
* ಇಕೆವೈಸಿ ಆಗಿಲ್ಲದೇ ಇರಬಹುದು, ಅಥವಾ ಸರಿಯಾಗಿ ಮಾಡಿಲ್ಲದೇ ಇರಬಹುದು.
* ಯೋಜನೆಯ ಅರ್ಹತಾ ಮಾನದಂಡ ಒದಗಿಸಲು ವಿಫಲವಾಗಿರಬಹುದು.

ಇದನ್ನೂ ಓದಿ; ಹಬ್ಬದ ಕೊನೆಯಲ್ಲಿ ಏರಿದ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ಇವತ್ತಿನ ದರಪಟ್ಟಿ
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪಿಎಂ ಕಿಸಾನ್ ಯೋಜನೆಯ ಅಧಿಕೃತ ಪೋರ್ಟಲ್ ಗೆ ಹೋಗಿ (https://pmkisan.gov.in). ಅಲ್ಲಿ ಮುಖಪುಟ ಆರಂಭದಲ್ಲಿ ಒಂದು ಪಾಪ್ ಅಪ್ ಬರುತ್ತದೆ. ಅದರಲ್ಲಿ ಇಕೆವೈಸಿ, ನಿಮ್ಮ ಸ್ಟೇಟಸ್ ತಿಳಿಯಲು ಹಾಗೂ ಪಿಎಂ ಕಿಸಾನ್ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಲು ಕ್ಯೂ ಆರ್ ಕೋಡ್ ಗಳು ಕಾಣುತ್ತವೆ. ನಿಮಗೆ ಅಗತ್ಯವಿದ್ದಲ್ಲಿ ಅದನ್ನು ಸ್ಕ್ಯಾನ್ ಮಾಡಿ ಮಾಹಿತಿ ಪಡೆಯಬಹುದು.
ಹಾಗೆಯೇ, ಪಾಪ್ ಅಪ್ ಮುಚ್ಚಿ, ಪಿಎಂ ಕಿಸಾನ್ ವೆಬ್ ಸೈಟ್ ನ ಮುಖಪುಟದಲ್ಲಿ ಸ್ವಲ್ಪ ಕೆಳಗೆ ಸ್ಕ್ರಾಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಸೆಕ್ಷನ್ ನಲ್ಲಿ ವಿವಿಧ ಸೇವೆಗಳ ಟ್ಯಾಬ್ ಗಳನ್ನು ನೋಡಬಹುದು. ಅದರಲ್ಲಿ ಇಕೆವೈಸಿ ಮಾಡುವುದು, ಫಲಾನುಭವಿಗಳ ಪಟ್ಟಿ ವೀಕ್ಷಿಸುವುದು, ನೊಂದಣಿ ಸ್ಟೇಟಸ್ ನೋಡುವುದು ಹೀಗೆ ಹಲವು ಆಯ್ಕೆಗಳಿವೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 15.11.2023
ನಿಮಗೆ ಯಾವುದಾದರೂ ಅನುಮಾನ ಇದ್ದಲ್ಲಿ ಹೆಲ್ಪ್ ಡೆಸ್ಕ್ ಟ್ಯಾಬ್ ಕ್ಲಿಕ್ ಮಾಡಬಹುದು. ಅದರಲ್ಲಿ ನಿಮ್ಮ ನೊಂದಣಿ ನಂಬರ್ ಮೂಲಕ ನಿಮ್ಮ ದೂರು ಅಥವಾ ಅನುಮಾನವನ್ನು ವ್ಯಕ್ತಪಡಿಸಬಹುದು. ಅದಕ್ಕೆ ಸೂಕ್ತ ಸಮಜಾಯಿಷಿ ಅಥವಾ ಉತ್ತರ ಅಥವಾ ಪರಿಹಾರ ಸಿಗುವ ಸಾಧ್ಯತೆ ಇರುತ್ತದೆ.
ಪ್ರಮುಖ ಸುದ್ದಿಗಳನ್ನು ಓದಿ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ